ಪಂಚಾಯತ್ ರಾಜ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ಜ. 21 : ಕರ್ನಾಟಕ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ಖಾಲಿ ಇರುವ ಸಹಾಯಕ ಇಂಜಿನಿಯರ್, ಕಿರಿಯ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 29.

ವಿದ್ಯಾರ್ಹತೆ : ಸಹಾಯಕ ಇಂಜಿನಿಯರ್ (ಸಿವಿಲ್‌) ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂದರ್ಭಾನುಸಾರ ಸಿವಿಲ್/ಎನ್‌ವಿರಾನ್‌ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. [ಕನ್ನಡದ ನೇಮಕಾತಿ ಆದೇಶ ಇಲ್ಲಿದೆ ನೋಡಿ]

ಭಾರತ ಸರ್ಕಾರದ ಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಮಂತ್ರಾಲಯದ ಮಾಹಿತಿ ತಂತ್ರಜ್ಞಾನ ಇಲಾಖೆಯ ಸ್ವಾಯತ್ತ ಸಂಸ್ಥೆಯಾದ DOEACC ನಿಂದ ಮಾನ್ಯತೆ ಪಡೆದ ಯಾವುದೇ ಸೊಸೈಟಿಯು ಕಂಪ್ಯೂಟರ್ ಕಾನ್ಸೆಪ್ಟ್‌ಗಳ ಕೋರ್ಸ್‌ನಲ್ಲಿ ನೀಡಿದ 'ಓ' ಹಂತದ ಪ್ರಮಾಣ ಪತ್ರ ಪಡೆದಿರತಕ್ಕದ್ದು.

Karnataka

ಕಿರಿಯ ಇಂಜಿನಿಯರ್ (ಸಿವಿಲ್, ಎನ್‌ವಿರಾನ್‌ಮೆಂಟಲ್) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂದರ್ಭಾನುಸಾರ ಸಿವಿಲ್/ಎನ್‌ವಿರಾನ್‌ಮೆಂಟಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮೋ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು.

ಅರ್ಜಿ ಶುಲ್ಕ : ಸಾಮಾನ್ಯ, ಪ್ರವರ್ಗ 2-ಎ, 2-ಬಿ, 3-ಎ, 3-ಬಿಗೆ ಸೇರಿದ ಅಭ್ಯರ್ಥಿಗಳು 200 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ. ಮಾಜಿ ಸೈನಿಕರು ರೂ.25 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.

ನಿಗದಿತ ಶುಲ್ಕವನ್ನು ಕರ್ನಾಟಕದ ಯಾವುದೇ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ 'SBI Collect' ಮೂಲಕ ಡೆಬಿಟ್/ಕ್ರೆಡಿಟ್ ಕಾರ್ಡ್ ಚಲನ್ ಸೌಲಭ್ಯದ ಮೂಲಕ ಅಥವ ಎಲೆಕ್ಟ್ರಾನಿಕ್ ಅಂಚೆ ಕಚೇರಿಗಳಲ್ಲಿ ಚಲನ್ ಮೂಲಕ ಪಾವತಿ ಮಾಡಬೇಕು. 'SBI Collect/ಅಂಚೆ ಕಚೇರಿಯ ಚಲನ್ ಪ್ರತಿಯನ್ನು RDPR ವೆಬ್‌ಸೈಟ್‌ನಿಂದ ಪ್ರಿಂಟ್ ಮಾಡಿಕೊಳ್ಳಬೇಕು.

ವಯೋಮಿತಿ : ಸಾಮಾನ್ಯ ಅಭ್ಯರ್ಥಿಗಳಿಗೆ ಕನಿಷ್ಠ 18 ಮತ್ತು ಗರಿಷ್ಠ 35 ವರ್ಷ, ಪ್ರವರ್ಗ 2-ಎ, 2-ಬಿ, 3-ಬಿ, ಅಭ್ಯರ್ಥಿಗಳಿಗೆ ಕನಿಷ್ಠ 18 ಗರಿಷ್ಠ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷಗಳು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
ಸಹಾಯಕ ಇಂಜಿನಿಯರ್ (ಸಿವಿಲ್‌)

ಕಿರಿಯ ಇಂಜಿನಿಯರ್ (ಸಿವಿಎಲ್)
ಸಹಾಯಕ ಇಂಜಿನಿಯರ್ (ಎನ್‌ವಿರಾನ್‌ಮೆಂಟಲ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+