Get Updates
Get notified of breaking news, exclusive insights, and must-see stories!

ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ, ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು, ಡಿಸೆಂಬರ್ 18; ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠಕ್ಕೆ ನಿವೃತ್ತ ಐಎಎಸ್ ಅಧಿಕಾರಿ ಪಿ. ಎಸ್. ವಸ್ತ್ರದ್‌ರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿದೆ.

ಮಠದ ಭಕ್ತರಾದ ಡಿ. ಎಸ್. ಮಲ್ಲಿಕಾರ್ಜುನ ಸೇರಿದಂತೆ ಮೂವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಏಕಸದಸ್ಯಪೀಠ ಶುಕ್ರವಾರ ವಾದ-ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿತು.

ಅರ್ಜಿದಾರರ ಪರ ವಕೀಲರು "ಸರ್ಕಾರ ಸಂವಿಧಾನದ 172ನೇ ವಿಧಿಯಡಿ ಆಡಳಿತಾಧಿಕಾರಿ ನೇಮಕ ಮಾಡಿರುವುದು ಕಾನೂನು ಬಾಹಿರ. ಮಠಗಳ ಮೇಲೆ ನಿಯಂತ್ರಣ ಹೊಂದಲು ಕಾನೂನಿನಡಿ ಅವಕಾಶವಿಲ್ಲ. ಸಿವಿಲ್ ಪ್ರೊಸೀಜರ್ ಕೋಡ್ ಅನುಸಾರ ಕಲಂ 92ರ ಅಡಿಯಲ್ಲಿ ನಿಯಂತ್ರಣ ಹೊಂದಬಹುದು. ಆದ್ದರಿಂದ ಈ ಪ್ರಕರಣದಲ್ಲಿ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಗೊಳಿಸಬೇಕು" ಎಂದು ಕೋರಿದರು.

court

ಅಲ್ಲದೆ, "ಪ್ರತಿಯೊಂದು ಧಾರ್ಮಿಕ ಪಂಗಡಗಳಿಗೆ (ರಿಲಿಜಿಯಸ್ ಡಿನಾಮಿನೇಷನ್?ಮಠ) ಸಂವಿಧಾನದತ್ತವಾದ ಕೆಲವೊಂದು ಮೂಲಭೂತ ಹಕ್ಕುಗಳನ್ನು ಅನುಭವಿಸಲು ಅವಕಾಶವಿರುತ್ತದೆ. ಇದನ್ನು ಸುಪ್ರೀಂಕೋರ್ಟ್ ಶಿರೂರು ಮಠ ಪ್ರಕರಣದಲ್ಲಿ ಈಗಾಗಲೇ ಸ್ಪಷ್ಟಪಡಿಸಿದೆ. ಹೀಗಾಗಿ, ಮುರುಘಾಮಠ ಬಸವತತ್ವ ಅನುಸರಿಸುವ ಧಾರ್ಮಿಕವಾಗಿ ಅಲ್ಪಸಂಖ್ಯಾತರನ್ನು ಅವೈದಿಕ ಪರಂಪರೆಯ ಲಿಂಗಾಯತ ಮಠವಾಗಿದ್ದು, ಆಡಳಿತಾಧಿಕಾರಿ ನೇಮಕ ಸಂವಿಧಾನಬಾಹಿರ ಕ್ರಮ" ಎಂದರು.

ವಿರಕ್ತರ ಅವಿರಕ್ತ ನಡೆ ಸರಿಯೇ?; ನ್ಯಾಯಪೀಠ, "ರಾಜ್ಯದ ಮಠಗಳ ಇತಿಹಾಸದಲ್ಲೇ ಈ ಮಠಕ್ಕೆ ಅತ್ಯಂತ ಮಹತ್ವದ ಮತ್ತು ಗೌರವ ಘನತೆಯಿದೆ. ಈ ಮಠಕ್ಕೆ ಯಾರು ಪೀಠಾಧಿಪತಿ ಎಂಬುದು ಮುಖ್ಯವಲ್ಲ. ಇದು ಅಲ್ಲಮಪ್ರಭುಗಳು ಸ್ಥಾಪಿಸಿದ ಮಠ. ಈ ಮಠಕ್ಕೆ 1,600 ಕೋಟಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿ ಹೊಂದಿದೆ ಎಂದು ನೀವೇ ಹೇಳುತ್ತಿದ್ದೀರಿ, ವಿರಕ್ತ ಮಠ ಎನ್ನುತ್ತಿದ್ದೀರಿ, ಆದರೆ ಅವಿರಕ್ತ ನಡೆ ಸರಿಯೇ" ಎಂದು ಪ್ರಶ್ನಿಸಿತು.

ಅಷ್ಟೇ ಅಲ್ಲದೆ, ಇನ್ನೂ ಮುಂದುವರಿದು "ಒಂದು ವೇಳೆ ಶರಣರು ಜಾಮೀನು ಪಡೆದು ಹೊರಬಂದರೆ ಆಗ ಆಡಳಿತವನ್ನು ಬಿಟ್ಟುಕೊಡುತ್ತೀರಾ?" ಎಂದು ಅಡ್ವೊಕೇಟ್ ಜನರಲ್ ಅವರನ್ನು ಪ್ರಶ್ನಿಸಿತು. ಅದಕ್ಕೆ ಉತ್ತರಿಸಿದ ಎಜಿ, "ರಾಜ್ಯದ ಮಠಗಳ ಇತಿಹಾಸದಲ್ಲೇ ಪೀಠಾಧಿಪತಿಯೊಬ್ಬರು ಇಂತಹ ಗಂಭೀರ ಕ್ರಿಮಿನಲ್ ಪ್ರಕರಣದಲ್ಲಿ ಜೈಲು ಪಾಲಾದ ಉದಾಹರಣೆಗಳಿಲ್ಲ. ಒಂದು ವೇಳೆ ಶರಣರಿಗೆ ಜಾಮೀನು ದೊರೆತದ್ದೇ ಆದರೆ, ಆಗ ಸರ್ಕಾರ ಈ ಅಂಶವನ್ನು ಪರಿಶೀಲಿಸಲಿದೆ" ಎಂದು ವಿವರಿಸಿದರು.

"ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು, ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಗಂಭೀರ ಆರೋಪದಡಿ ಪೊಕ್ಸೊ ಪ್ರಕರಣದಲ್ಲಿ ಜೈಲು ಸೇರಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಜೈಲಿನಿಂದಲೇ ತಮ್ಮ ಆಣತಿಯ ಅನುಸಾರ ಮಠ ಮತ್ತು ವಿದ್ಯಾಸಂಸ್ಥೆಗಳ ಆಡಳಿತ ನಡೆಸುವುದಾದರೆ ಸಾವಿರಾರು ಕೋಟಿ ರೂಪಾಯಿ ಮೌಲ್ಯದ ಚರ ಮತ್ತು ಸ್ಥಿರಾಸ್ತಿಗೆ ಭಾರಿ ಹಾನಿಯುಂಟಾಗುತ್ತದೆ" ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿತು.

muruga mutt

ಸಾರ್ವಜನಿಕ ಟ್ರಸ್ಟ್ ರಕ್ಷಣೆಗೆ ಕ್ರಮ: "ಶರಣರು ಮಠ ಮತ್ತು ವಿದ್ಯಾಪೀಠಕ್ಕೆ ಏಕೈಕ (ಸೋಲ್) ಟ್ರಸ್ಟೀ ಮತ್ತು ಅಧ್ಯಕ್ಷರಾಗಿತಕ್ಕದ್ದು ಎಂದು 2010ರ ನವೆಂಬರ್ 26ರಂದು ಟ್ರಸ್ಟ್ ಡೀಡ್ ನಿಗದಿಪಡಿಸಲಾಗಿದೆ. ಇದರ ಅನುಸಾರ ಶರಣರು ಮಠ ಮತ್ತು ವಿದ್ಯಾಪೀಠಗಳ ಆಡಳಿತದ ಸಂಪೂರ್ಣ ಅಧಿಕಾರ ಹೊಂದಿದ್ದಾರೆ. ವಿದ್ಯಾಪೀಠದ ಅಡಿಯಲ್ಲಿ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ 150 ವಿದ್ಯಾಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿವೆ. ಇಲ್ಲಿ ಸಾವಿರಾರು ನೌಕರರು ದುಡಿಯುತ್ತಿದ್ದಾರೆ. ಈ ಟ್ರಸ್ಟ್ ಸಾರ್ವಜನಿಕ ಟ್ರಸ್ಟ್. ಹೀಗಾಗಿ ಶರಣರು ಜೈಲು ಸೇರಿರುವ ಕಾರಣ ಈ ಸಾರ್ವಜನಿಕ ಟ್ರಸ್ಟ್ ಅನ್ನು ಸರ್ಕಾರ ರಕ್ಷಣೆ ಮಾಡಬೇಕಿದ್ದು ಅದಕ್ಕಾಗಿಯೇ ಆಡಳಿತಾಧಿಕಾರಿ ನೇಮಕ ಮಾಡಿದೆ" ಎಂದು ವಿವರಿಸಿದರು.

"ಎಚ್. ಏಕಾಂತಯ್ಯ, ನವೀನ್ ಹಾಗೂ ಇತರರು ಸರ್ಕಾರಕ್ಕೆ ಸಲ್ಲಿಸಿದ ಮನವಿಯನ್ನು ಕೂಲಂಕಷವಾಗಿ ಪರಿಶೀಸಿದ ಸರ್ಕಾರ ಚಿತ್ರದುರ್ಗ ಜಿಲ್ಲಾಧಿಕಾರಿಗಳಿಂದ ಮೂರು ಭಿನ್ನಭಿನ್ನ ವರದಿಗಳನ್ನು ತರಿಸಿಕೊಂಡು ನಂತರವೇ ಈ ಕ್ರಮಕ್ಕೆ ಮುಂದಾಗಿದೆ. ಮಠದ ದೈನಂದಿನ ಪೂಜಾ ಕೈಂಕರ್ಯ, ದಾಸೋಹ ಹಾಗೂ ಇತರೆ ಚಟುವಟಿಕೆಗಳಿಗೆ ಆಡಳಿತಾಧಿಕಾರಿಯಿಂದ ಯಾವುದೇ ಅಡ್ಡಿಯುಂಟಾಗುವುದಿಲ್ಲ. ನಾವು ಮಠವನ್ನು ತಡುವುವ ಗೋಜಿಗೇ ಹೋಗುವುದಿಲ್ಲ. ಒಂದು ವೇಳೆ ಈಗಿರುವ ಸ್ಥಿತಿಯೇ ಮುಂದುವರಿದರೆ ಸಾವಿರಾರು ಕೋಟಿ ರೂಪಾಯಿಯ ಆಸ್ತಿ ದುರುಪಯೋಗವಾಗುವ ಸಾಧ್ಯತೆ ಇರುತ್ತದೆ" ಎಂದು ಕಳವಳ ವ್ಯಕ್ತಪಡಿಸಿರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+