• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಉಡುಪಿ ಕಂದಾಯ ಇಲಾಖೆಯಲ್ಲಿ ಹುದ್ದೆಗಳು ಖಾಲಿ ಇವೆ

|

ಉಡುಪಿ, ಡಿ.1 : ಉಡುಪಿ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ (Village Accountants) ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 30 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಡಿ.20 ಕೊನೆಯ ದಿನಾಂಕವಾಗಿದೆ.

ವಯೋಮಿತಿ : ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 18ರಿಂದ 38, ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿ ನಿಗದಿ ಪಡಿಸಲಾಗಿದೆ.

ದ್ವಿತೀಯ ಪಿಯುಸಿ ಅಥವ 12ನೇ ತರಗತಿಯನ್ನು ಐಸಿಎಸ್‌ಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಜೆಒಸಿ, ಡಿಪ್ಲೊಮೋ ಮುಂತಾದ ವಿದ್ಯಾರ್ಹತೆಯನ್ನು ಪರಿಗಣಿಸಲಾಗುವುದಿಲ್ಲ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ನೇಮಕಾತಿ ಆದೇಶ ಇಲ್ಲಿದೆ]

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಹಾಗೂ ಮಹಿಳಾ ಅಭ್ಯರ್ಥಿಗಳಿಗೆ 250 ರೂ. ಅರ್ಜಿ ಶುಲ್ಕ, ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ 500 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕವನ್ನು http://udupi.nic.in ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಚಲನ್ ಮುದ್ರಿತ ಪ್ರತಿ ತೆಗೆದುಕೊಂಡು ಸಿಂಡಿಕೇಟ್ ಅಥವ ಕಾರ್ಪೊರೇಷನ್ ಬ್ಯಾಂಕ್‌ನಲ್ಲಿ ಪಾವತಿಸಿ ಸ್ವೀಕೃತಿ ಪಡೆಯಬೇಕು.

ಡಿಸೆಂಬರ್ 20ರೊಳಗೆ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿಯು http://udupi-va.kar.nic.in/ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Government of Karnataka, Revenue Department invites applications for recruitment of Village Accountants for filing up 30 Vacancies. Eligible candidates apply online before 20th December 2014.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more