ಅನುಕಂಪದ ಆಧಾರದ ಮೇಲೆ ನೇಮಕಾತಿ: ರಾಜ್ಯ ಸರ್ಕಾರ ಆದೇಶ

ಬೆಂಗಳೂರು, ಫೆಬ್ರವರಿ 18: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ನೀಡಿದ್ದಾರೆ. ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದಾರೆ. ಅನುಕಂಪದ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಗೆ ನೇಮಕಾತಿ ನೀಡುವ ಬಗ್ಗೆ ರಾಜ್ಯ ಸರ್ಕಾರವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ.

ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವಾಗಲೇ ನಿಧನ ಹೊಂದಿದ ನೌಕರರ ಅವಲಂಬಿತರಿಗೆ ಉಲ್ಲೇಖ(1)ರ ನಿಯಮಗಳಡಿಯಲ್ಲಿ ಅನುಕಂಪದ ಆಧಾರದ ಮೇಲೆ ನೇಮಕಾತಿ ನೀಡುವ ಸಲುವಾಗಿ ಅನುಬಂಧ-1 ಪಟ್ಟಿಯಲ್ಲಿರುವ ಅಭ್ಯರ್ಥಿಗಳಿಗೆ ಉಲ್ಲೇಖ(2)ರ ಆದೇಶದ ಪ್ರಕಾರ ಸಮಾಲೋಚನೆಯನ್ನು ದಿನಾಂಕ: 21.02.2025 ಬೆಳಗ್ಗೆ 10.00 ಘಂಟೆಗೆ ರಾಜ್ಯ ಆರೋಗ್ಯ ಮತ್ತು ಕುಟುಂಬಕಲ್ಯಾಣ ತರಬೇತಿಕೇಂದ್ರ, ಕುಷ್ಠರೋಗ ಆಸ್ಪತ್ರೆ ಆವರಣ, ಮಾಗಡಿ ರಸ್ತೆ, ಬೆಂಗಳೂರು-23, ಇಲ್ಲಿ ನಿಗದಿಪಡಿಸಲಾಗಿದ್ದು, ಎಲ್ಲಾ ಅಭ್ಯರ್ಥಿಗಳು ತಪ್ಪದೆ ಹಾಜರಾಗಲು ಸೂಚಿಸಿದೆ.

Appointment on Compassionate Grounds State Govt Issues Order

ಪ್ರಮುಖ ಸೂಚನೆಗಳೇನು?

* ಸಮಾಲೋಚನೆಯಲ್ಲಿ ಅಭ್ಯರ್ಥಿಯು ಸ್ವ-ಇಚ್ಛೆಯಿಂದ ಸ್ಥಳ ಆಯ್ಕೆ ಮಾಡಿಕೊಂಡ ನಂತರ ಮತ್ತೆ ಸ್ಥಳ ಬದಲಾವಣೆಗೆ ಅವಕಾಶವಿರುವುದಿಲ್ಲ.

* ಸಮಾಲೋಚನೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ಸು-ಮೋಟೋ(ssu-moto)ಆಧಾರದ ಮೇಲೆ ಸ್ಥಳನಿಯುಕ್ತಿಗೊಳಿಸಲಾಗುವುದು.

* ಸಮಾಲೋಚನೆಗೆ ಹಾಜರಾದ ಸಂದರ್ಭದಲ್ಲಿ ಮೊಬೈಲ್ ಬಳಕೆಯನ್ನು ನಿರ್ಬಂಧಿಸಿದೆ. ಯಾವುದೇ ದೂರವಾಣಿ ಕರೆಯನ್ನು ಮಾಡುವುದು ಹಾಗೂ ಗಣ್ಯವ್ಯಕ್ತಿಗಳ ಒತ್ತಡ ತರುವುದು ಕಂಡುಬಂದಲ್ಲಿ ಅಂತಹ ಅಭ್ಯರ್ಥಿಯ ವಿರುದ್ಧ ತಕ್ಷಣ ಜಾರಿಗೆ ಬರುವಂತೆ ಕ್ರಮ ಜರುಗಿಸಿ ನೇಮಕಾತಿ ರದ್ದು ಪಡಿಸಲಾಗುವುದು.

* ಅಭ್ಯರ್ಥಿಗಳು ಗುರುತಿಗಾಗಿ ಆಧಾರಕಾರ್ಡ್/ಚುನಾವಣಾ ಗುರುತಿನ ಚೀಟಿ/ಪಾಸ್‌ಪೋರ್ಟ್/ ವಾಹನಚಾಲನ ಪರವಾನಗಿ ಇವುಗಳಲ್ಲಿ ಯಾವುದಾದರೂ ಒಂದನ್ನು ಕಡ್ಡಾಯವಾಗಿ ಸಮಾಲೋಚನೆ ಸಮಯದಲ್ಲಿ ಹಾಜರುಪಡಿಸತಕ್ಕದ್ದು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ಮಾಹಿತಿಯನ್ನ ಹಂಚಿಕೊಂಡಿದೆ.

