ಕೊಪ್ಪಳ : ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಸಲ್ಲಿಸಿ
ಕೊಪ್ಪಳ, ಫೆ. 12 : ಕೊಪ್ಪಳ ಜಿಲ್ಲೆಯ ಗಂಗಾವತಿ ಮತ್ತು ಯಲಬುರ್ಗಾ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 20.
ಗಂಗಾವತಿ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿಯು 2015ರ ಮಾರ್ಚ್ 10 ಕ್ಕೆ ಮತ್ತು ಯಲಬುರ್ಗಾ ತಾಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯ ಅವಧಿಯು ಮಾರ್ಚ್ 12 ಕ್ಕೆ ಮುಕ್ತಾಯವಾಗಲಿದೆ. ಆದ್ದರಿಂದ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ಕಾನೂನು ಅಧಿಕಾರಿಗಳ ನೇಮಕಾತಿ ಮತ್ತು ಸೇವಾ ಷರತ್ತುಗಳ ನಿಯಮಗಳ ಅನ್ವಯ ಹುದ್ದೆಗಳನ್ನು ಭರ್ತಿ ಮಾಡಲು ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅಧಿಸೂಚನೆ ಹೊರಡಿಸಿದ್ದಾರೆ. ಅರ್ಜಿ ಸಲ್ಲಿಸಲು ಫೆ.20 ಕೊನೆಯ ದಿನವಾಗಿದೆ. [ನೇಮಕಾತಿ ಆದೇಶ ಇಲ್ಲಿದೆ]
ಅರ್ಹತೆ : ಏಳು ವರ್ಷಗಳ ಕಾಲ ವಕೀಲ ವೃತ್ತಿ ಪೂರೈಸಿದ ಅರ್ಹ ವಕೀಲರು ತಮ್ಮ ಪೂರ್ಣ ಹಾಗೂ ಸೇವಾ ವಿವರಗಳೊಂದಿಗೆ ಲಿಖಿತ ಅರ್ಜಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.[ಉದ್ಯೋಗದ ವಿವರಗಳು ಇಲ್ಲಿವೆ ನೋಡಿ]
ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಯನ್ನು ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿಗೆ ಫೆ. 20ರ ಸಂಜೆ 5-30ರೊಳಗೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಆರ್.ಆರ್. ಜನ್ನು ಅವರು ಪ್ರಕಟಣೆ ಹೊರಡಿಸಿದ್ದಾರೆ.












Click it and Unblock the Notifications