ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ: ಡಿ ಕೆ ಶಿವಕುಮಾರ್‌ ಹೇಳಿದ್ದೇನು?

ಬೆಂಗಳೂರು, ಜನವರಿ 16: ಸಂಕ್ರಾಂತಿ ಉಡುಗೊರೆಯಾಗಿ ನಿಗಮ ಮಂಡಳಿ ನೇಮಕ ಆಗಲಿದೆ ಎಂಬ ಚರ್ಚೆ ಕಾಂಗ್ರೆಸ್‌ ಪಾಳಯದಲ್ಲಿ ಕೇಳಿ ಬಂದಿದೆ. ಇತ್ತ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಅಸಮಾಧಾನಗೊಂಡ ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ನಿಗಮ ಮಂಡಳಿ ಸ್ಥಾನ ನೀಡಲು ಕಾಂಗ್ರೆಸ್‌ ನಾಯಕರು ಮುಂದಾಗಿದ್ದಾರೆ.

ನಿಗಮ ಮಂಡಳಿ ನೇಮಕದ ಕುರಿತು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಮಾಧ್ಯಮಗಳ ಜೊತೆಗೆ ಮಾತನಾಡಿ, ಯಾವ ಕ್ಷಣದಲ್ಲಿ ಬೇಕಾದರೂ ನಿಗಮ, ಮಂಡಳಿ ಆಯ್ಕೆ ಪಟ್ಟಿ ಪ್ರಕಟವಾಗಬಹುದು. ಈ ಪಟ್ಟಿ ಮುಂದೂಡುವ ಸಾಧ್ಯತೆ ಇಲ್ಲ. ಚುನಾವಣೆ ಸಮಯದಲ್ಲಿ ನಾವು ಯಾರಿಗೆ ಮಾತು ಕೊಟ್ಟಿದ್ದೆವೋ ಅವರಿಗೆ ಸ್ಥಾನಮಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.

Appointments to Boards and Corporations shortly Says DCM DK Shivakumar

ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಮಾನಸಿಕ ಸ್ಥಿಮಿತ ಇರುವವರು ಈ ರೀತಿ ಮಾತನಾಡುವುದಿಲ್ಲ. ಅವರ ಮಾತು ತಪ್ಪು ಎಂದು ಅವರ ನಾಯಕರುಗಳಿಗೆ ಅರ್ಥವಾಗಿರುವುದು ಉತ್ತಮ ಬೆಳವಣಿಗೆ.

ಅನಂತ ಕುಮಾರ್ ಹೆಗಡೆ ಅವರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲಿ ಎಂದು ಹೇಳಿದ್ದಾರೆ. ಇನ್ನೂ ಈ ವರ್ಷ 220ಕ್ಕೂ ಹೆಚ್ಚು ತಾಲೂಕುಗಳನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದ್ದು, ಮತ್ತೆ ಇಂತಹ ಪರಿಸ್ಥಿತಿ ಬರಬಾರದು. ರೈತರ ಬದುಕು ಹಸನಾಗಬೇಕು ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಇದೇ 19 ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಇಂದಿರಾ ಭವನದಲ್ಲಿ ಪಕ್ಷದ ಲೋಕಸಭೆ ಚುನಾವಣೆ ಸಮಿತಿ ಸಭೆ ಕರೆಯಲಾಗಿದೆ ಹಾಗೂ ಜ. 21 ರಂದು ಮಂಗಳೂರಲ್ಲಿ ರಾಜ್ಯಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದೆ. ಜನವರಿ 19 ರಂದು ನಡೆವ ಸಭೆಗೆ ದೆಹಲಿಯಿಂದ ವೀಕ್ಷಕರು ಕೂಡ ಆಗಮಿಸಲಿದ್ದು, ಜಿಲ್ಲಾ ಸಚಿವರು ಅಭ್ಯರ್ಥಿ ಆಯ್ಕೆ ವಿಚಾರವಾಗಿ ನೀಡಿರುವ ವರದಿ ಬಗ್ಗೆ ಚರ್ಚೆ ಮಾಡಲಾಗುವುದು. ಆದಷ್ಟು ಬೇಗ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಿದೆ. ಇದೇ ತಿಂಗಳು 21 ರಂದು ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಲಿದೆ. ಎಐಸಿಸಿ ಅಧ್ಯಕ್ಷರು ಈ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+