ಸಿಆರ್‌ಪಿ ಮತ್ತು ಬಿಆರ್‌ಪಿ ಹುದ್ದೆಗೆ ಶಿಕ್ಷಕರಿಂದ ಅರ್ಜಿ ಆಹ್ವಾನ
ಬೆಂಗಳೂರು, ಏ.3 : ಖಾಲಿ ಇರುವ ಸಮೂಹ ಸಂಪನ್ಮೂಲ ವ್ಯಕ್ತಿ (ಸಿಆರ್‌ಪಿ) ಮತ್ತು ಕ್ಷೇತ್ರ ಸಂಪನ್ಮೂಲ ವ್ಯಕ್ತಿ (ಬಿಆರ್‌ಪಿ) ಹುದ್ದೆಗಳನ್ನು ಭರ್ತಿಗೆ ಸೇವೆಯಲ್ಲಿರುವ ಸರ್ಕಾರಿ ಪ್ರಾಥಮಿಕ ಪ್ರೌಢಶಾಲಾ ಶಿಕ್ಷಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ಬಿ.ಆರ್.ಪಿ/ಸಿ.ಆರ್.ಪಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರಿಗೆ ಮೂರು ವರ್ಷಗಳ ಅವಧಿ ನಿಗದಿಗೊಳಿಸಲಾಗಿದೆ. ಈ ಹುದ್ದೆಗಳಲ್ಲಿ ಮೂರು ವರ್ಷ ಪೂರ್ಣಗೊಳಿಸಿರುವ ಶಿಕ್ಷರು ಮತ್ತು ಮುಖ್ಯ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ಆಯ್ಕೆ ಮಾಡಲಾಗುತ್ತದೆ. [ನೇಮಕಾತಿ ಆದೇಶ ಓದಿ]

ಪ್ರೌಢಶಾಲಾ ಬಿ.ಆರ್.ಪಿಗಳಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶಾಲಾ ಶಿಕ್ಷಕರಿಗೆ ಏ.7ರಂದು ಕೌನ್ಸಿಲಿಂಗ್ ನಡೆಸಿ, ಸ್ಥಳವನ್ನು ನಿಯೋಜನೆ ಮಾಡಲಾಗುತ್ತದೆ. ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಕೌನ್ಸಿಲಿಂಗ್ ಮೂಲಕ ಸ್ಥಳ ನಿಯೋಜನೆ ನಡೆಯಲಿದೆ.
ಹೆಚ್ಚಿನ ವಿವರಗಳಿಗೆ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಉಪನಿರ್ದೇಶಕರು (ಅಭಿವೃದ್ಧಿ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಸಂಪರ್ಕಿಸಬಹುದು ಅಥವಾ ಸರ್ವ ಶಿಕ್ಷಣ ಅಭಿಯಾನ ವೆಬ್‌ಸೈಟ್ www.ssakarnataka.gov.in ನೋಡಬಹುದು.
ಕೆಎಸ್ಆರ್‌ಟಿಸಿಯಲ್ಲಿ ಕೆಲಸ ಖಾಲಿ ಇದೆ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ವಿವಿಧ ವಿಭಾಗದಲ್ಲಿ ಖಾಲಿ ಇರುವ ಚಾಲಕ ಮತ್ತು ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 18, 2015. [ವಿವರಗಳನ್ನು ಓದಿ]












Click it and Unblock the Notifications