Get Updates
Get notified of breaking news, exclusive insights, and must-see stories!

ನಿವೃತ್ತಿ ಶಿಕ್ಷಕರಷ್ಟೇ ಪ್ರಮಾಣದ ಹೊಸ ಶಿಕ್ಷಕರ ನೇಮಕ: ಸಿಎಂ ಬೊಮ್ಮಾಯಿ

ಬೆಂಗಳೂರು, ಸೆಪ್ಟೆಂಬರ್ 5: ''ಮುಂಬರುವ ದಿನಗಳಲ್ಲಿ ಪ್ರತಿ ವರ್ಷ ನಿವೃತ್ತಿ ಹೊಂದುವ ಶಿಕ್ಷಕರ ಪ್ರಮಾಣದಷ್ಟೇ ಹೊಸ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ವ್ಯವಸ್ಥೆಯನ್ನು ರೂಪಿಸಲಾಗುವುದು'' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ಮಾಜಿ ರಾಷ್ಟ್ರಪತಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನ ಪ್ರಯುಕ್ತ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿ ವರ್ಷ ನಿವೃತ್ತಿ ಹೊಂದುವ ಪ್ರಮಾಣದಷ್ಟೇ ಹೊಸದಾಗಿ ಶಿಕ್ಷಕರನ್ನು ಹಿಂದಿನ ವರ್ಷವೇ ನೇಮಕ ಮಾಡಿಕೊಳ್ಳುವ ಚಿಂತನೆ ಇದೆ. ಹೊಸಬರಿಗೆ ತರಬೇತಿ ನೀಡಿ, ನಿವೃತ್ತಿ ಹೊಂದಲಿರುವ ಶಿಕ್ಷಕರ ಸ್ಥಾನಕ್ಕೆ ನೇಮಕ ಮಾಡಿಕೊಳ್ಳಲು ಸೂಕ್ತ ವ್ಯವಸ್ಥೆ ನಿರ್ಮಿಸಲಾಗುವುದು ಎಂದು ಬೊಮ್ಮಾಯಿ ಭರವಸೆ ನೀಡಿದರು.

ಶಿಕ್ಷಣ ಕ್ಷೇತ್ರಕ್ಕೆ 25 ಸಾವಿರ ಕೋಟಿ ರೂ. ಅನುದಾನ ಬಜೆಟ್‌ನಲ್ಲಿ ನೀಡಲಾಗಿದೆ. 19 ಸಾವಿರ ಕೋಟಿ ರೂ. ಶಿಕ್ಷಕರ ಸಂಬಳ, 5000 ಕೋಟಿ ರೂ. ಶಾಲೆಗಳ ಅಭಿವೃದ್ಧಿಗಾಗಿ ನೀಡಲಾಗಿದೆ. ಒಂದೇ ವರ್ಷದಲ್ಲಿ 8,101 ಶಾಲಾ ಕೊಠಡಿಗಳನ್ನು ನಿರ್ಮಿಸುವ ರಾಜ್ಯದ ಇತಿಹಾಸದಲ್ಲೇ ಮೊದಲು. 23 ಸಾವಿರ ಶಾಲಾ ಕೊಠಡಿಗಳನ್ನು ಪುನ: ನಿರ್ಮಿಸಬೇಕಿದೆ. ಪ್ರಥಮ ಹಂತದಲ್ಲಿ 8,101 ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಉತ್ತಮ ಶಾಲೆಗಳಿವೆ, ಆದರೆ ಉತ್ತಮ ಶಾಲಾ ಕೊಠಡಿಗಳು ಇಲ್ಲದ್ದರಿಂದ ಈ ಯೋಜನೆ ರೂಪಿಸಲಾಗಿದೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ

ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ

ಶೌಚಾಲಯ ವ್ಯವಸ್ಥೆಯಿಲ್ಲದ ಕಾರಣ ಮಕ್ಕಳು ಶಾಲೆಗೆ ಬರುವುದನ್ನು ನಿಲ್ಲಿಸಿರುವುದನ್ನು ಗಮನಕ್ಕೆ ಬಂದಿದೆ. ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಹೆಣ್ಣು ಹಾಗೂ ಗಂಡು ಮಕ್ಕಳಿಗೆ ಪ್ರತ್ಯೇಕ ಶೌಚಾಲಯ ಒಂದೇ ವರ್ಷದಲ್ಲಿ ನಿರ್ಮಿಸಲು ಯೋಜನೆ ರೂಪಿಸಲಿದ್ದೇವೆ. ಆಗಸ್ಟ್ 15 ರಂದು ಶೌಚಾಲಯ ನಿರ್ಮಾಣ ಯೋಜನೆ ಘೋಷಿಸಲಾಗಿದ್ದು, ಮುಂದಿನ ಆಗಸ್ಟ್ 15 ರೊಳಗೆ ಯೋಜನೆ ಪೂರ್ಣಗೊಳ್ಳಲಿದೆ. 4,000 ಅಂಗನವಾಡಿ ಕೇಂದ್ರಗಳನ್ನು ಮುಂದಿನ ಆಗಸ್ಟ್ 15 ರೊಳಗೆ ನಿರ್ಮಿಸಲಾಗವುದು. 15,000 ಶಿಕ್ಷಕರ ನೇಮಕಾತಿ ಮಾಡುವ ಮೂಲಕ ಶಿಕ್ಷಣ ಕಾರ್ಯದೊತ್ತಡ ಕಡಿಮೆಗೊಳಿಸಲಿದ್ದೇವೆ ಎಂದರು.

ಶಿಕ್ಷಕರ ಮೇಲಿನ ಕಿರುಕುಳ: ನಿಯಮ ಸರಳೀಕರಣ

ಶಿಕ್ಷಕರ ಮೇಲಿನ ಕಿರುಕುಳ: ನಿಯಮ ಸರಳೀಕರಣ

ಶಿಕ್ಷಣದ ಗುಣಮಟ್ಟ ಹಾಗೂ ವ್ಯವಸ್ಥಿತ ಶಾಲೆಗಳಿಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ನಿಯಮಗಳನ್ನು ರೂಪಿಸಿದೆ. ಶಾಲಾ ಮಂಡಳಿ ಹಾಗೂ ಶಿಕ್ಷಕರು ಇವುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಶಿಕ್ಷಕರಿಗೆ ಕಿರುಕುಳ ತಪ್ಪಿಸಲು ನಿಯಮಗಳ ಸರಳೀಕರಣಗೊಳಿಸಿ ಶಿಸ್ತು ಅಳವಡಿಸಲು ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಯಾವುದೇ ಪರಿಶೀಲನೆಯಿಲ್ಲದೇ ಹೊಸ ಶಾಲೆಗಳ ಸ್ಥಾಪನೆಗೆ ಎನ್ಓಸಿ ನೀಡುತ್ತಿರುವ ಪ್ರಕರಣಗಳು ಬೆಳಕಿಗೆ ಬಂದಿವೆ. ಇದು ಮಕ್ಕಳ ಶಿಕ್ಷಣ ಹಾಗೂ ಗುಣಮಟ್ಟದ ಮೇಲೆ ಪ್ರಭಾವ ಬೀರುತ್ತವೆ.

ಹೀಗಾಗಿ ಸರ್ಕಾರದ ನಿಯಮಗಳನ್ನು ಪಾಲಿಸದವರ ವಿರುದ್ದ ಮತ್ತು ಈ ಪ್ರಕರಣಗಳಿಗೆ ಪ್ರೋತ್ಸಾಹ ನೀಡಿದವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಅಭಿವೃದ್ಧಿ ಆಕಾಂಕ್ಷಿ ತಾಲ್ಲೂಕುಗಳಿಗೆ ಹೆಚ್ಚಿನ ಅನುದಾನವನ್ನು ನೀಡಿ, ಅಲ್ಲಿನ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಚಾರಿತ್ರ್ಯವನ್ನು ಕಟ್ಟುವ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಲ್ಲಿ ಯಾವುದೇ ರಾಜಿ ಇಲ್ಲ ಎಂದು ಅವರು ತಿಳಿಸಿದರು.


