BREAKING: ತೀವ್ರ ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ ರಾಜಕೀಯ ಕಾರ್ಯದರ್ಶಿಗಳ ನೇಮಕ!
ಬೆಂಗಳೂರು, ಸೆ. 30: ಮಹತ್ವದ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳನ್ನು ನೇಮಕ ಮಾಡಲಾಗಿದೆ. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಬೊಮ್ಮಾಯಿ ಅವರು ಇಬ್ಬರು ಮಾಜಿ ಸಚಿವರನ್ನು ತಮ್ಮ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಿಸಿಕೊಂಡಿದ್ದಾರೆ. ಆ ಮೂಲಕ ಯಡಿಯೂರಪ್ಪ ಆಪ್ತರನ್ನು ಸಮಾಧಾನ ಮಾಡುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗುತ್ತಿದೆ.
ಇಬ್ಬರೂ ರಾಜಕೀಯ ಕಾರ್ಯದರ್ಶಿಗಳು ಕೂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರು ಎಂಬುದು ಗಮನಿಸಬೇಕಾದ ಅಂಶ. ಜೊತೆಗೆ ಇಬ್ಬರೂ ನಾಯಕರು ಈ ಹಿಂದೆಯೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಈ ಹಿಂದೆ ಕೆಲಸ ಮಾಡಿರುವ ಅನುಭವ ಹೊಂದಿದ್ದಾರೆ. ಇಬ್ಬರಿಗೂ ಸಂಪುಟ ದರ್ಜೆ ಸ್ಥಾನಮಾನ ಕೊಡಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜಕೀಯ ಕಾರ್ಯದರ್ಶಿಗಳ ನೇಮಕದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರ ಪ್ರಭಾವ ಕಂಡು ಬಂದಿದೆ. ಅಷ್ಟಕ್ಕೂ ಅದಕ್ಕೆ ಕಾರಣ ಏನು? ಮುಂದಿದೆ ಮಾಹಿತಿ.

ಸಿಎಂ ಬೊಮ್ಮಾಯಿಗೆ ಹೈಕಮಾಂಡ್ ಕೊಟ್ಟಿದ್ದ ಸೂಚನೆ!
ಮಾಜಿ ಸಿಎಂ ಯಡಿಯೂರಪ್ಪ ಅವರ ಪ್ರಭಾವದಿಂದ ರಾಜ್ಯ ಸರ್ಕಾರ ಇನ್ನೂ ಹೊರಗೆ ಬಂದಿಲ್ಲವಾ? ಅಂಥದ್ದೊಂದು ಚರ್ಚೆ ಇದೀಗ ಬಿಜೆಪಿ ವಲಯದಲ್ಲಿ ಆರಂಭವಾಗಿದೆ. ರಾಜ್ಯ ನಾಯಕತ್ವ ಬದಲಾವಣೆ ಬಳಿಕ ಪ್ರಮುಖವಾಗಿ 'ಶಾಡೋ ಸಿಎಂ' ಆಗಬೇಡಿ ಎಂಬ ಸೂಚನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಿಜೆಪಿ ಹೈಕಮಾಂಡ್ ಕೊಟ್ಟಿತ್ತು ಎನ್ನಲಾಗಿತ್ತು. ಜೊತೆಗೆ ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, "ಮುಂದಿನ ಚುನಾವಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಎದುರಿಸುತ್ತೇವೆ" ಎಂದು ಹೇಳಿಕೆ ನೀಡಿದ್ದರು. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಯೊಳಗೆ ಯಡಿಯೂರಪ್ಪ ಅವರ ಪ್ರಭಾವದಿಂದ ಬಿಜೆಪಿಯನ್ನು ಹೊರತರಲು ಬಿಜೆಪಿ ಹೈಕಮಾಂಡ್ ಯೋಜನೆ ರೂಪಿಸಿಕೊಂಡಿದೆ ಎನ್ನಲಾಗಿತ್ತು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಪ್ತರು!
