ಜಿಬಿಎ ಚುನಾವಣೆ ಕಾಂಗ್ರೆಸ್‌ ಸಿದ್ಧತೆ; ಟಿಕೆಟ್ ಆಕಾಂಕ್ಷಿಗಳ ಅರ್ಜಿ ಬಿಡುಗಡೆ; ಯಾರಿಗೆಷ್ಟು ಶುಲ್ಕ?

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗ್ರೇಟರ್‌ ಬೆಂಗಳೂರು ಪಾಲಿಕೆ ಚುನಾವಣೆ ಕಾಂಗ್ರೆಸ್‌ ಟಿಕೆಟ್ ಆಕಾಂಕ್ಷಿ ಅರ್ಜಿ ಬಿಡುಗಡೆ ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಗ್ರೇಟರ್‌ ಬೆಂಗಳೂರು ಚುನಾವಣೆ ಕುರಿತು ಮಾಹಿತಿ ನೀಡಿದ ಡಿ ಕೆ ಶಿವಕುಮಾರ್ ಅವರು, ಮೀಸಲಾತಿ ನಿಗದಿಯಾದ ಮೇಲೆ ಜಿಬಿಎ ಚುನಾವಣೆಗೆ ತಯಾರಿ ನಡೆಸಿದರಾಯಿತು ಎಂದುಕೊಂಡರೆ ನೀವುಗಳು ಗೆಲ್ಲಲು ಸಾಧ್ಯವಿಲ್ಲ. ‌ಏಕೆಂದರೆ ನೀವು ಎಷ್ಟೇ ದೊಡ್ಡ ನಾಯಕರಾದರೂ ಸಹ ಎಲ್ಲಾ ನಿಗದಿಯಾದಾಗ ಮಾಡುತ್ತೇನೆ ಎಂದರೆ ಈ ಡಿ.ಕೆ.ಶಿವಕುಮಾರ್ ನಿಮ್ಮನ್ನು ಗುರುತಿಸುವುದಿಲ್ಲ. ಇಂದಿನಿಂದ ಆಕಾಂಕ್ಷಿ‌ ಅಭ್ಯರ್ಥಿಗಳ ಅರ್ಜಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.

Application forms for GBA election aspirants available DK Shivakumar

ಸಾಮಾನ್ಯ ಅಭ್ಯರ್ಥಿಗಳಿಗೆ 50 ಸಾವಿರ, ಪರಿಶಿಷ್ಟ ಅಭ್ಯರ್ಥಿಗಳಿಗೆ 25 ಸಾವಿರ ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದ್ದು, ಮಹಿಳೆಯರಿಗೆ 25 ಸಾವಿರ ರೂ. ಶುಲ್ಕ ಇರಲಿದೆ. ವಿದ್ಯಾರ್ಥಿ ಚುನಾವಣೆ ನಡೆಸಲು ಹೊಸ ಸಮಿತಿ ರಚನೆ ಮಾಡಲಾಗಿದೆ. ಹಣ ಕಟ್ಟಡ ನಿಧಿಗೆ ಹೋಗಲಿದೆ. ಏಕೆಂದರೆ ಜಿಲ್ಲಾ ಕಚೇರಿ ನಿರ್ಮಾಣಕ್ಕೆ 20 ಕೋಟಿ, ರಾಜ್ಯ ಕಚೇರಿ ನಿರ್ಮಾಣಕ್ಕೆ 60 ಕೋಟಿ ‌ಖರ್ಚಾಗಲಿದೆ.‌ ತಾಲ್ಲೂಕು ಕಚೇರಿಗಳ ನಿರ್ಮಾಣಕ್ಕೂ ಕೆಪಿಸಿಸಿಯಿಂದ ಹಣ ನೀಡಬೇಕಲ್ಲವೇ ಎಂದರು.

ಎಂಎಲ್ ಎ ಚುನಾವಣೆ ವೇಳೆ 2 ಲಕ್ಷ ಹಣ ನಿಗದಿ ಮಾಡಲಾಗಿತ್ತು. ಇದರಿಂದ 20 ಕೋಟಿ ಹಣ ಸಂಗ್ರಹವಾಯಿತು.‌ ಇದರಿಂದ ಪಕ್ಷದ ಪರವಾಗಿ ಜಾಹಿರಾತು ನೀಡಲು ಸಾಧ್ಯವಾಯಿತು. ಮಹಿಳೆಯರಿಗೆ ರಿಯಾಯಿತಿ ಇಲ್ಲ.‌ ಒಂದು ಚುನಾವಣೆಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ತಿಳಿದಿದೆ ಎಂದರು. ಮಹಿಳೆಯರಿಗೆ ಹಾಗೂ ಓಬಿಸಿಗಳಿಗೆ ರಿಯಾಯಿತಿ ನೀಡಿ ಎಂದು ಸಭಿಕರು ಕೂಗಿದ ವೇಳೆಯಲ್ಲಿ, ಈಗಾಗಲೇ ಮಹಿಳೆಯರಿಗೆ ತಿಂಗಳಿಗೆ ಎರಡು ಸಾವಿರ, ಉಚಿತ ‌ಬಸ್ ನೀಡಲಾಗುತ್ತಿದೆ. ಈ ತೀರ್ಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾನು ಸಹ ಓಬಿಸಿ, ಒಕ್ಕಲಿಗರು ಓಬಿಸಿ ಎಂದು ತಿಳಿದಿದೆಯೇ? ಲಿಂಗಾಯತರು ಓಬಿಸಿ, ಆದಾಯ ಇಲ್ಲದ ಬ್ರಾಹ್ಮಣರು ಓಬಿಸಿ ಎಂದರು.