ಶಿಕ್ಷಣದ ಜೀವಾಳ ಶಿಕ್ಷಕರು. ಶಿಕ್ಷಕರಿಲ್ಲದೆ ಶಿಕ್ಷಣವನ್ನು ಊಹಿಸಲೂ ಸಾಧ್ಯವಿಲ್ಲ. ಮಾನವ ಸಂಕುಲದ ಸಮಗ್ರ ಅಭಿವೃದ್ಧಿಯಲ್ಲಿ ಅತ್ಯಂತ ಪ್ರಮುಖ ಪಾತ್ರವನ್ನು ಗುರುಗಳು ವಹಿಸಿದ್ದಾರೆ. ಜ್ಞಾನದ ಗುರುಗಳು, ಗುರುಕುಲದ ಗುರುಗಳು, ಹಲವಾರು ರಂಗದಲ್ಲಿ ವಿವಿಧ ಗುರುಗಳಿದ್ದಾರೆ. ಆಧುನಿಕ ವ್ಯವಸ್ಥೆಯಲ್ಲಿ ಗುರುವಿನ ಪಾತ್ರ ಮಹತ್ವದ್ದಾಗಿದೆ ಎಂದು ಶಿಕ್ಷಕರು ಮತ್ತು ಶಿಕ್ಷಣದ ಮಹತ್ವ ಕುರಿತು ಹೇಳಿದರು.

ಬದುಕು ಎಲ್ಲಕ್ಕಿಂತ ದೊಡ್ಡ ಗುರು

ಬದುಕು ಎಲ್ಲಕ್ಕಿಂತ ದೊಡ್ಡ ಗುರು

ಬದುಕು ಎಲ್ಲಕ್ಕಿಂತ ದೊಡ್ಡ ಗುರು. ಬದುಕಿನಲ್ಲಿ ಕಲಿಯುವ ಪ್ರತಿಯೊಂದನ್ನೂ ಮನದಾಳದಲ್ಲಿ ಇಟ್ಟುಕೊಂಡರೆ, ಪ್ರತಿದಿನ ಪ್ರತಿ ಹಂತದಲ್ಲಿ ನಾವು ಕಲಿಯಲು ಸಾಧ್ಯವಿದೆ. ಬದುಕು ಮೊದಲು ಪರೀಕ್ಷೆ ನೀಡುತ್ತದೆ ನಂತರ ಫಲಿತಾಂಶ ಕೊಡುತ್ತದೆ. ಆದರೆ ಈ ಬದುಕಿನಿಂದ ಪಾಠ ಕಲಿಯಲು ಸಿದ್ಧ ಮಾಡುವ ಕೆಲಸ ಶಿಕ್ಷಕರು ಮಾಡುತ್ತಿದ್ದಾರೆ. ಒಬ್ಬ ವ್ಯಕ್ತಿಗೆ ಜ್ಞಾನ, ಸರಿ-ತಪ್ಪು ಎಂಬ ಪ್ರಜ್ಞೆ, ಪಾಪ-ಪುಣ್ಯ ಎಂಬ ವಿಚಾರ ಬರುವುದು ಶಿಕ್ಷಕರು ನೀಡುವ ಜ್ಞಾನದಿಂದ. ಶಿಕ್ಷಕರ ಕೆಲಸ ಅತ್ಯಂತ ಕಠಿಣವಾದದ್ದು.

