ಹಾಸನ : ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಹಾಸನ, ಫೆ. 11 : ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6ನೇ ತರಗತಿಯಿಂದ 10ನೇ ತರಗತಿಯವರೆಗೆ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 6 ರಿಂದ 12ನೇ ತರಗತಿಯವರೆಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಇಚ್ಚಿಸುವ ಗ್ರಾಮೀಣ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಉತ್ತಮವಾದ ವಿದ್ಯಾಭ್ಯಾಸ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಅಂದರೆ ಸಾಮಾನ್ಯ ವರ್ಗ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಮತ್ತು ಅಲ್ಪ ಸಂಖ್ಯಾತರ ವಿದ್ಯಾರ್ಥಿಗಳಿಗೆ ಪ್ರವೇಶ ಲಭ್ಯವಿದೆ. [ಹಾಸನ ಸಾಹಿತ್ಯ ಸಮ್ಮೇಳನದ ಚಿತ್ರಗಳು]

ಅರ್ಹತೆ : ಅರ್ಜಿ ಸಲ್ಲಿಸಲು ಬಯಸುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯ ರೂ.2 ಲಕ್ಷ. ಪರಿಶಿಷ್ಟ ವರ್ಗದವರಿಗೆ 2, ಹಿಂದುಳಿದ ವರ್ಗದ ಪ್ರವರ್ಗ 1ರ ವಿದ್ಯಾರ್ಥಿಗಳಿಗೆ ಒಂದು ಲಕ್ಷ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿಯ ವಿದ್ಯಾರ್ಥಿಗಳಿಗೆ 44,500 ಆದಾಯ ಮಿತಿ ನಿಗದಿಗೊಳಿಸಲಾಗಿದೆ.

Students

ಸೀಟುಗಳ ಹಂಚಿಕೆ : ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಶೇ.50 ಸೀಟುಗಳು ವಿದ್ಯಾರ್ಥಿನಿಯರಿಗೆ ಮತ್ತು ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಶೇ.100 ರಷ್ಟು ಸೀಟುಗಳು ವಿದ್ಯಾರ್ಥಿನಿಯರಿಗೆ ಲಭ್ಯವಿರುತ್ತವೆ. ಒಮ್ಮೆ ಈ ವಸತಿ ಶಾಲೆಗಳಿಗೆ ಸೇರಿದಲ್ಲಿ 12ನೇ ತರಗತಿವರೆಗೆ ಉಚಿತವಾಗಿ ವಿದ್ಯಾಭ್ಯಾಸ ಮಾಡಬಹುದಾಗಿದೆ. [ಕೊಪ್ಪಳ : ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನ]

50 ವಿದ್ಯಾರ್ಥಿಗಳಿಗೆ ಪ್ರವೇಶ : ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗಳಲ್ಲಿ 2015-16ನೇ ಸಾಲಿನಲ್ಲಿ 6ನೇ ತರಗತಿಗೆ 50 ವಿದ್ಯಾರ್ಥಿಗಳನ್ನು ಮಾತ್ರ ಸೇರಿಸಿಕೊಳ್ಳಲಾಗುತ್ತದೆ. ಕರ್ನಾಟಕದ ಯಾವುದೇ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮತ್ತು ಈಗಾಗಲೇ ಮಾಡಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಅರ್ಹತೆ ಮತ್ತು ಮೀಸಲಾತಿಯಂತೆ ಪಟ್ಟಿ ತಯಾರಿಸಿ ಮೆರಿಟ್ ಆಧಾರದ ಮೇಲೆ ಮೀಸಲಾತಿ ಅನ್ವಯ ಕೌನ್ಸಿಲಿಂಗ್ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹಾಸನ ಜಿಲ್ಲೆಯ ವಿದ್ಯಾರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.

ಅರ್ಜಿಗಳು ಜಿಲ್ಲೆಯ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳ ಕಛೇರಿ, ತಾಲೂಕಿನ ಸಮಾಜ ಕಲ್ಯಾಣ ಅಧಿಕಾರಿಗಳ ಕಛೇರಿ, ತಾಲೂಕಿನ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿಗಳ ಕಛೇರಿ, ತಾಲ್ಲೂಕಿನ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ವಸತಿ ಶಾಲೆಗಳಲ್ಲಿ ಲಭ್ಯವಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 25. ಪ್ರವೇಶ ಪರೀಕ್ಷೆ 29-3-2015ರ ಭಾನುವಾರ ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 1.30 ರವರೆಗೆ ನಡೆಯಲಿದ್ದು, ಅರ್ಹತಾ ಪಟ್ಟಿಯನ್ನು 10-4-2015ರಂದು ಪ್ರಕಟಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+