ಡಿಎಲ್ ಪಡೆಯಲು ಇನ್ನು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿ
ಬೆಂಗಳೂರು, ಜ. 21 : ಇನ್ನು ಮುಂದೆ ಡ್ರೈವಿಂಗ್ ಲೈಸೆನ್ಸ್, ವಾಹನಗಳ ನೋಂದಣಿ ಮುಂತಾದವುಗಳನ್ನು ಮಾಡಿಸಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸಾರಿಗೆ ಇಲಾಖೆ ಆನ್ಲೈನ್ ವ್ಯವಸ್ಥೆ ಜಾರಿಗೆ ತರಲು ಮುಂದಾಗಿದ್ದು, ಫೆಬ್ರವರಿಯಿಂದ ಈ ಸೇವೆ 12 ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ.
ಒಂದಕ್ಕಿಂತ ಹೆಚ್ಚು ಪ್ರಾದೇಶಿಕ ಸಾರಿಗೆ ಕಛೇರಿಗಳಿರುವ ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾಹನಗಳ ನೋಂದಣಿ, ಕಲಿಕೆ ಮತ್ತು ಚಾಲನಾ ಪರವಾನಿಗೆ ಪತ್ರಗಳನ್ನು ಪಡೆಯಲು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಯಾವ ಜಿಲ್ಲೆಗಳು : ಆನ್ಲೈನ್ ಸೇವೆಗಳನ್ನು ರಾಜ್ಯದಲ್ಲಿ ಒಂದಕ್ಕಿಂತ ಹೆಚ್ಚು ಪ್ರಾದೇಶಿಕ/ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿಗಳಿರುವ 12 ಜಿಲ್ಲೆಗಳಲ್ಲಿ ಆರಂಭಿಸಲಾಗುತ್ತದೆ. [ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯವಾಗಲಿದೆ!]
ಮೈಸೂರು, ಕೋಲಾರ, ತುಮಕೂರು, ಮಂಡ್ಯ, ಹಾಸನ, ಶಿವಮೊಗ್ಗ, ಮಂಗಳೂರು, ಬೆಳಗಾವಿ, ಬಾಗಲಕೋಟೆ, ಕಾರವಾರ, ಬಳ್ಳಾರಿ, ಬೀದರ್ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಜಾರಿಗೆ ಬರಲಿದೆ. ಫೆಬ್ರವರಿ 15ರಿಂದ ಕಡ್ಡಾಯವಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಜ.15ರಿಂದ ಈ ವ್ಯವಸ್ಥೆ ಪ್ರಾಯೋಗಿಕವಾಗಿ 12 ಜಿಲ್ಲೆಗಳಲ್ಲಿ ಜಾರಿಗೆ ಬರಲಿದ್ದು, ಈ ಜಿಲ್ಲೆಗಳಲ್ಲಿನ ಜನರು ತಮ್ಮ ಜಿಲ್ಲೆಯ ಯಾವುದೇ ಪ್ರಾದೇಶಿಕ / ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಕಲಿಕಾ ಪರವಾನಗಿ, ಹೊಸ ಚಾಲನಾ ಪರವಾನಗಿ ಮತ್ತು ಹೊಸ ವಾಹನ ನೋಂದಣಿಗಾಗಿ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ರಾಜ್ಯದ ಉಳಿದ ಜಿಲ್ಲೆಗಳಲ್ಲಿಯೂ ಮಾರ್ಚ್ 2015ರಿಂದ ಆನ್ಲೈನ್ ಸೇವೆ ಆರಂಭಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ. ಅದರಂತೆ ಎಲ್ಲಾ ಜಿಲ್ಲೆಗಳಲ್ಲೂ ಈ ವರ್ಷಾಂತ್ಯದಲ್ಲಿ ಈ ಯೋಜನೆ ಜಾರಿಗೆ ಬರಲಿದೆ. ಅರ್ಜಿ ಸಲ್ಲಿಸಲು ವಿಳಾಸ http://www.rto.kar.nic.in/
-
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
KEA Recruitment: ವಾಯುವ್ಯ ಸಾರಿಗೆ ಸಂಸ್ಥೆ ನೇಮಕಾತಿ ಪರೀಕ್ಷೆಗಳ ದಿನಾಂಕ ಬದಲಾವಣೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು?










Click it and Unblock the Notifications