ಶಿಕ್ಷಕರ ಕರ್ತವ್ಯ ಪ್ರಜ್ಞೆ ಮೆಚ್ಚುವಂಥದ್ದು. ಮಗುವಿನ ಹಂತಕ್ಕೆ ಇಳಿದು ಅವರಿಗೆ ಅರ್ಥವಾಗುವ ಹಾಗೆ ಪಾಠ ಮಾಡಿ, ಜ್ಞಾನ, ತತ್ವಜ್ಞಾನ, ತಂತ್ರಜ್ಞಾನ, ತಂತ್ರಾಂಶ ಜ್ಞಾನವನ್ನು ತುಂಬಿರುವ ಗುರುಗಳಿಗೆ ಮೊದಲನೇ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

ಚರಿತ್ರೆ ಇದೆ, ಚಾರಿತ್ರ್ಯ ಬೇಕಿದೆ

ಚರಿತ್ರೆ ಇದೆ, ಚಾರಿತ್ರ್ಯ ಬೇಕಿದೆ

ದೇಶಕ್ಕೆ ದೊಡ್ಡ ಚರಿತ್ರೆ ಇದ್ದು, ಅದಕ್ಕೆ ಚಾರಿತ್ರ್ಯ ಬೇಕಾಗಿದೆ. ಚಾರಿತ್ರ್ಯ ಆತ್ಮಸಾಕ್ಷಿಯ ಬೋಧನೆಯಿಂದ ಬರುತ್ತದೆ. ಸರಿ ತಪ್ಪು ಎನ್ನುವ ಭಾವ ಪ್ರತಿಯೊಬ್ಬರಲ್ಲೂ ಬಂದಾಗ ಖಂಡಿತವಾಗಿಯೂ ಉತ್ತಮ ಚಾರಿತ್ರ್ಯ ಮೂಡುತ್ತದೆ. ಆ ಕೆಲಸವನ್ನು ಶಿಕ್ಷಕರು ಮಾಡುತ್ತಿದ್ದಾರೆ. ಚಾರಿತ್ರ್ಯವನ್ನು ಕಟ್ಟುವ ಕೆಲ ಗುರುಗಳು ಮಾಡುತ್ತಿದ್ದಾರೆ. ಅರಿವಿನಿಂದ, ಪ್ರಜ್ಞಾಪೂರ್ವಕವಾಗಿ ಕೆಲಸ ಮಾಡಿದಾಗ ಅದರ ಪರಿಣಾಮ ದೊಡ್ಡ ಪ್ರಮಾಣದಲ್ಲಿ ಅಗುತ್ತದೆ. ಗುರುಗಳು ಚಾರಿತ್ರ್ಯವನ್ನು ಕಟ್ಟುವ ಕೆಲಸ ಮಾಡಬೇಕು. ಈ ದೇಶದಲ್ಲಿ ಆಚಾರ್ಯರಿದ್ದಾರೆ. ಆದರೆ ಬೇಕಾಗಿರುವುದು ಆಚರಣೆ. ಆಚರಣೆ ತರಲು ಬುನಾದಿ ಶಿಕ್ಷಕರೇ ಮಾಡಬೇಕು. ಇದಾದರೆ ವ್ಯಕ್ತಿ ಯಶಸ್ವಿಯಾಗಿ ಆತ ಸಮಾಜಕ್ಕೂ ಕೊಡುಗೆಯನ್ನು ನೀಡುತ್ತಾನೆ ಎಂದು ಹೇಳಿದರು.

