ಶ್ರಮ ಶಕ್ತಿ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ!

ಬೆಂಗಳೂರು: ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ 2023 ಮತ್ತು 24ನೇ ಸಾಲಿನ ಶ್ರಮ ಶಕ್ತಿ ಯೋಜನೆ ಅಡಿ ಅಲ್ಪಸಂಖ್ಯಾತ ವರ್ಗದ ಕುಲ ಕಸುಬುದಾರರಿಗೆ ತರಬೇತಿ ನೀಡಿ, ಕಲಾತ್ಮಕ & ತಾಂತ್ರಿಕ ಕೌಶಲ್ಯ ವೃದ್ಧಿಸಿಕೊಂಡು ಅದೇ ಕಸುಬನ್ನು ಮುಂದುವರೆಸಲು ಹಾಗೂ ಸಣ್ಣ ವ್ಯಾಪಾರವನ್ನು ಪ್ರಾರಂಭಿಸಲು ಹಾಗೂ ಅಭಿವೃದ್ಧಿಗೊಳಿಸಲು ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಈ ಸೌಲಭ್ಯದ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯೋದಕ್ಕೆ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿಗಳನ್ನು ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸುವ ವೆಬ್‌ಸೈಟ್ ವಿಳಾಸ ಯಾವುದು? ಈ ಕುರಿತಾಗಿ ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

Applications called for beneficiary under Shrama Shakti scheme

ಅರ್ಜಿ ಸಲ್ಲಿಸಲು ವೆಬ್‌ಸೈಟ್ ವಿಳಾಸ

ಇನ್ನು ಸಾಲ ಸೌಲಭ್ಯ ಪಡೆಯಲು ಅರ್ಜಿದಾರರು ರಾಜ್ಯ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿರಬೇಕು. ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ವಯೋಮಿತಿ 18 ರಿಂದ 55 ವರ್ಷ ಒಳಗೆ ಇರಬೇಕು. ಎಲ್ಲಾ ಮೂಲಗಳಿಂದ ಕೌಟುಂಬಿಕ ವಾರ್ಷಿಕ ಆದಾಯ ರೂ. 3.50 ಲಕ್ಷ ಒಳಗೆ ಇರಬೇಕು. ಈ ಎಲ್ಲಾ ಅರ್ಗತೆ ಇರುವ ಆಸಕ್ತರು ವೆಬ್ ಸೈಟ್ ಲಿಂಗ್ ಆಗಿರುವ, https://kmdconline.karnataka.gov.in ನಲ್ಲಿ ಅರ್ಜಿಗಳನ್ನು ಸೆಪ್ಟೆಂಬರ್ 25ರೊಳಗೆ ಸಲ್ಲಿಸಬಹುದು.

ನೇರವಾಗಿ ಕಚೇರಿಯನ್ನು ಸಂಪರ್ಕಿಸಿ

ಅಲ್ಲದೆ ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ (ಕೇಂದ್ರಿಯ ವಿಭಾಗ), ಕೊಠಡಿ ಸಂಖ್ಯೆ ಎಫ್ ಎಫ್ -29/37, 1ನೇ ಮಹಡಿ, ಹಮೀದ್ ಷಾ ಕಾಂಪ್ಲೆಕ್ಸ್, ಹಲಸೂರು ಗೇಟ್ ಪೊಲೀಸ್ ಠಾಣೆ ಹತ್ತಿರ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು -02ಗೆ ಸಂಪರ್ಕಿಸಬಹುದು. ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Applications called for beneficiary under Shrama Shakti scheme

ಇದರ ಜೊತೆಗೆ ದೂರವಾಣಿ ಸಂಖ್ಯೆ: 080-22114815 ಸೇರಿದಂತೆ ಸಹಾಯವಾಣಿ ಸಂಖ್ಯೆ: 8277799990 (24/7) ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಕೇಂದ್ರಿಯ ವಿಭಾಗ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಮ್ಮ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಅರ್ಹ ಅಭ್ಯರ್ಥಿಗಳು ಯೋಜನೆಯ ಸದುಪಯೋಗ ಮಾಡಿಕೊಳ್ಳಲು ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+