ಐಎಎಸ್, ಕೆಎಎಸ್, ಬ್ಯಾಂಕಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
ಕೊಪ್ಪಳ, ಜೂ. 01 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30.
ಉಚಿತವಾಗಿ ತರಬೇತಿ ಪಡೆಯಲು ಬಯಸುವ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ www.backwardclasses.kar.nic.in ಭೇಟಿ ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಷರತ್ತುಗಳು : ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಿಂದೆ ಇಲಾಖೆ ನಡೆಸಿದ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರಬಾರದು. ಬ್ಯಾಂಕಿಂಗ್ ಹಾಗೂ ಐಎಎಸ್, ಕೆಎಎಸ್ ತರಬೇತಿಗೆ ಒಂದೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. [1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ]
ತರಬೇತಿಯ ಅವಧಿ : ಐಎಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 7-9 ತಿಂಗಳು. ಕೆಎಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 7 ತಿಂಗಳು. ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಬ್ಯಾಂಕಿಂಗ್ ನೇಮಕಾತಿಯ ಸಮಗ್ರ ವಿಷಯಗಳು 3 ತಿಂಗಳು.
ಹೆಚ್ಚಿನ ಮಾಹಿತಿಗಾಗಿ 9480818013, 9480818010, 080-44554444 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಏಪ್ರಿಲ್ 13ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
CRPF Recruitment 2026: 9,000ಕ್ಕೂ ಹೆಚ್ಚು ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ; ಕನ್ನಡಿಗರಿಗೂ ಇದೆ ಮೀಸಲಾತಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ












Click it and Unblock the Notifications