ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಹೈಕೋರ್ಟ್‌ನಲ್ಲಿ 148 ಟೈಪಿಸ್ಟ್ ಹುದ್ದೆಗಳು ಖಾಲಿ

|
Google Oneindia Kannada News

ಬೆಂಗಳೂರು, ಡಿ. 9 : ಕರ್ನಾಟಕ ಹೈಕೋರ್ಟ್‌ನಲ್ಲಿ 148 ಟೈಪಿಸ್ಟ್ ಹುದ್ದೆಗಳಿಗಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 22.

18 ರಿಂದ 35 ವರ್ಷ ವಯೋಮಿತಿಯ ಅಭ್ಯರ್ಥಿಗಳು ಡಿಸೆಂಬರ್ 22ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಡಿಸೆಂಬರ್ 24 ಕೊನೆಯ ದಿನವಾಗಿದೆ. [ನೇಮಕಾತಿ ಆದೇಶ ಇಲ್ಲಿದೆ]

High Court

ವಿದ್ಯಾರ್ಹತೆ : ವಿಜ್ಞಾನ, ಕಲಾ, ವಾಣಿಜ್ಯ ಮತ್ತು ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಸಾಮಾನ್ಯ ವರ್ಗದವರು ಶೇ 55 ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡದವರು ಶೇ 50 ರಷ್ಟು ಅಂಕಗಳನ್ನು ಪಡೆದು ಉತ್ತೀರ್ಣರಾಗಿರಬೇಕು. [ಅರ್ಜಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ]

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸೀನಿಯರ್ ಗ್ರೇಡ್ ಟೈಪ್‌ ರೈಟಿಂಗ್ ಪರೀಕ್ಷೆಯಲ್ಲಿ ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ಇಂಗ್ಲಿಶ್‌ನಲ್ಲಿ ಓದಿ]

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರೂ.250 ರೂ.ಗಳ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿದೆ. ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಡಿಸೆಂಬರ್ 24 ಕೊನೆಯ ದಿನವಾಗಿದೆ.

English summary
Karnataka High Court recruiting 148 Typist posts and applications invited. Last date to submit applications December 22.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X