ಕನಿಷ್ಠ ವೇತನ ಪಾವತಿಸದ ಏಜೆನ್ಸಿ ಪರವಾನಗಿ ರದ್ದುಪಡಿಸಿ

ಕಾರ್ಮಿಕರ ಕಲ್ಯಾಣಕ್ಕಾಗಿಯೇ ಕಾರ್ಮಿಕ ಇಲಾಖೆ ಕಾರ‍್ಯನಿರ್ವಹಿಸಬೇಕು. ಕಾರ್ಮಿಕರಿಗೆ ಕನಿಷ್ಠ ವೇತನ ಹಾಗೂ ವಿವಿಧ ಸೌಲಭ್ಯಗಳನ್ನು ಗುತ್ತಿಗೆ ಪಡೆದ ಏಜೆನ್ಸಿಗಳು ಪಾವತಿಸಿರುವ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ, ನಿಯಮಾನುಸಾರ ವೇತನ ಪಾವತಿಸದ ಏಜೆನ್ಸಿಗಳ ಪರವಾನಗೆಯನ್ನು ರದ್ದು ಪಡಿಸಬೇಕೆಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಸೂಚಿಸಿದರು.

ಶ್ರಮ ವಹಿಸಿ ದುಡಿಯುವ ವರ್ಗಕ್ಕೆ ಸರ್ಕಾರದಿಂದ ಸರಿಯಾಗಿ ವೇತನ ಪಾವತಿಯಾಗುವಂತೆ ಕ್ರಮ ಕೈಗೊಳ್ಳಬೇಕು. ವೇತನ ಹಾಗೂ ಪಿ.ಎಫ್. ಪಾವತಿಸದ ಏಜೆನ್ಸಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುವ ಮೂಲಕ ಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ಇಲಾಖಾ ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ನಿರ್ದೇಶನ ನೀಡಿದರು.

ಕಾರ್ಮಿಕ ಕಾಯ್ದೆಗಳ ಉಲ್ಲಂಘನೆ ಪ್ರಕರಣಗಳ ಕುರಿತು ತಪಾಸಣೆ ಮಾಡಿದ ದಾಖಲೆಗಳ ಬಗ್ಗೆ ಮಾತನಾಡಿದ ಅವರು, ಕಾರ್ಮಿಕ ಇಲಾಖೆ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಾ ಮುಂದಿನ ದಿನಗಳಲ್ಲಿ ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.

ಪ್ರತಿ ಕೆಡಿಪಿ ಸಭೆಯಲ್ಲಿಯೂ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆಯಾಗಬೇಕು. ಜೊತೆಗೆ ಬಾಲಕಾರ್ಮಿಕ ಪ್ರಕರಣಗಳ ಉಲ್ಲಂಘನೆ ಕುರಿತಂತೆ ಸಭೆಗಳು ಜರುಗಬೇಕು. ಬಾಲಕಾರ್ಮಿಕ ಪದ್ಧತಿ ಹೋಗಲಾಡಿಸಲು ಜಾಗೃತಿ ಕಾರ್ಯಕ್ರಮಗಳನ್ನು ಜಿಲ್ಲಾ ಮಟ್ಟದಲ್ಲಿ ಜರುಗಿಸಿ ಪ್ರತಿ ತಿಂಗಳು ವರದಿ ಸಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದರು.

ಜಿಲ್ಲಾ ಮಟ್ಟದಲ್ಲಿ ಜಿಲ್ಲಾಡಳಿತದ ಮುಖ್ಯಸ್ಥರು ಜಾಗೃತಿ ಕಾರ್ಯಕ್ರಮಗಳನ್ನು ಮಾಡುವುದರಿಂದ ಪರಿಣಾಮಕಾರಿ ಜಾಗೃತಿ ಮೂಡಲಿದೆ ಎಂದ ಅವರು ಇಲಾಖೆಯ ಅಧಿಕಾರಿಗಳು ನಿಯಮಿತವಾಗಿ ಹೋಟೆಲ್, ಬಾಯ್ಲರ್, ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಬಾಲ ಕಾರ್ಮಿಕರ ಬಳಕೆ ಮಾಡುವ ಬಗ್ಗೆ ಪರಿಶೀಲಿಸಬೇಕು ಅಲ್ಲದೇ ಕಾರ್ಮಿಕರಿಗೆ ಇರುವ ಸೌಲಭ್ಯಗಳ ಕುರಿತು ಅರಿವು ಮೂಡಿಸಿ ಸೌಲಭ್ಯಗಳು ತಲುಪಿರುವ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕೆಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+