ಏಕಲವ್ಯ ಪ್ರಶಸ್ತಿ ಮತ್ತು ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ, 2022 ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆ ತೋರಿರುವ ರಾಜ್ಯ ಪ್ರತಿಭಾವನ್ವಿತ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಹಿನ್ನೆಲೆ ಅರ್ಹ ಕ್ರೀಡಾಪಟುಗಳು ನಿಗದಿತ ನಮೂನೆಯಲ್ಲಿ ವಿವರ ಭರ್ತಿ ಮಾಡಿ, ಸಂಬಂಧಿಸಿದ ದಾಖಲೆಗಳನ್ನು ನವೆಂಬರ್ 27 ರ ಒಳಗಾಗಿ ಕಚೇರಿ ವೇಳೆಯಲ್ಲಿ ಅರ್ಜಿ ಸಲ್ಲಿಸಲು ತಿಳಿಸಲಾಗಿದೆ.

ಇನ್ನು ಅರ್ಜಿಗಳನ್ನ ಸಲ್ಲಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ & ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಗೇಟ್ ನಂ. 12, ಕೊಠಡಿ ಸಂಖ್ಯೆ 17-18, ಕಂಠೀರವ ಕ್ರೀಡಾಂಗಣ, ಕಸ್ತೂರ ಬಾ ರಸ್ತೆ, ಬೆಂಗಳೂರು- 560001 ಇಲ್ಲಿಗೆ ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ದೂ. ಸಂ. 080-22239771, 9480886470 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

Applications called for Ekalavya award Karnataka

ಕ್ರೀಡಾ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

ಯುವ ಸಬಲೀಕರಣ & ಕ್ರೀಡಾ ಇಲಾಖೆಯ ವತಿಯಿಂದ 2022ನೇ ಸಾಲಿನ ಹಿರಿಯ ಕ್ರೀಡಾಪಟು & ತರಬೇತುದಾರರಾಗಿ ಸಾಧನೆ ಮಾಡಿದ ರಾಜ್ಯದ ಹಿರಿಯ ಕ್ರೀಡಾಪಟು / ತರಬೇತುದಾರರಿಗೆ ಜೀವಮಾನ ಸಾಧನೆ ಪ್ರಶಸ್ತಿಗೆ ಮತ್ತು ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ ನೀಡಲು ಅರ್ಹ ಕ್ರೀಡಾಪಟುಗಳಿಂದ ಸೇವಾಸಿಂಧು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗೆ ಇಲ್ಲಿ ಸಂಪರ್ಕಿಸಿ

ಇನ್ನು ರಾಜ್ಯದ ಆಸಕ್ತ ಕ್ರೀಡಾಪಟುಗಳು, ಸೇವಾಸಿಂಧು ಆನ್ ಲೈನ್ ವೆಬ್ ಸೈಟ್ ಆಗಿರುವ, ttps://sevasindhuservices.karnataka.gov.in ನಲ್ಲಿ ನವೆಂಬರ್ 29 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ನಗರ ಜಿಲ್ಲೆ ಗೇಟ್ ನಂ.12, ಕೊಠಡಿ ಸಂಖ್ಯೆ 17-18, ಶ್ರೀ ಕಂಠೀರವ ಕ್ರೀಡಾಂಗಣ, ಕಸ್ತೂರಬಾ ರಸ್ತೆ, ಬೆಂಗಳೂರು-560001ಗೆ ಅಥವಾ ಮತ್ತು ದೂ.ಸಂ. 080-22239771, 9480886470 ಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+