ಸ್ವಯಂ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಬಂಪರ್!

ಬೆಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ ವತಿಯಿಂದ ಒಂದು ದಿನದ ಉದ್ಯಮಶೀಲತಾ ಮಾರ್ಗದರ್ಶನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಡಿಸೆಂಬರ್ ಮೊದಲ ವಾರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಹೌದು, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸ್ವಯಂ ಉದ್ಯೋಗಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ ಇದೀಗ ಕೈಗಾರಿಕೆ ಹಾಗೂ ಸೇವಾ ಚಟುವಟಿಕೆ ಪ್ರಾರಂಭಿಸಲು ಇಚ್ಚಿಸುವ ಸ್ವ ಉದ್ಯೋಗಾಂಕ್ಷಿಗಳಿಗೆ ತರಬೇತಿಯಲ್ಲಿ ಭಾಗವಹಿಸಲು ಅವಕಾಶ ಇದೆ. ಅಭ್ಯರ್ಥಿ ವಯಸ್ಸು 18ರಿಂದ 45ರ ಒಳಗೆ ಇರಬೇಕು. ಹಾಗೂ ಈ ತರಬೇತಿಯಲ್ಲಿ ಭಾಗವಹಿಸಿಲು ನವೆಂಬರ್ 28ರ ಒಳಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ತಿಳಿಸಲಾಗಿದೆ. ಹಾಗಾದರೆ ನೋಂದಣಿ ಮಾಡಿಸಿಕೊಳ್ಳುವುದು ಹೇಗೆ?

Applications Called For The job Training Programs In Bengaluru

ನೋಂದಣಿ ಪ್ರಕ್ರಿಯೆ ಇಲ್ಲಿದೆ

ತರಬೇತಿ ಪಡೆಯಲು ಇಚ್ಚಿಸುವವರು ತಮ್ಮ ಇತ್ತೀಚಿನ 2 ಪಾಸ್ ಪೋರ್ಟ್ ಅಳತೆ ಪೋಟೋ ಮತ್ತು ಆಧಾರ್ ಕಾರ್ಡ್ ಝೆರಾಕ್ಸ್, ಜಾತಿ ಪ್ರಮಾಣ ಪತ್ರದ ಝೆರಾಕ್ಸ್ ಸೇರಿ ಬ್ಯಾಂಕ್ ಪಾಸ್ ಬುಕ್ ಝೆರಾಕ್ಸ್ ಕಾಪಿ ಜೊತೆ ಜಂಟಿ ನಿರ್ದೇಶಕರ ಕಚೇರಿ ಸಿಡಾಕ್, ಜಿಟಿಟಿಸಿ ಆಡಳಿತ ಕಟ್ಟಡ ರಾಜಾಜಿನಗರ ಕೈಗಾರಿಕಾ ವಸಹಾತು, ವೆಸ್ಟ್ ಆಫ್ ಕಾರ್ಡ್ ರಸ್ತೆ, ಬೆಂಗಳೂರು -560010 ಈ ವಿಳಾಶಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹಾಗೇ ಈ ಕುರಿತಾಗಿ ಹೆಚ್ಚಿನ ಮಾಹಿತಿಗೆ, ಮೊಬೈಲ್ ಸಂಖ್ಯೆ 7411161990 ಅನ್ನ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

ನಿರುದ್ಯೋಗಿ ಮಹಿಳೆಯರಿಗೆ ತರಬೇತಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2023-24ನೇ ಸಾಲಿನ ಮಹಿಳಾ ತರಬೇತಿ ಯೋಜನೆ ಅಡಿ, ನಿರುದ್ಯೋಗಿ ಮಹಿಳೆಯರಿಗೆ ವಿವಿಧ ಕೌಶಲ್ಯ ಆಧಾರಿತ ತರಬೇತಿ ಹಮ್ಮಿಕೊಳ್ಳಲಾಗಿದ್ದು ಅರ್ಹ ಹಾಗೂ ಮೂಲ ಸೌಕರ್ಯಗಳನ್ನು ಹೊಂದಿರುವ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿವುದು ಹೇಗೆ?ಸಂಪೂರ್ಣ ಮಾಹಿತಿ ಇಲ್ಲಿದೆ, ಮುಂದೆ ಓದಿ.

ಆಸಕ್ತ ಸಂಸ್ಥೆಗಳು ಪ್ರಸ್ತಾವನೆಯನ್ನ ಉಪ ನಿರ್ದೇಶಕರ ಕಚೇರಿ, ಮಹಿಳಾ & ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್.ಮರಿಗೌಡ ರಸ್ತೆ, ಬೆಂಗಳೂರು ನಗರ ಜಿಲ್ಲೆ-29 ಇಲ್ಲಿಗೆ, ನವೆಂಬರ್ 29 ಸಂಜೆ 5.30 ರ ಒಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 080-29578688 ಅನ್ನು ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+