ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಐಎಎಸ್, ಕೆಎಎಸ್, ಬ್ಯಾಂಕಿಂಗ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

By Staff
|
Google Oneindia Kannada News

ಕೊಪ್ಪಳ, ಜೂ. 01 : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಸಕ್ತ ಸಾಲಿನ ಐಎಎಸ್, ಕೆಎಎಸ್ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡಲು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜೂನ್ 30.

ಉಚಿತವಾಗಿ ತರಬೇತಿ ಪಡೆಯಲು ಬಯಸುವ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಇಲಾಖೆಯ ವೆಬ್‍ಸೈಟ್ www.backwardclasses.kar.nic.in ಭೇಟಿ ನೀಡಿ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Applications invites for free IAS, KAS and bank exam coaching

ಷರತ್ತುಗಳು : ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹಿಂದೆ ಇಲಾಖೆ ನಡೆಸಿದ ಯಾವುದೇ ಸ್ಮರ್ಧಾತ್ಮಕ ಪರೀಕ್ಷೆ ತರಬೇತಿ ಶಿಬಿರದಲ್ಲಿ ಪಾಲ್ಗೊಂಡಿರಬಾರದು. ಬ್ಯಾಂಕಿಂಗ್ ಹಾಗೂ ಐಎಎಸ್, ಕೆಎಎಸ್ ತರಬೇತಿಗೆ ಒಂದೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. [1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ]

ತರಬೇತಿಯ ಅವಧಿ : ಐಎಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 7-9 ತಿಂಗಳು. ಕೆಎಎಸ್ ಪೂರ್ವಭಾವಿ ಮತ್ತು ಮುಖ್ಯ ಪರೀಕ್ಷೆ 7 ತಿಂಗಳು. ಬ್ಯಾಂಕಿಂಗ್ ಪ್ರೊಬೇಷನರಿ ಆಫೀಸರ್ಸ್ ಬ್ಯಾಂಕಿಂಗ್ ನೇಮಕಾತಿಯ ಸಮಗ್ರ ವಿಷಯಗಳು 3 ತಿಂಗಳು.

ಹೆಚ್ಚಿನ ಮಾಹಿತಿಗಾಗಿ 9480818013, 9480818010, 080-44554444 ದೂರವಾಣಿ ಸಂಖ್ಯೆಗಳಿಗೆ ಕರೆ ಮಾಡಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಕೊಪ್ಪಳ ಜಿಲ್ಲಾ ಅಧಿಕಾರಿ ಬಿ. ಕಲ್ಲೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Karnataka Backward Classes Welfare Department invited online applications for free IAS, KAS and bank exam coaching. June 30, 2015 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X