ಆದರೆ ಇದೀಗ ರಾಜ್ಯ ಸರ್ಕಾರ ಮಾಜಿ ಸಿಎಂ ಯಡಿಯೂರಪ್ಪ ಅವರ ಪ್ರಭಾವದಿಂದ ಹೊರಗೆ ಬಂದಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. ಅದಕ್ಕೆ ತಾಜಾ ಉದಾಹರಣೆಯಾಗಿ ಮುಖ್ಯಮಂತ್ರಿಗಳ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕಾತಿಯಾಗಿದೆ. ಇಬ್ಬರೂ ಸಿಎಂ ರಾಜಕೀಯ ಕಾರ್ಯದರ್ಶಿಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರು. ಮಾಜಿ ಸಚಿವ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹಾಗೂ ಶೃಂಗೇರಿ ಮಾಜಿ ಶಾಸಕ, ಮಾಜಿ ಸಚಿವ ಜೀವರಾಜ್ ಅವರನ್ನು ನೇಮಕ ಮಾಡಲಾಗಿದೆ. ಇಬ್ಬರೂ ನಾಯಕರು ಮಾಜಿ ಸಿಎಂ ಯಡಿಯೂರಪ್ಪ ಅವರ ಅತ್ಯಾಪ್ತರು.

ಮಾಜಿ ಸಿಎಂ ಯಡಿಯೂರಪ್ಪ ಪರ ಸಹಿ ಸಂಗ್ರಹ!
ಎರಡು ತಿಂಗಳುಗಳ ಹಿಂದೆ ರಾಜ್ಯ ಬಿಜೆಪಿ ನಾಯಕತ್ವದ ಸಂದರ್ಭದಲ್ಲಿ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಗಳಾಗಿ ಮುಂದುವರೆಯಬೇಕು ಎಂದು ಹೊನ್ನಾಳಿ ಶಾಸಕ, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಶಾಸಕರ ಸಹಿ ಸಂಗ್ರಹ ಮಾಡಿದ್ದರು. ಆಮೂಲಕ ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಲು ಪ್ರಯತ್ನಿಸಿದ್ದರು. ಆದರೆ ಕೊನೆಗೆ ಹೈಕಮಾಂಡ್ ಕೊಟ್ಟಿದ್ದ ಎಚ್ಚರಿಯಿಂದ ತಣ್ಣಗಾಗಿದ್ದರು ಎಂಬ ಮಾತುಗಳು ಬಿಜೆಪಿ ವಲದಯಿಂದಲೇ ಕೇಳಿ ಬಂದಿದ್ದವು. ಇದೀಗ ಅವರನ್ನೇ ಸಿಎಂ ರಾಜಕೀಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಮಾಜಿ ಸಚಿವ ಜೀವರಾಜ ಕೂಡ ಯಡಿಯೂರಪ್ಪ ಆಪ್ತ ವಲಯದಲ್ಲಿಯೇ ಗುರುತಿಸಿಕೊಂಡಿದ್ದಾರೆ.
|
ಅಧಿಕಾರಿಗಳ ನೇಮಕದಲ್ಲಿಯೂ..!
ಇದೇ ಸಂದರ್ಭದಲ್ಲಿ ಮತ್ತೊಂದು ಆರೋಪ ಕೂಡ ಕೇಳಿ ಬಂದಿದೆ. ಮುಖ್ಯಮಂತ್ರಿಗಳ ಸಚಿವಾಲಯ ಹಾಗೂ ಇತರ ಹಿರಿಯ ಅಧಿಕಾರಿಗಳ ನೇಮಕದಲ್ಲಿಯೂ ಮಾಜಿ ಮುಖ್ಯಮಂತ್ರಿಗಳ ಮಾತೇ ಅಂತಿಮ ಎನ್ನಲಾಗುತ್ತಿದೆ. ಹೀಗಾಗಿ ಬಿಜೆಪಿ ಹೈಕಮಾಂಡ್ ಕೊಟ್ಟಿದ್ದ ಸೂಚನೆಯನ್ನು ಪಾಲನೆ ಮಾಡಲು ಆಗದಂತಹ ಸಂದಿಗ್ದ ಸ್ಥಿತಿಯಲ್ಲಿದ್ದಾರೆ ಎನ್ನಲಾಗುತ್ತಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕತ್ವ ಬದಲಾವಣೆ ಮಾಡುವ ಮೂಲಕ ಹೈಕಮಾಂಡ್ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಆದರೆ ಯಡಿಯೂರಪ್ಪ ಅವರ ಪ್ರಭಾವದಿಂದ ಸರ್ಕಾರವನ್ನು ಹೊರಗೆ ತರುವಲ್ಲಿ ಬಿಜೆಪಿ ಹೈಕಮಾಂಡ್‌ಗೆ ಹಿನ್ನಡೆಯಾಗಿದೆಯಾ? ಎಂಬ ಚರ್ಚೆಗಳು ನಡೆದಿವೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications