ಸ್ವಾತಂತ್ರ್ಯ ದಿನಾಚರಣೆ: ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ? ಇಲ್ಲಿದೆ ಪಟ್ಟಿ

ಬೆಂಗಳೂರು, ಆಗಸ್ಟ್ 12: ಸ್ವಾತಂತ್ರ್ಯ ದಿನಾಚರಣೆಯಂದು ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುವ ಸಚಿವರ ಹೆಸರುಗಳನ್ನು ಅಂತಿಮಗೊಳಿಸಲಾಗಿದೆ. ರಾಜ್ಯ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ ಬುಧವಾರ ಈ ಪಟ್ಟಿ ಪ್ರಕಟಿದೆ. 29 ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರೇ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಬೆಂಗಳೂರು ನಗರ ಜಿಲ್ಲೆಯಲ್ಲಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಬಸವರಾಜ ಬೊಮ್ಮಾಯಿ ಉಡುಪಿ ಜಿಲ್ಲೆಯ ಉಸ್ತುವಾರಿ, ಪ್ರಭು ಚೌಹಾಣ್ ಯಾದಗಿರಿ ಜಿಲ್ಲೆಯ ಉಸ್ತುವಾರಿ ಮತ್ತು ಗೋವಿಂದ ಕಾರಜೋಳ ಕಲಬುರಗಿ ಜಿಲ್ಲೆಯ ಉಸ್ತುವಾರಿಯನ್ನು ಹೆಚ್ಚುವರಿಯಾಗಿ ವಹಿಸಿಕೊಂಡಿದ್ದಾರೆ. ಹೀಗಾಗಿ ಕಲಬುರಗಿ, ಉಡುಪಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಧ್ವಜಾರೋಹಣ ನೆರವೇರಿಸಲಿದ್ದಾರೆ.

ಒಂದು ವೇಳೆ ಉಳಿದ ಜಿಲ್ಲೆಗಳಲ್ಲಿ ಉಸ್ತುವಾರಿ ಸಚಿವರು ಹಾಜರಾಗಲು ಸಾಧ್ಯವಿಲ್ಲದೆ ಹೋದಲ್ಲಿ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೇ ಧ್ವಜಾರೋಹಣ ನಡೆಸುವಂತೆ ಸೂಚಿಸಲಾಗಿದೆ. ಧ್ವಜಾರೋಹಣ ನಡೆಸಲಿರುವ ಸಚಿವರ ಪಟ್ಟಿ ಇಲ್ಲಿದೆ.

ಗೋವಿಂದ ಕಾರಜೋಳ

ಗೋವಿಂದ ಕಾರಜೋಳ

ಬಾಗಲಕೋಟೆ ಜಿಲ್ಲೆ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ

ರಾಮನಗರ: ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ

ರಾಯಚೂರು: ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ಶಿವಮೊಗ್ಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ

ಬೆಂಗಳೂರು ಗ್ರಾಮಾಂತರ: ಕಂದಾಯ ಸಚಿವ ಆರ್. ಅಶೋಕ್

ಜಗದೀಶ್ ಶೆಟ್ಟರ್

ಜಗದೀಶ್ ಶೆಟ್ಟರ್

ಧಾರವಾಡ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆ ಸಚಿವ ಜಗದೀಶ್ ಶೆಟ್ಟರ್

ಚಿತ್ರದುರ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್

ಕೊಡಗು: ವಸತಿ ಸಚಿವ ವಿ. ಸೋಮಣ್ಣ

ಚಿಕ್ಕಮಗಳೂರು: ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ.

ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

ಹಾವೇರಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ದಕ್ಷಿಣ ಕನ್ನಡ: ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ತುಮಕೂರು: ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ

ಗದಗ: ಗಣಿ ಮತ್ತು ಭೂ ವಿಜ್ಞಾನ ಸಚಿವ ಚಂದ್ರಕಾಂತ ಸಿ ಪಾಟೀಲ್

ಎಚ್. ನಾಗೇಶ್

ಎಚ್. ನಾಗೇಶ್

ಕೋಲಾರ: ಅಬಕಾರಿ ಸಚಿವ ಎಚ್. ನಾಗೇಶ್

ಬೀದರ್: ಪಶು ಸಂಗೋಪನೆ, ಹಜ್ ಮತ್ತು ವಕ್ಫ್ ಸಚಿವ ಪ್ರಭು ಚೌವಾಣ್

ವಿಜಯಪುರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ

ಬಳ್ಳಾರಿ: ಅರಣ್ಯ ಮತ್ತು ಪರಿಸರ ಸಚಿವ: ಆನಂದ್ ಸಿಂಗ್

ಬೈರತಿ ಬಸವರಾಜು

ಬೈರತಿ ಬಸವರಾಜು

ದಾವಣಗೆರೆ: ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್

ಮೈಸೂರು: ಸಹಕಾರ ಸಚಿವ ಎಸ್‌ಟಿ ಸೋಮಶೇಖರ್

ಕೊಪ್ಪಳ: ಕೃಷಿ ಸಚಿವ ಬಿ.ಸಿ. ಪಾಟೀಲ್

ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್

ಕೆ.ಸಿ. ನಾರಾಯಣಗೌಡ

ಕೆ.ಸಿ. ನಾರಾಯಣಗೌಡ

ಮಂಡ್ಯ: ಪೌರಾಡಳಿತ, ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಕೆ.ಸಿ. ನಾರಾಯಣಗೌಡ

ಉತ್ತರ ಕನ್ನಡ: ಕಾರ್ಮಿಕ ಮತ್ತು ಸಕ್ಕರೆ ಸಚಿವ ಶಿವರಾಮ್ ಹೆಬ್ಬಾರ್

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ

ಹಾಸನ: ಆಹಾರ, ನಾಗರಿಕ ಸರಬರಾಜು ಸಚಿವ ಕೆ. ಗೋಪಾಲಯ್ಯ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+