ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ, ಅರ್ಜಿ ಆಹ್ವಾನ

ಬೆಂಗಳೂರು, ಜೂನ್ 02 : ಕಲೆ, ಸಾಂಸ್ಕೃತಿಕ, ಕ್ರೀಡೆ, ಸಮಾಜ ಸೇವೆ, ಸಂಗೀತ ಇತ್ಯಾದಿ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಂದ ರಾಷ್ಟ್ರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಭಾರತದಲ್ಲಿ ನೆಲೆಸಿರುವ ಮತ್ತು ಮೇಲ್ಕಂಡ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆಯನ್ನು ಮಾಡಿರುವ 5 ರಿಂದ 18 ವರ್ಷದೊಳದಿನ ಅಂದರೆ ದಿನಾಂಕ: 2000 ಆಗಸ್ಟ್ 1 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2018-19ನೇ ಸಾಲಿನ ರಾಷ್ಟ್ರ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು.

ಈ ರಾಷ್ಟ್ರ ಮಟ್ಟದ ಪ್ರಶಸ್ತಿಯು ಒಂದು ಚಿನ್ನದ ಪದಕ, 20,000 ರು. ನಗದು, 10,000 ರು. ಮೌಲ್ಯದ ಪುಸ್ತಕ ವೋಚರ್, ಪ್ರಶಸ್ತಿಪತ್ರ ಹಾಗೂ ಪ್ರತಿ ರಾಜ್ಯ/ಕೇಂದ್ರಾಳಿತ ಪ್ರದೇಶಕ್ಕೆ ಒಂದು ಬೆಳ್ಳಿ ಪದಕ, 10,000 ರು. ನಗದು, 3,000 ರು. ಮೌಲ್ಯದ ಪುಸ್ತಕ ವೋಚರ್ ಹಾಗೂ ಪ್ರಶಸ್ತಿಪತ್ರ ಒಳಗೊಂಡಿರುತ್ತದೆ.

Application invited by children for National Award

ಈ ಪ್ರಶಸ್ತಿಗೆ ಆಯ್ಕೆಯಾಗುವಂತಹ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿರತಕ್ಕದ್ದು, ಅಸಾಧಾರಣವೆಂದು ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸುವುದು. ಮಕ್ಕಳ ವಯಸ್ಸಿನ ಪ್ರಮಾಣಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು.

ನಿಗದಿತ ಅರ್ಜಿ ನಮೂನೆಯು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, #5, 3ನೇ ಮಹಡಿ, ಪಿಆರ್ ಪ್ಲಾಜಾ, ವಾಟಾಳ್ ನಾಗರಾಜ್ ರಸ್ತೆ, ಓಕಳೀಪುರ, ಬೆಂಗಳೂರು-560 021. ಇಲ್ಲಿಂದ ಪಡೆದು, ಜೂನ್ 30ರೊಳಗೆ ಸಲ್ಲಿಸಬೇಕು.

Application invited by children for National Award

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-23522176, 23522175 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+