ವಿದ್ಯಾರ್ಥಿಗಳ ಗಮನಕ್ಕೆ; ವಸತಿ ಶಾಲೆಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು, ಫೆ. 05: ಸಮಾಜ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಇಂದಿರಾಗಾಂಧಿ ವಸತಿ ಶಾಲೆಗಳಿಗೆ 6 ನೇ ತರಗತಿಗೆ ದಾಖಲಾತಿಗಾಗಿ 2020-21 ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದವರಿಂದ ದಿನಾಂಕ 24-02-2021 ರಂದು ಮಧ್ಯಾಹ್ನ 2-30 ರಿಂದ 4-30 ರವರೆಗೆ ನಡೆಸಲು ನಿಗದಿಪಡಿಸಲಾಗಿದೆ.
ಅಭ್ಯರ್ಥಿಗಳು ಒಂದು ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಲು ಸೂಚಿಸಿದೆ. ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ನೀಲಿ ಅಥವಾ ಕಪ್ಪು ಶಾಯಿಯ ಬಾಲ್‍ಪಾಯಿಂಟ್ ಪೆನ್ನನ್ನು ಮಾತ್ರ ಉಪಯೋಗಿಸಬೇಕು. ಪ್ರವೇಶ ಪತ್ರವನ್ನು ತಾವು ಅರ್ಜಿ ಸಲ್ಲಿಸಿದ ವಸತಿ ಶಾಲೆಯ ಪ್ರಾಂಶುಪಾಲರ ಮುಖಾಂತರ ಪಡೆದುಕೊಳ್ಳಬೇಕು. ದಿನಾಂಕ 15-2-2021 ರ ಬೆಳಿಗ್ಗೆ 11-00 ಗಂಟೆಯಿಂದ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.