ಸಿಎಂ ಹಾಗೂ ಜಾರ್ಜ್ ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ

ಇದೇ ವೇಳೆ ವೇದಿಕೆಯಲ್ಲಿದ್ದ ಮುಖ್ಯಮಂತ್ರಿ ‌ಸಿದ್ದರಾಮಯ್ಯ ಅವರು ಮಹಿಳೆಯರಿಗೆ 25 ಸಾವಿರ ಇರಲಿ ಎಂದರು. ಆಗ ಡಿಸಿಎಂ ಶಿವಕುಮಾರ್ ಅವರು ಸಿಎಂ ಹಾಗೂ ಜಾರ್ಜ್ ಹೇಳುತ್ತಿದ್ದಾರೆ ಎಂದು ಮಹಿಳೆಯರಿಗೆ 25 ಸಾವಿರ ನಿಗದಿ ಮಾಡಲಾಗುತ್ತಿದೆ. ನಿಮ್ಮ ದುಡ್ಡು ನನಗೆ ಬೇಡ ಮುಂದಿನ ಜನವರಿ 15 ನೇ ತಾರೀಕಿನ ಒಳಗೆ ಅರ್ಜಿ ಹಾಕಬೇಕು. 369 ವಾರ್ಡ್ ಗಳಿಂದ ಶೇ.50 ರಷ್ಟು ಮೀಸಲಾತಿ ನೀಡಲಾಗಿದೆ. ಒಂದೊಂದು ಕ್ಷೇತ್ರದಿಂದ 10 ಮಂದಿ‌‌ ಮಹಿಳೆಯರಾದರೂ ಅರ್ಜಿ ಸಲ್ಲಿಕೆ ಮಾಡಬೇಕು. ಯಾರೇ ಆದರೂ ಚೆನ್ನಾಗಿ ಕೆಲಸ ಮಾಡಿರಬೇಕು. ಅಂತಹವರಿಗೆ ಪ್ರಾಮುಖ್ಯತೆ ನೀಡಲಾಗುವುದು ಎಂದರು.

ಯಾರು ಬೂತ್ ಮಟ್ಟದಲ್ಲಿ ಕೆಲಸ ಮಾಡುತ್ತಾರೋ ಅವರಿಗೆ ಅವಕಾಶ. ಸಿದ್ದರಾಮಯ್ಯ, ಶಿವಕುಮಾರ್ ಹಿಂದೆ ತಿರುಗಿದರೆ ಅವಕಾಶವಿಲ್ಲ‌. ಕೆಲಸ ಮಾಡಿದವರಿಗೆ ಹೆಚ್ಚು ಆದ್ಯತೆ ಎಂದರು. ವಿದ್ಯಾರ್ಥಿ ಚುನಾವಣೆ ಹೇಗೆ ನಡೆಸಬೇಕು ಎಂದು ತೀರ್ಮಾನಿಸಲು ಹೊಸ ಸಮಿತಿ ರಚನೆ ಮಾಡಲಾಗಿದೆ. ಇದರಿಂದ ಹೊಸ ನಾಯಕರನ್ನು ಬೆಳಕಿಗೆ ತರಲಾಗುವುದು. ಶರಣ ಪ್ರಕಾಶ್ ಪಾಟೀಲ್, ಡಾ.ಸುಧಾಕರ್, ಸಲೀಂ ಅಹಮದ್, ಪುಟ್ಟಣ್ಣ, ಎನ್ ಎಸ್ ಯುಐ ಮಾಜಿ ಅಧ್ಯಕ್ಷರು, ಯುವ ಕಾಂಗ್ರೆಸ್ ಅಧ್ಯಕ್ಷರು ಹೀಗೆ ಒಂಬತ್ತು ಜನರ ಸಮಿತಿ ರಚನೆ ಮಾಡಲಾಗಿದೆ. ಇವರು ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಲಿದ್ದಾರೆ. ನಾವುಗಳು ಸಹ ಈ ಹಿಂದೆ ವಿದ್ಯಾರ್ಥಿ ಚುನಾವಣೆಗಳ ಮೂಲಕವೇ ರಾಜಕೀಯಕ್ಕೆ ಬಂದವರು. ಆನಂತರ ಗಲಾಟೆಗಳು ಹೆಚ್ಚಾದ ಕಾರಣಕ್ಕೆ ರಂಗನಾಥ್ ಅವರು ಇದನ್ನು ನಿಲ್ಲಿಸಿಬಿಟ್ಟರು. ಈಗ ಇದರ ಅವಶ್ಯಕತೆ ಹೆಚ್ಚು ಕಾಣುತ್ತಿದೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+