ಆರೋಗ್ಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಮಾ. 26 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಕಿರಿಯ ಪ್ರಯೋಗಶಾಲಾ ತಂತ್ರಜ್ಞ ಮತ್ತು ನೇತ್ರ ಸಹಾಯಕರು ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 22, 2015.
ಕಿರಿಯ ಪ್ರಯೋಗಶಾಲಾ ತಂತ್ರಜ್ಞರ 19 ಮತ್ತು ನೇತ್ರ ಸಹಾಯಕರ 3 ಹುದ್ದೆಗಳು ಖಾಲಿ ಇವೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಪಡೆದು ಸಲ್ಲಿಕೆ ಮಾಡಬಹುದಾಗಿದೆ. [ನೇಮಕಾತಿ ಆದೇಶ, ಅರ್ಜಿ ಇಲ್ಲಿದೆ]

ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಸುವುದಾದದರೆ ಪತ್ಯೇಕ ಅರ್ಜಿ ಸಲ್ಲಿಸಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಪರಿಶಿಷ್ಟ ಜಾತಿ/ಪಂಗಡದ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಶುಲ್ಕವನ್ನು ಮುಖ್ಯ ಆಡಳಿತಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಸೇವೆಗಳ ನಿರ್ದೇಶನಾಲಯ ಇವರ ಹೆಸರಿಗೆ ರಾಷ್ಟ್ರೀಕೃತ ಬ್ಯಾಂಕ್‌ನಿಂದ ಡಿಡಿಯನ್ನು ಪಡೆದು ಅರ್ಜಿಯೊಂದಿಗೆ ಲಗತ್ತಿಸಬೇಕು. [ಹಾವೇರಿ ಅಬಕಾರಿ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]
ವಯೋಮಿತಿ : ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷ ಗರಿಷ್ಠ 40 ವರ್ಷಗಳನ್ನು ಮೀರಿಬಾರದು. ಅರ್ಜಿಯನ್ನು www.karhfw.gov.in ವೆಬ್ ಸೈಟ್ ಮೂಲಕ ಪಡೆದು ಭರ್ತಿ ಮಾಡಿ, ಏಪ್ರಿಲ್ 22ರೊಳಗೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ವಿಳಾಸ : ನಿರ್ದೇಶಕರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ಡಿಆರ್‌ಸಿ ವಿಭಾಗ, ಕೊಠಡಿ ಸಂಖ್ಯೆ 302, ಮೂರನೇ ಮಹಡಿ, ಐಪಿಪಿ ಕಟ್ಟಡ, ಆನಂದರಾವ್ ವೃತ್ತ 560009.












Click it and Unblock the Notifications