ಉಡುಪಿ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳು ಖಾಲಿ ಇವೆ

ಉಡುಪಿ, ಫೆ. 23 : ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಕಾರ, ಬೆರಳಚ್ಚು, ನಕಲುಕಾರ ಹಾಗೂ ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳಲ್ಲಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 16.

ಶೀಘ್ರಲಿಪಿಕಾರರ 10, ಬೆರಳಚ್ಚಿ-ನಕಲುಕಾರರ 1, ಜವಾನರ 2 ಹುದ್ದೆಗಳು ಖಾಲಿ ಇವೆ. ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಉಡುಪಿ ಜಿಲ್ಲೆ, ಉಡುಪಿ ಇವರಿಗೆ ಮಾರ್ಚ್ 16ರೊಳಗೆ ಸಲ್ಲಿಸಬೇಕು. [ನೇಮಕಾತಿ ಆದೇಶ, ಅರ್ಜಿ ಇಲ್ಲಿದೆ]

Jobs

ವಯೋಮಿತಿ : ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪ.ಜಾತಿ/ಪ.ಪಂ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. [ಕೆಎಸ್ಆರ್ ಟಿಸಿಯಲ್ಲಿ ಕೆಲಸ ಖಾಲಿ ಇದೆ]

ಪರಿವೀಕ್ಷಣಾ ಅವಧಿ : ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮ) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕನ್ನಡ ಭಾಷಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು.

ಅಭ್ಯರ್ಥಿಯು ಅಧಿಸೂಚನೆಯಲ್ಲಿ ನೀಡಿದ ನಿಗದಿತ ಅರ್ಜಿಯನ್ನು ಕೈ ಬರವಣಿಗೆಯಲ್ಲಿ ಭರ್ತಿ ಮಾಡಿ ಸಲ್ಲಿಸಬೇಕು. ಅರ್ಜಿಯಲ್ಲಿ ಹುದ್ದೆ, ವರ್ಗ ಹಾಗೂ ಮೀಸಲಾತಿಯನ್ನು ಸ್ಪಷ್ಟವಾಗಿ ನಮೂದಿಸಬೇಕು. ಸರಿಯಾಗಿ ಭರ್ತಿ ಮಾಡದ ಅರ್ಜಿಯನ್ನು ತಿರಸ್ಕರಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+