ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜೀವ್‌ ಗಾಂಧಿ ಮಾನವಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಮೇ 06 : ರಾಜೀವ್‌ ಗಾಂಧಿ ಮಾನವಸೇವಾ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಭಾರತ ಸರ್ಕಾರ ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣೆ ಹಾಗೂ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ 10 ವರ್ಷಕ್ಕಿಂತ ಹೆಚ್ಚಿನ ಸೇವೆಯನ್ನು ಸಲ್ಲಿಸಿರುವಂತಹ ವ್ಯಕ್ತಿಗಳನ್ನು ಗುರುತಿಸಿ ಪ್ರಶಸ್ತಿ ನೀಡುತ್ತದೆ. ಅರ್ಜಿ ಸಲ್ಲಿಸಲು ಮೇ 25, 2016 ಕೊನೆಯ ದಿನ.

ರಾಜೀವ್‌ ಗಾಂಧಿ ಮಾನವಸೇವಾ ಪ್ರಶಸ್ತಿಯನ್ನು ಮೂವರು ವ್ಯಕ್ತಿಗಳಿಗೆ ನೀಡಿ ಗೌರವಿಸಲಾಗುತ್ತದೆ. ಪ್ರತಿ ವ್ಯಕ್ತಿಗೆ ನೀಡುವ ಪ್ರಶಸ್ತಿಯು ರೂ. 1 ಲಕ್ಷ ನಗದು ಬಹುಮಾನ, ಬೆಳ್ಳಿ ಫಲಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ. ಸಂಘ-ಸಂಸ್ಥೆಗಳಲ್ಲಿ ವೇತನ ಪಡೆಯುವ ವ್ಯಕ್ತಿಗಳು ಈ ಪ್ರಶಸ್ತಿಗೆ ಅರ್ಹರಾಗಿರುವುದಿಲ್ಲ. [ಕೊಹ್ಲಿಗೆ ಖೇಲ್ ರತ್ನ, ರಹಾನೆಗೆ ಅರ್ಜುನ ಪ್ರಶಸ್ತಿ?]

rajiv gandhi

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಹಲವು ವರ್ಷ ಉತ್ತಮ ಸೇವೆ ಸಲ್ಲಿಸಿದ 5 ಸಂಸ್ಥೆಗಳಿಗೆ ಪ್ರಶಸ್ತಿ ನೀಡುವ ಯೋಜನೆಯನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿರುತ್ತದೆ. ಪ್ರತಿ ಸಂಸ್ಥೆಗೆ ನೀಡುವ ಪ್ರಶಸ್ತಿಯು ರೂ. 3 ಲಕ್ಷ ನಗದು ಹಾಗೂ ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟಿರುವ ಸಮಿತಿಯು ಪ್ರಶಸ್ತಿಗಳಿಗೆ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ, ಅತ್ಯುತ್ತಮ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳನ್ನು ಆಯ್ಕೆ ಮಾಡಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತದೆ.

ಅರ್ಜಿ ನಮೂನೆಗಳನ್ನು ಆಯಾ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ಕಛೇರಿಯಿಂದ ಪಡೆದು, ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಸಂಬಂಧಪಟ್ಟ ಜಿಲ್ಲಾ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಲ್ಲಿಸಬೇಕು.

English summary
Applications have been invited from eligible candidates for conferring Rajiv Gandhi Manav seva award. Award will presented for persons who have made contribution in the field of child protection and welfare. May 25, 2016 last date for submit application.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X