ಬೆಸ್ಕಾಂನಲ್ಲಿ 628 ಹುದ್ದೆಗಳು ಖಾಲಿ ಇವೆ ಅರ್ಜಿ ಹಾಕಿ
ಬೆಂಗಳೂರು, ಫೆ. 19 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಅಸಿಸ್ಟೆಂಟ್ ಲೈನ್ ಮೆನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ. 628 ಹುದ್ದೆಗಳಿದ್ದು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13.
ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳನ್ನು ಬೆವಿಕಂ ಕಂಪನಿಯ ನೌಕರರೆಂದು ಪರಿಗಣಿಸಲಾಗುತ್ತದೆ. ಬೆಂವಿಕಂ ವ್ಯಾಪ್ತಿಯಲ್ಲಿನ ಯಾವುದೇ ಸ್ಥಳಗಳಿಗೆ ನಿಯೋಜನೆ ಮಾಡಲಾಗುತ್ತದೆ. ಖಾಲಿ ಇರುವ ಸ್ಥಳಗಳಿಗೆ ಸಮಾಲೋಚನೆ ಮೆರಿಟ್ ಆಧಾರದ ಮೇಲೆ ನಿಯೋಜನೆಗೊಳಿಸಲಾಗುತ್ತದೆ. [ನೇಮಕಾತಿ ಆದೇಶ ಕನ್ನಡದಲ್ಲಿ ಓದಿ]

ವಿದ್ಯಾರ್ಹತೆ : ಐಟಿಐ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಸರ್ಕಾರದಿಂದ ಮನ್ನಣೆ ಪಡೆದ ಔದ್ಯೋಗಿಕ ತರಬೇತಿ ಕೇಂದ್ರ/ಸಂಸ್ಥೆಗಳಿಂದ ಎಲೆಕ್ಟ್ರೀಷಿಯನ್/ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಾನಿಕ್ ಮೆಕ್ಯಾನಿಕ್ ವೃತ್ತಿಯಲ್ಲಿ 18/24 ತಿಂಗಳಿನ ಪಠ್ಯಕ್ರಮದಲ್ಲಿ ಉತ್ತೀರ್ಣರಾಗಿರುವ ಐಟಿಐ ಪ್ರಮಾಣ ಪತ್ರ ಪಡೆದಿರಬೇಕು. [ಇಂಗ್ಲಿಶ್ ನಲ್ಲಿ ಓದಲು ಇಲ್ಲಿ ಕ್ಲಿಕ್ ಮಾಡಿ]
ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್‌ಸಿ/ಎಸ್‌ಟಿ ಮತ್ತು ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ. [ಬೆಸ್ಕಾಂ ವೆಬ್ ಸೈಟ್ ನೋಡಿ]
ಅರ್ಜಿ ಶುಲ್ಕ : ಸಾಮಾನ್ಯ/ಪ್ರವರ್ಗ1/2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳು 400 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 200 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಅರ್ಜಿಯನ್ನು http://bescom.org/ ವೆಬ್‌ಸೈಟ್ ಮೂಲಕ ಸಲ್ಲಿಸಬಹುದಾಗಿದೆ. ಮಾರ್ಚ್ 14ರವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿರುವ ಅಂಚೆ ಚಲನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. ಅರ್ಜಿ ಸಲ್ಲಿಸಿದ ನಂತರ ಅರ್ಜಿ ಮತ್ತು ಆನ್ ಲೈನ್ ಅಂಚೆ ಚಲನ್‌ನ ಮುದ್ರಿತ ಪ್ರತಿಯನ್ನು ಅಭ್ಯರ್ಥಿಗಳು ಪಡೆದುಕೊಳ್ಳಬಹುದು.












Click it and Unblock the Notifications