ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಿಗುವ 5 ಸೌಲಭ್ಯಗಳು

|
Google Oneindia Kannada News

ಬೆಂಗಳೂರು, ಅಕ್ಟೋಬರ್ 17; ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತ 5 ಯೋಜನೆಗಳಿಗೆ ಸಾಲ, ಸಹಾಯಧನ ನೀಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ, ಅರ್ಹರು 30/11/2022ರೊಳಗೆ ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು.

ಕರ್ನಾಟಕ ಸರ್ಕಾರದ ಆದೇಶದಂತೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ 2022-23ನೇ ಸಾಲಿಗೆ ಅನುಮೋದಿಸಿದ ಕ್ರಿಯಾ ಯೋಜನೆಯಂತೆ 5 ಯೋಜನೆಗಳಿಗೆ ಸಾಲ ಹಾಗೂ ಸಹಾಯಧನ ಸೌಲಭ್ಯ ನೀಡಲಾಗುತ್ತಿದೆ. ಇದಕ್ಕಾಗಿ ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿದಾರರು ಪ್ರವರ್ಗ-III ಬಿ ವರ್ಗಕ್ಕೆ ಸೇರಿದವರಾಗಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹೊಂದಿರಬೇಕು. ಅರ್ಜಿ ಸಲ್ಲಿಸುವಾಗ ಆಧಾರ್ ಕಾರ್ಡ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಪ್ರಕಟಣೆ ತಿಳಿಸಿದೆ.

ಅರ್ಹರು ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ದಾಖಲೆಗಳ ಜೊತೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಕಳೆದ ಮೂರು ವರ್ಷದಿಂದ ಸರ್ಕಾರದ ಯಾವುದೇ ನಿಗಮ/ ಇಲಾಖೆಗಳಲ್ಲಿ ಯೋಜನೆಯ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿಗಳನ್ನು ಸಲ್ಲಿಸಲು ಅರ್ಹರಿರುವುದಿಲ್ಲ, ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಕೇಂದ್ರ ಕಛೇರಿಯ ದೂರವಾಣಿ ಸಂಖ್ಯೆ 080-22865522 ಅಥವಾ ಆಯಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತದ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ಯಾವ-ಯಾವ ಯೋಜನೆಗಳು ಎಂಬ ಮಾಹಿತಿ ಚಿತ್ರಗಳಲ್ಲಿ ಇದೆ.....

ಬಸವ ಬೆಳಗು ಮತ್ತು ವಿದೇಶ ವಿದ್ಯಾವಿಕಾಸ ಯೋಜನೆ

ಬಸವ ಬೆಳಗು ಮತ್ತು ವಿದೇಶ ವಿದ್ಯಾವಿಕಾಸ ಯೋಜನೆ

ಬಸವ ಬೆಳಗು ಯೋಜನೆಯಡಿ ವೃತ್ತಿಪರ ಕೋರ್ಸ್‌ಗಳಿಗೆ ವಾರ್ಷಿಕ ರೂ. 1 ಲಕ್ಷಗಳ ಮಿತಿಯಲ್ಲಿ ಗರಿಷ್ಠ ರೂ. 5 ಲಕ್ಷಗಳವರೆಗೆ ವಾರ್ಷಿಕ ಶೇ 2ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ಸಿಗಲಿದೆ.

ವಿದೇಶ ವಿದ್ಯಾವಿಕಾಸ ಯೋಜನೆಯಡಿ ಮಾನ್ಯತೆ ಪಡೆದಿರುವಂತಹ ವಿದೇಶ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಪಡೆಯಲು ವಾರ್ಷಿಕ ಗರಿಷ್ಠ ರೂ. 3.50 ಲಕ್ಷಗಳಂತೆ 3 ವರ್ಷದ ಅವಧಿಗೆ ಒಟ್ಟು ರೂ.10.00 ಲಕ್ಷಗಳನ್ನು ಶೇ.2ರ ಬಡ್ಡಿದರದಲ್ಲಿ ಸಾಲ ಸೌಲಭ್ಯವಿದೆ.

ಜೀವಜಲ ಯೋಜನೆ ವಿವರ

ಜೀವಜಲ ಯೋಜನೆ ವಿವರ

ಈ ಯೋಜನೆಯಡಿ ಸೌಲಭ್ಯ ಪಡೆಯಲು ಸಣ್ಣ ಹಾಗೂ ಅತಿ ಸಣ್ಣ ರೈತರಾಗಿದ್ದು, ಕನಿಷ್ಠ 2 ಎಕರೆ ಹಾಗೂ ಗರಿಷ್ಠ 5 ಎಕರೆ ಒಳಗೆ ಜಮೀನು ಹೊಂದಿರಬೇಕು.

ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ನಿಗದಿಪಡಿಸಿದ ಘಟಕ ವೆಚ್ಚ 7 ಜಿಲ್ಲೆಗಳಿಗೆ 3.50 ಲಕ್ಷ ಸಹಾಯಧನ ಹಾಗೂ ರೂ. 50 ಸಾವಿರ ಸಾಲ ಮತ್ತು ಉಳಿದ 25 ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ 2 ಲಕ್ಷ ಸಹಾಯಧನ ಹಾಗೂ 50 ಸಾವಿರ ಸಾಲ ಶೇ 4ರ ಬಡ್ಡಿದರದಲ್ಲಿ ನೀಡಲಾಗುತ್ತದೆ.

ಕಾಯಕಕಿರಣ ಯೋಜನೆ ಮಾಹಿತಿ

ಕಾಯಕಕಿರಣ ಯೋಜನೆ ಮಾಹಿತಿ

ಯೋಜನೆಯಡಿ 50 ಸಾವಿರಗಳ ತನಕ ಘಟಕ ವೆಚ್ಚದ ಆರ್ಥಿಕ ಚಟುವಟಿಕೆಗಳಿಗೆ ಶೇ.30ರಷ್ಟು ಗರಿಷ್ಠ ರೂ. 10,000ಗಳ ಸಹಾಯಧನವನ್ನು ಹಾಗೂ ಉಳಿಕೆ ಶೇ 70ರಷ್ಟು ಗರಿಷ್ಠ ರೂ. 40 ಸಾವಿರಗಳನ್ನು ವಾರ್ಷಿಕ ಶೇ 2ರ ಬಡ್ಡಿದರದಲ್ಲಿ ಸಾಲ ಮಂಜೂರು ಮಾಡುವುದು.

ರೂ. 50 ಸಾವಿರ ದಿಂದ 1 ಲಕ್ಷದಗಳವರೆಗಿನ ಘಟಕ ವೆಚ್ಚದ ಆರ್ಥಿಕ ಚಟುವಟಿಕೆಗಳಿಗೆ ಶೇ 20ರಷ್ಟು ಗರಿಷ್ಠ 20 ಸಾವಿರ ಸಹಾಯಧನವನ್ನು ಹಾಗೂ ಉಳಿಕೆ ಶೇ 80ರಷ್ಟು ಗರಿಷ್ಠ 80 ಸಾವಿರ ರೂ.ಗಳನ್ನು ವಾರ್ಷಿಕ ಶೇ 2ರ ಬಡ್ಡಿದರದಲ್ಲಿ ಸಾಲ ಮಂಜೂರು.

ಸ್ವ-ಸಹಾಯ ಸಂಘಗಳಿಗೆ ಉತ್ತೇಜನ

ಸ್ವ-ಸಹಾಯ ಸಂಘಗಳಿಗೆ ಉತ್ತೇಜನ

ವೀರಶೈವ ಲಿಂಗಾಯತ ಸಮುದಾಯದ ಸ್ವಸಹಾಯ ಗುಂಪುಗಳ 15 ಸದಸ್ಯರಿಗೆ ತಲಾ ರೂ. 5,000ಗಳ ಸಹಾಯಧನ ಹಾಗೂ ತಲಾ ರೂ.10,000ಗಳ ಸಾಲವನ್ನು ವಾರ್ಷಿಕ ಶೇ.4ರಷ್ಟು ಬಡ್ಡಿದರದಲ್ಲಿ ಹೀಗೆ ಪ್ರತಿ ಗುಂಪಿಗೆ ರೂ. 75,000ಗಳ ಸಹಾಯಧನ ಹಾಗೂ ರೂ. 1,50,000 ಗಳ ಸಾಲ ಒಟ್ಟು ರೂ.2,25,000/-ಗಳನ್ನು ಮಂಜೂರು ಮಾಡುವುದು.

ಈ ಮೇಲ್ಕಂಡ 5 ಯೋಜನೆಗಳಿಗೆ ಸಂಬಂಧಿಸಿದಂತೆ ನಿಗಮದ ಅಧಿಕೃತ ವೆಬ್ ಸೈಟ್ https://kvidedkarnataka.gov.in ನಲ್ಲಿ ಫಲಾನುಭವಿಗಳು ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.

English summary
Karnataka Veerashaiva Lingayath Development Corporation invited applications for the 5 projects of the corporation. Candidates can apply till 30/11/2022.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X