ಚಿಕ್ಕಮಗಳೂರಿನಲ್ಲಿ 56 ಗ್ರಾಮ ಲೆಕ್ಕಿಗರ ಹುದ್ದೆ ಖಾಲಿ ಇವೆ
ಚಿಕ್ಕಮಗಳೂರು, ಫೆ. 17 : ಚಿಕ್ಕಮಗಳೂರು ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 56 ಹುದ್ದೆಗಳಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 13.
ದ್ವಿತೀಯ ಪಿಯುಸಿ ಅಥವ 12ನೇ ತರಗತಿಯನ್ನು ಸಿಬಿಎಸ್‌ಸಿ/ಐಸಿಎಸ್‌ಸಿ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿದೆ. [ನೇಮಕಾತಿ ಆದೇಶ ಕನ್ನಡದಲ್ಲಿ ಓದಿ]

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 35, 2ಎ/2ಬಿ/3ಎ/3ಬಿ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 38, ಪ್ರವರ್ಗ 1/ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 18 ರಿಂದ 40 ವರ್ಷ ವಯೋಮಿತಿ ನಿಗದಿಗೊಳಿಸಲಾಗಿದೆ. [ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ]
ಅರ್ಜಿ ಶುಲ್ಕ : ಎಸ್‌ಸಿ/ಎಸ್‌ಟಿ/ಪ್ರವರ್ಗ 1 ರ ಅಭ್ಯರ್ಥಿಗಳಿಗೆ 150 ರೂ. ಅರ್ಜಿ ಶುಲ್ಕ, ಸಾಮಾನ್ಯ/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ. ಅರ್ಜಿ ಶುಲ್ಕವನ್ನು ನಿಗದಿಗೊಳಿಸಲಾಗಿದೆ. ಅರ್ಜಿ ಶುಲ್ಕವನ್ನು ಎಸ್‌ಬಿಎಂ ಚಿಕ್ಕಮಗಳೂರು ಶಾಖೆಯ ಎಸ್‌ಬಿ ಖಾತೆ 64050347617 ಖಾತೆಗೆ ಜಮಾ ಮಾಡಬೇಕು. ಐಎಫ್‌ಸಿ ಕೋಡ್ SBMY0040143.
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಅಂಚೆ ಅಥವ ಖುದ್ದಾಗಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಮಾರ್ಚ್ 13ರ ಸಂಜೆ 5.30ರೊಳಗೆ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ http://chikmagalur-va.kar.nic.in/.












Click it and Unblock the Notifications