ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1,298 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ

|
Google Oneindia Kannada News

ಬೆಂಗಳೂರು, ಜ.28 : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರ ಮುಂದಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ಕೊನೆಯ ದಿನಾಂಕ ಫೆಬ್ರವರಿ 28.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆಗಳನ್ನು ನಡೆಸಲಿದೆ. ಒಟ್ಟು 1,298 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 22 ವರ್ಷ ಗರಿಷ್ಠ 45 ವರ್ಷ. ಎಸ್‌ಸಿ, ಎಸ್‌ಟಿ, ಪ್ರವರ್ಗ 1 ಮತ್ತು ಇತರ ಅಭ್ಯರ್ಥಿಗಳಿಗೆ 43 ವರ್ಷ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳು.

Jobs

ಕನ್ನಡ, ಇಂಗ್ಲಿಶ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜ ಶಾಸ್ತ್ರ, ವಾಣಿಜ್ಯ, ಸೈಕಾಲಜಿ, ರಸಾಯನಶಾಸ್ತ್ರ, ಗಣಿತ, ಕಂಪ್ಯೂಟರ್ ವಿಜ್ಞಾನ, ಸೇರಿದಂತೆ ವಿವಿಧ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇವೆ. [ಇಂಗ್ಲಿಶ್ ನಲ್ಲಿ ಓದಿ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಜಿ ಸಲ್ಲಿಸಲು ಬಯಸುವ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಶೇ 55 ಅಂಕಗಳೊಂದಿಗೆ ಪಡೆದಿರಬೇಕು. ಎಸ್‌ಸಿ ಮತ್ತು ಎಸ್‌ಟಿ ವಿದ್ಯಾರ್ಥಿಗಳಿಗೆ ಶೇ 50 ರಷ್ಟು ಅಂಕ ನಿಗದಿ ಪಡಿಸಲಾಗಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in/ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಕೊನೆಯ ದಿನ ಫೆಬ್ರವರಿ 28. ಕಂಪ್ಯೂಟರೀಕೃತ ಅಂಚೆ ಕಚೇರಿಗಳಲ್ಲಿ ಶುಲ್ಕ ಪಾವತಿ ಮಾಡಲು ಮಾರ್ಚ್ 2 ಕೊನೆಯ ದಿನ.

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ 2,500 ಮತ್ತು ಎಸ್‌ಸಿ,ಎಸ್‌ಟಿ,ಪ್ರವರ್ಗ -1 ರ ವಿದ್ಯಾರ್ಥಿಗಳಿಗೆ 2000 ರೂ. ಅರ್ಜಿ ಶುಲ್ಕವಿದೆ. ಬೆಂಗಳೂರು, ಮೈಸೂರು, ಧಾರವಾಡ, ಕಲಬುರಗಿ, ಶಿವಮೊಗ್ಗದಲ್ಲಿ ಪರೀಕ್ಷೆಗಳು ಏಪ್ರಿಲ್‌ನಲ್ಲಿ ನಡೆಯಲಿವೆ. ಶೀಘ್ರದಲ್ಲೇ ವೇಳಾಪಟ್ಟಿ ಪ್ರಕಟಗೊಳ್ಳಲಿದೆ.

ಹೆಚ್ಚಿನ ಮಾಹಿತಿಗಾಗಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಸಂಪಿಗೆ ರಸ್ತೆ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು, 560012 ವಿಳಾಸಕ್ಕೆ ಅಥವ 080-23460460 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

English summary
Government of Karnataka has issued a notification to conduct competitive examination for recruitment to the posts of Assistant Professors in Government First Grade Colleges. February 28 is the last date for submit applications.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X