ಏಕಲವ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು, ಜುಲೈ 10 : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನೀಡಲಾಗುವ ವಿವಿಧ ಪ್ರಶಸ್ತಿಗಳಿಗೆ ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜುಲೈ 25, 2015.
ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಿಗೆ ಆಯ್ಕೆಯಾಗಿ ಉನ್ನತ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೀಡುವ 'ಏಕಲವ್ಯ ಪ್ರಶಸ್ತಿ', ಕ್ರೀಡಾ ಕ್ಷೇತ್ರದಲ್ಲಿ ನಿರಂತರ ಸೇವೆ ಸಲ್ಲಿಸಿ ಸಾಧನೆ ಮಾಡಿದವರಿಗೆ ನೀಡುವ 'ಜೀವಮಾನ ಸಾಧನೆ ಪ್ರಶಸ್ತಿ' ಮತ್ತು ಗ್ರಾಮೀಣ ಕ್ರೀಡೆಗಳಲ್ಲಿ ವಿಶೇಷ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ನೀಡುವ 'ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ'ಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ ಮತ್ತು ವಿವರಗಳನ್ನು www.karnatakayouthportal.in ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಲಿಖಿತ ಅರ್ಜಿಯನ್ನು ಜುಲೈ 25ರೊಳಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ವಿಳಾಸ : ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ನೃಪತುಂಗ ರಸ್ತೆ, ಬೆಂಗಳೂರು-560 001, ದೂರವಾಣಿ ಸಂಖ್ಯೆ 080-22215601.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಾಮುಂಡಿ ವಿಹಾರ ಕ್ರೀಡಾಂಗಣ, ನಜರ್‍ಬಾದ್, ಮೈಸೂರು ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0821-2564179ನ್ನು ಸಂಪರ್ಕಿಸಬಹುದು.












Click it and Unblock the Notifications