ಹಾವೇರಿ ಅಬಕಾರಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

ಹಾವೇರಿ, ಮಾ. 25 : ಹಾವೇರಿ ಜಿಲ್ಲೆಯ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ವಾಹನ ಚಾಲಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್, ಅಂಚೆ ಅಥವ ಖುದ್ದಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31, 2015.

ಒಟ್ಟು 5 ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ಉತ್ತೀರ್ಣರಾಗಿರಬೇಕು. 7ನೇ ತರಗತಿಗಿಂತ ಹೆಚ್ಚು ಓದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆದರೆ, ನೇಮಕಾತಿ ಸಂದರ್ಭದಲ್ಲಿ 7ನೇ ತರಗತಿ ಅಂಕಗಳನ್ನು ಮಾನದಂಡವಾಗಿ ಪರಿಗಣಿಸಲಾಗುತ್ತದೆ. [ಹಾವೇರಿ ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

Jobs

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಚಾಲನಾ ಪರವಾನಿಗೆ ಹೊಂದಿರಬೇಕು. ಚಾಲ್ತಿಯಲ್ಲಿರುವ ಪ್ರಥಮ ಚಿಕಿತ್ಸಾ ದೃಡೀಕರಣ ಪತ್ರವನ್ನು ಹೊಂದಿರಬೇಕು. ಕಚೇರಿ ಅವಧಿಯಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮಾರ್ಚ್ 2015. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

ವಯೋಮಿತಿ : ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕೊನೆಯ ದಿನಾಂದಕದಂದು ಕೆಳಗಿನಂತೆ ವಯೋಮಿತಿ ಹೊಂದಿರತಕ್ಕದ್ದು. ಪರಿಶಿಷ್ಟ ಜಾತಿ 18 ರಿಂದ 40 ವರ್ಷ, ಹಿಂದುಳಿದ ವರ್ಗ 18 ರಿಂದ 38 ವರ್ಷ, ಸಾಮಾನ್ಯ ವರ್ಗ 18 ರಿಂದ 35 ವರ್ಷ.

ಅರ್ಜಿ ಶುಲ್ಕ : ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ 25 ರೂ., ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 50 ರೂ. ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಥವ ಅಂಚೆ/ಖುದ್ದಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಂಚೆ ಮೂಲಕ ಸಲ್ಲಿಸಲು ವಿಳಾಸ : ಡೆಪ್ಯೂಟಿ ಕಮೀಶನರ್ ಆಫ್ ಎಕ್ಸೈಜ್ , ಹಾವೇರಿ ಜಿಲ್ಲೆ, ನಂ.13, ಎ ಬ್ಲಾಕ್, ಜಿಲ್ಲಾಡಳಿತ ಭವನ, ದೇವಗಿರಿ, ಹಾವೇರಿ 581110. ಆನ್‌ ಲೈನ್ ಮೂಲಕ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

ಷರತ್ತುಗಳು : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಜ್ಞಾನ ಕಡ್ಡಾಯವಾಗಿರುತ್ತದೆ. ಅಪೂರ್ಣವಾದ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ. ಆಯ್ಕೆಯಾಗುವ ಅಭ್ಯರ್ಥಿಗಳು ಹಾವೇರಿ ಜಿಲ್ಲೆಯ ಯಾವುದೇ ತಾಲೂಕಿನಲ್ಲೂ ಕೆಲಸ ಮಾಡಲು ಸಿದ್ಧವಿರಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+