ರಾಮನಗರ : ಗ್ರಾಮ ಲೆಕ್ಕಿಗರ ಹುದ್ದೆಗಳು ಖಾಲಿ ಇವೆ
ರಾಮನಗರ, ಜ. 19 : ರಾಮನಗರ ಜಿಲ್ಲೆಯ ತಾಲೂಕು ಕಚೇರಿಗಳ ಭೂಮಿ ಕೇಂದ್ರಗಳಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗಳ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 15.
ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಕರ್ನಾಟಕ ನಾಗರೀಕ ಸೇವೆಗಳು (ಕೆಡರ್ ಅಂಡ್ ರೆಕ್ರೂಟ್‌ಮೆಂಟ್) ನಿಯಮಗಳು 1977ರಂತೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು ಹುದ್ದೆಗಳ ಸಂಖ್ಯೆ 50.

ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಅಥವಾ ಐ.ಸಿ.ಎಸ್.ಇ (ICSE) ಅವರು ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. [ಉದ್ಯೋಗದ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]
ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕಾಗಿದ್ದು, ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಿದರೆ ಸ್ವೀಕರಿಸಲಾಗುವುದಿಲ್ಲ. [ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ]
ಅರ್ಜಿ ಶುಲ್ಕ : ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರೂ.250 (30 ರೂ. ಬ್ಯಾಂಕ್ ಶುಲ್ಕ ಹೊರತುಪಡಿಸಿ), ಸಾಮಾನ್ಯ ವರ್ಗ, 2ಎ, 2ಬಿ, 3ಎ, 3ಬಿ ವರ್ಗಕ್ಕೆ ರೂ.500 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ 080-27276614 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications