ಪದವಿ ಪೂರ್ವ ಕಾಲೇಜು ಆರಂಭಿಸಲು ಅರ್ಜಿ ಸಲ್ಲಿಸಿ

ಬೆಂಗಳೂರು, ಡಿ.10 : ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕದಲ್ಲಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಇಚ್ಫಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಟ್ರಸ್ಟ್‌ಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಡಿಸೆಬಂಬರ್ 22ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಮಂಗಳವಾರ ಪದವಿ ಪೂರ್ವ ಶಿಕ್ಷಣ ಇಲಾಖೆ ಈ ಕುರಿತು ಪ್ರಕಟಣೆ ಹೊರಡಿಸಿದೆ. ಪದವಿ ಪೂರ್ವ ಶಿಕ್ಷಣ ನಿಯಮಗಳು 2006 ರ ನಿಯಮ 4 ರನ್ವಯ 2015-16ನೇ ಶೈಕ್ಷಣಿಕ ಸಾಲಿನಲ್ಲಿ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳನ್ನು ಆರಂಭಿಸಲು ಆಸಕ್ತಿ ಉಳ್ಳವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

PUC

ಡಿಸೆಂಬರ್ 12ರ ನಂತರ ಶಿಕ್ಷಣ ಇಲಾಖೆ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಜಂಟಿ ನಿರ್ದೇಶಕರು (ಮಾನ್ಯತೆ ಮತ್ತು ಅನುದಾನ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು ಇವರಿಗೆ ಡಿ.22ರೊಳಗೆ ಸಲ್ಲಿಸಬೇಕಾಗುತ್ತದೆ. [2015ರ ಪಿಯುಸಿ ಪರೀಕ್ಷೆ ವೇಳಾಪಟ್ಟಿ]

ಅರ್ಜಿ ನಮೂನೆ ಮತ್ತು ಹೆಚ್ಚಿನ ವಿವರಗಳನ್ನು ಇಲಾಖೆಯ ವೆಬ್‌ಸೈಟ್ www.puc.kar.nic.in ಇಲ್ಲಿಂದ ಅಥವ ಜಿಲ್ಲಾ ಉಪ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ. [ಶಿಕ್ಷಣ ಕ್ಷೇತ್ರ ಸುಧಾರಣೆಗೆ ಐಐಎಂ ಪದವೀಧರರ ಕನಸು]

ಜಿಲ್ಲಾ ಸಮಿತಿಯಿಂದ ಆಯ್ಕೆ : ಅರ್ಜಿ ಸಲ್ಲಿಸಿರುವವರು ಕಾಲೇಜು ಸ್ಥಾಪನೆ ಮಾಡಲು ಆಯ್ಕೆ ಮಾಡಿಕೊಂಡಿರುವ ಸ್ಥಳ ಮುಂತಾದ ವಿವರಗಳನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮವನ್ನು ಕೈಗೊಳ್ಳುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+