ಡೆಹ್ರಾಡೂನ್ ಮಿಲಿಟರಿ ಶಾಲೆಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉತ್ತರಾಖಂಡ ರಾಜ್ಯದ ಡೆಹ್ರಾಡೂನ್‍ನಲ್ಲಿರುವ ಭಾರತೀಯ ರಾಷ್ಟ್ರೀಯ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಬೆಂಗಳೂರು, ಫೆಬ್ರವರಿ 21: ಉತ್ತರಾಖಂಡ ರಾಜ್ಯದ ಡೆಹರಡೂನ್‍ನಲ್ಲಿರುವ ಭಾರತೀಯ ರಾಷ್ಟ್ರೀಯ ಮಿಲಿಟರಿ ಕಾಲೇಜ್ ನಲ್ಲಿ 8ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಅಹ್ವಾನಿಸಲಾಗಿದೆ.
ಮಿಲಿಟರಿ ಶಾಲೆಯಲ್ಲಿ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ ಬಾಲಕರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಪ್ರವೇಶ ಪರೀಕ್ಷೆ ಬೆಂಗಳೂರು ಕೇಂದ್ರದಲ್ಲಿ ಜೂನ್ 1 ಹಾಗೂ 2 ರಂದು ನಡೆಯಲಿದೆ. 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಾಗಿರುತ್ತಾರೆ. ಪ್ರವೇಶ ಪರೀಕ್ಷೆ ಬಯಸುವವರು ದಿನಾಂಕ 01-01-2018 ರಂತೆ 11 ವರ್ಷದಿಂದ 13 ವರ್ಷದೊಳಗಿನವರಾಗಿರಬೇಕು. [ಭಾರತ ವಿಮಾನ ನಿಲ್ದಾಣಗಳ ಪ್ರಾಧಿಕಾರದಲ್ಲಿ 147 ಹುದ್ದೆಗಳು ಖಾಲಿ ಇವೆ]
ವಿವರಣ ಪತ್ರ ಹಾಗೂ ಹಳೇ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು, ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58 ಫಿಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು-560025 ಇವರ ಹೆಸರಿಗೆ ರೂ.550 ಡಿಮಾಂಡ್ ಡ್ರಾಪ್ಟ್ ಸಲ್ಲಿಸಿ ಪಡೆಯಬಹುದು.
ಭರ್ತಿ ಮಾಡಿದ ಅರ್ಜಿಯನ್ನು ದ್ವಿಪ್ರತಿಯಲ್ಲಿ ಮಾ.31 ರೊಳಗೆ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಬೆಂಗಳೂರು ವಿಳಾಸಕ್ಕೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಇಲಾಖೆ, ಬೆಂಗಳೂರು ದೂ. ಸಂಖ್ಯೆ 080-25589459 ಮೂಲಕ ಕಛೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು. [ಇಸ್ರೋದಲ್ಲಿ ಇಂಜಿನಿಯರ್, ವಿಜ್ಞಾನಿಗಳಿಗೆ ಉದ್ಯೋಗಾವಕಾಶ]












Click it and Unblock the Notifications