ಉದ್ಯೋಗಿನಿ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನ

Posted By:
Subscribe to Oneindia Kannada

ಬೆಂಗಳೂರು, ಜೂ 21: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಈ ಸೌಲಭ್ಯ ಪಡೆಯಲಿಚ್ಫಿಸುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ಮಹಿಳೆಯರು ಹಾಗೂ ಸ್ತ್ರೀ ಶಕ್ತಿ ಗುಂಪಿನ ಸದಸ್ಯರುಗಳಿಂದ ಅರ್ಜಿ ಆಹ್ವಾನಿಸಿದೆ.

ಉದ್ಯೋಗಿನಿ ಯೋಜನೆಯಡಿ ನಿಗಮವು, ಬ್ಯಾಂಕ್ ಮೂಲಕ ಗರಿಷ್ಠ ಒಂದು ಲಕ್ಷದವರೆಗೆ ಸಹಾಯಧನ ಒದಗಿಸಲಿದ್ದು, ಕೌಟುಂಬಿಕ ವಾರ್ಷಿಕ ಅದಾಯ 40 ಸಾವಿರ ಮೀರಿರಬಾರದು. [ಸಿದ್ದರಾಮಯ್ಯ ಸರಕಾರದ 10 ಜನಪ್ರಿಯ ಯೋಜನೆಗಳು]

18 ರಿಂದ 45 ವರ್ಷ ವಯೋಮಿತಿಯುಳ್ಳ ಎಲ್ಲಾ ವರ್ಗದ ಮಹಿಳೆಯರು, ಅರ್ಜಿ ಸಲ್ಲಿಸಬಹುದಾಗಿದೆ. ವಿಧವೆಯರು, ಅಂಗವಿಕಲರು ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಮಹಿಳೆಯರಿಗೆ ಆದ್ಯತೆ ನೀಡಲಾಗುವುದು.

Application invited under Udyogini Scheme

ಜಿಲ್ಲೆಯ ಆಯಾ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿಯಿಂದ ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 15 ರೊಳಗೆ ಸಲ್ಲಿಸಲು ಕೋರಿದೆ. [ಮೋದಿ ಕನಸುಗಳು: ಸ್ವಚ್ಛಭಾರತದಿಂದ ಡಿಜಿಟಲ್ ಇಂಡಿಯಾ ತನಕ]

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಂ:5, 3ನೇ ಮಹಡಿ, ಪಿ.ಆರ್. ಪ್ಲಾಜಾ, ವಾಟಾಳ್ ನಾಗರಾಜ್ ರಸ್ತೆ, ಓಕಳೀಪುರಂ, ಬೆಂಗಳೂರು-21, ದೂರವಾಣಿ ಸಂಖ್ಯೆ: 9242213527 ನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು, ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಯೋಜನೆಯಡಿಯಲ್ಲಿ ಬೇಕರಿ, ಮೀನು ಮಾರಾಟ, ದಿನಸಿ ಅಂಗಡಿ, ಟೈಲರಿಂಗ್, ಉಪ್ಪಿನಕಾಯಿ ಮಾರಾಟ, ಎಸ್ ಟಿಡಿ ಬೂತ್, ಜಾಬ್ ಟೈಪಿಂಗ್, ಬ್ಯೂಟಿ ಪಾರ್ಲರ್, ಗಿಫ್ಟ್ ಶಾಪ್, ಅಗರಬತ್ತಿ ಮಾರಾಟ, ಕ್ಲಿನಿಕ್, ಜಿಮ್, ಸಿಹಿ ಅಂಗಡಿ, ಈಟ್ ಔಟ್, ಕಾಫಿ ಹಾಗೂ ಟೀ ಮಾರಾಟ ಮಹಿಳೆ, ಚಪ್ಪಲಿ ಮಾರಾಟ ಮಳಿಗೆ ಸೇರಿದಂತೆ 88ಕ್ಕೂ ಅಧಿಕ ಉದ್ಯೋಗಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ.

ಯೋಜನೆ ಬಗ್ಗೆ ಹೆಚ್ಚಿನ ವಿವರಗಳಿಗೆ ಅಧಿಕೃತ ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ

ಉದ್ಯೋಹಿನಿ ಯೋಜನೆಗೆ ಅರ್ಜಿ ಹಾಕಲು ಅರ್ಜಿ ನಮೂನೆ ಇಲ್ಲಿ ಡೌನ್ ಲೋಡ್ ಮಾಡಿಕೊಳ್ಳಿ

(ಒನ್ ಇಂಡಿಯಾ ಸುದ್ದಿ)

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Application invited under Udyogini SchemeApplication invited under Udyogini Scheme. Under this scheme, the maximum unit cost is Rs.1,00,000/-. Age limit for the beneficiary is 18-45 years and family income limit to avail this benefit is Rs.40,000/- per annum for all women including those belonging to SC/ST.
Please Wait while comments are loading...