ರಾಜ್ಯ ಸರ್ಕಾರದ ವಕ್ತಾರರಾಗಿ ಐವರು ಸಚಿವರ ನೇಮಕ: ಇಲ್ಲಿದೆ ಪಟ್ಟಿ

ಬೆಂಗಳೂರು, ಮಾರ್ಚ್‌ 13: ರಾಜ್ಯ ಸರ್ಕಾರದ ಸಾಧನೆ, ಕಾರ್ಯವೈಖರಿ ಮತ್ತು ಯೋಜನೆಗಳನ್ನು ಜನರಿಗೆ ತಿಳಿಸುವ ನಿಟ್ಟಿನಲ್ಲಿ ಐವರು ಪ್ರಭಾವಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.

ಹೌದು, ರಾಜ್ಯ ಸರ್ಕಾರದ ವಕ್ತಾರರನ್ನಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್​ ಗುಂಡೂರಾವ್​, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ಮಾಹಿತಿ ಹಾಗೂ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ ಜೀವಿ ಪರಿಸ್ಥಿತಿ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ, ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಅವರನ್ನು ನೇಮಕ ಮಾಡಲಾಗಿದೆ.

Appointed Five Ministers As Spokesperson Of The Karnataka Congress Government

ಐದು ಮಂದಿ ಸಚಿವರನ್ನು ರಾಜ್ಯ ಸರ್ಕಾರದ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಸಚಿವರುಗಳಿಗೆ ಸರ್ಕಾರದ ಸಾಧನೆಗಳು, ದಾಖಲೆಗಳು ಮತ್ತು ಮಾಹಿತಿಗಳನ್ನು ಕಾಲಕಾಲಕ್ಕೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಎಲ್ಲಾ ಇಲಾಖಾ ಮುಖ್ಯಸ್ಥರುಗಳಿಗೆ ಸೂಕ್ತ ನಿರ್ದೇಶನ ನೀಡಲು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸರ್ಕಾರದ ವಕ್ತಾರರಾಗಿ ನೇಮಕಗೊಂಡಿರುವ ಈ ಎಲ್ಲಾ ಸಚಿವರು ಸರ್ಕಾರದ ಸಾಧನೆಗಳನ್ನು ಸಮರ್ಥವಾಗಿ ರಾಜ್ಯದ ಜನರ ಮುಂದಿಡಲಿದ್ದಾರೆ ಎಂಬ ಪೂರ್ಣ ವಿಶ್ವಾಸವಿದೆ.

ಇನ್ನೂ ರಾಜ್ಯ ಸರ್ಕಾರ ಐವರು ಸಚಿವರನ್ನ ವಕ್ತಾರರನ್ನಾಗಿ ನೇಮಕ ಮಾಡಿರುವ ಕುರಿತು ವಿರೋಧ ಪಕ್ಷದ ನಾಯಕರಾದ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಸಚಿವ ಸಂಪುಟದ 34 ಸಚಿವರ ಪೈಕಿ ಕೇವಲ 5 ಜನ ಮಂತ್ರಿಗಳು ಸರ್ಕಾರದ ಅಧಿಕೃತ ವಕ್ತಾರರಾದರೆ ಉಳಿದ ಸಚಿವರು ಸರ್ಕಾರವನ್ನ ಪ್ರತಿನಿಧಿಸಲು ಅಸಮರ್ಥರು ಎಂದು ತಮ್ಮ ಅಭಿಪ್ರಾಯವೇ ಸಿಎಂ ಸಿದ್ದರಾಮಯ್ಯ ನವರೇ? ಎಂದು ಪ್ರಶ್ನಿಸಿದ್ದಾರೆ.

ಈ ಪಟ್ಟಿಯಲ್ಲಿರುವ ವಕ್ತಾರರ ಪೈಕಿ ಒಬ್ಬ ಸಚಿವ ಮಹಾಶಯರಿಂದಲೇ ತಮ್ಮ ಸರ್ಕಾರ ಅತ್ಯಂತ ಮುಜುಗರಕ್ಕೆ ಒಳಗಾಗಿದೆ. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣದಲ್ಲಿ ಮಾಧ್ಯಮಗಳ ಮೇಲೆ ಸುಳ್ಳು ಆರೋಪ ಮಾಡಿ, ಮಾಧ್ಯಮಗಳನ್ನು ಪದೇ ಪದೇ ನಿಂದನೆ ಮಾಡಿ ಸತ್ಯವನ್ನು ತಿರುಚಲು ಶ್ರಮಿಸಿದ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಇದು ತಾವು ನೀಡುತ್ತಿರುವ ಬಹುಮಾನವೇ ಸಿದ್ದರಾಮಯ್ಯನವರೇ? ಎಂದು ಕೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+