ಸಾವಿತ್ರಿ ಬಾಯಿ ಫುಲೆ ಶ್ರೇಷ್ಠ ಶಿಕ್ಷಕಿ

ಸಾವಿತ್ರಿ ಬಾಯಿ ಫುಲೆ ಶ್ರೇಷ್ಠ ಶಿಕ್ಷಕಿ

ರಾಧಾಕೃಷ್ಣನ್ ಒಬ್ಬ ಶ್ರೇಷ್ಠ ಗುರುಗಳು ಹಾಗೂ ಮೇಧಾವಿಗಳು. ಅವರ ಜನ್ಮ ದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯಾಗಿ ಮಾಡಿ ಶಿಕ್ಷಕರ ಸ್ಥಿತಿಗತಿ, ಚರ್ಚೆ, ಪರಿಹಾರ, ಒಳ್ಳೆ ಕೆಲಸ ಮಾಡಿದವರನ್ನು ಗುರುತಿಸುವ ಪರಂಪರೆ ಇದೆ. ಸಾವಿತ್ರಿ ಬಾಯಿ ಫುಲೆ ಅವರು ಹೆಣ್ಣ್ಣುಮಕ್ಕಳ ಶಿಕ್ಷಣದಲ್ಲಿ ದೊಡ್ಡ ಬದಲಾವಣೆಯನ್ನು ತಂದ ಶ್ರೇಷ್ಠ ವ್ಯಕ್ತಿ. ಈ ಜಗತ್ತಿನಲ್ಲಿ ಬದಲಾವಣೆಗಳು ಕೇವಲ ವ್ಯಕ್ತಿಯಿಂದ ಸಾಧ್ಯವಾಗಿದೆ. ಅವರು ದೇಶ ಕಂಡ ಅಪ್ರತಿಮ ಶ್ರೇಷ್ಠ ಶಿಕ್ಷಕಿ. ವರ್ಷವಿಡೀ ಕಷ್ಟಪಟ್ಟು ಮಕ್ಕಳಿಗೆ ಜ್ಞಾನಾರ್ಜನೆ ಮಾಡಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿರುವವರು ಶಿಕ್ಷಕರು. ಎಲ್ಲರಿಗೂ ಗೌರವ ತರುವ ರೀತಿಯಲ್ಲಿ ಕೆಲಸ ಮಾಡಿದ್ದರಿಂದ ಪ್ರಶಸ್ತಿ ಲಭಿಸಿದೆ ಎಂದು ಪ್ರಶಸ್ತಿ ಪಡೆದ ಶಿಕ್ಷಕರ ಕುರಿತು ಶ್ಲಾಘಿಸಿದರು.

ಬದಲಾವಣೆಗೆ ತೆರೆದುಕೊಳ್ಳಬೇಕು

ಬದಲಾವಣೆಗೆ ತೆರೆದುಕೊಳ್ಳಬೇಕು

ನಮ್ಮ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಪ್ರಾಮುಖ್ಯತೆ ನೀಡಿದೆ. ಶಿಕ್ಷಣ ನೀತಿ, ವ್ಯವಸ್ಥೆ, ಗುರುಗಳು, ವಿದ್ಯಾರ್ಥಿಗಳು ಎಲ್ಲಾ ವಿಚಾರಗಳನ್ನು ಆಮೂಲಾಗ್ರವಾಗಿ ಬದಲಾವಣೆ ಮಾಡಬೇಕು. ಶಿಕ್ಷಣ ಯಾವ ರೀತಿ ಇರಬೇಕು, ಯಾತಕ್ಕಾಗಿ ಶಿಕ್ಷಣ ಎಂಬ ಮೂಲ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ. ವಿಜ್ಞಾನ ಯುಗಕ್ಕೆ, ಚಾರಿತ್ರ್ಯವನ್ನು ಕಟ್ಟಲು ನಮ್ಮ ಮಕ್ಕಳನ್ನು ತಯಾರು ಮಾಡುತ್ತಿದ್ದೇವೋ ಇಲ್ಲವೋ. ದೇಶಪ್ರೇಮದ ಕಲ್ಪನೆ ನಮ್ಮ ವಿದ್ಯಾರ್ಥಿಗಳಿಗೆ ಮುಟ್ಟಿಸಲು ಸಾಧ್ಯವಾಗಿದೆಯೇ ಎಂಬ ಬಗ್ಗೆ ಬದಲಾವಣೆ ಆಗುವ ಅವಶ್ಯಕತೆ ಇದೆ. ನಾವು ಬದಲಾಗಬೇಕು. ಪ್ರತಿ ಗುರು ವಿದ್ಯಾರ್ಥಿ ಸ್ವರೂಪ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+