27,607.26 ಕೋಟಿ ಹೂಡಿಕೆಗೆ ಅಸ್ತು; 8 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ!
ಬೆಂಗಳೂರು, ಅಕ್ಟೋಬರ್ 24: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ. ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದರು.
ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದಿದ್ದಾರೆ. 11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಅವರು ಹೇಳಿದ್ದಾರೆ.

KSDL ರಿಂದ ಸರ್ಕಾರಕ್ಕೆ ರೂ 135 ಕೋಟಿ ಡಿವಿಡೆಂಡ್ ಚೆಕ್ ಹಸ್ತಾಂತರ
ಸಾರ್ವಜನಿಕ ವಲಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನ ಲಾಭದಲ್ಲಿ ರೂ 135 ಕೋಟಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿತು. ಸಂಸ್ಥೆಯ ಪರವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮತ್ತು ಕೆ.ಎಸ್.ಡಿ.ಎಲ್ ಅಧ್ಯಕ್ಷ ಅಪ್ಪಾಜಿ ನಾಡಗೌಡ ಅವರು ಈ ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದರು. ಈ ಕಾರ್ಯಕ್ರಮವು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯಿತು.
ಸಚಿವ ಎಂ.ಬಿ.ಪಾಟೀಲ ಅವರು ಮಾತನಾಡಿ, ಕೆ.ಎಸ್.ಡಿ.ಎಲ್ ಸಂಸ್ಥೆಯು ಕಳೆದ ಹಣಕಾಸು ವರ್ಷದಲ್ಲಿ ರೂ 1,700 ಕೋಟಿ ವಹಿವಾಟು ನಡೆಸಿ, ರೂ 451 ಕೋಟಿ ಲಾಭವನ್ನು ಕಂಡಿದೆ. ಇದರ ಪೈಕಿ ನಿಯಮದಂತೆ ಶೇ.30ರಷ್ಟು ಲಾಭಾಂಶವನ್ನು ಸರಕಾರಕ್ಕೆ ಕೊಡಲಾಗಿದೆ. ವಹಿವಾಟು, ಲಾಭ ಮತ್ತು ಲಾಭಾಂಶ ಮೂರರಲ್ಲೂ ಇದು ಸಾರ್ವಕಾಲಿಕ ದಾಖಲೆ ಆಗಿದೆ ಎಂದಿದ್ದಾರೆ.
2022-23ರಲ್ಲಿ ಬಿಜೆಪಿ ಸರಕಾರವಿದ್ದಾಗ ಸಂಸ್ಥೆಯ ವತಿಯಿಂದ ಸರಕಾರಕ್ಕೆ ರೂ 54 ಕೋಟಿ ಡಿವಿಡೆಂಡ್ (ಲಾಭಾಂಶ) ಕೊಡಲಾಗಿತ್ತು. 2023-24ರಲ್ಲಿ ರೂ 108 ಕೋಟಿ ಲಾಭಾಂಶ ಹಸ್ತಾಂತರಿಸಲಾಗಿತ್ತು. ಇದಕ್ಕೆ ಹೋಲಿಸಿದರೆ ಲಾಭಾಂಶದಲ್ಲಿ ಈಗ ರೂ 27 ಕೋಟಿ ಹೆಚ್ಚಳವಾಗಿದೆ. ಮುಂಬರುವ ವರ್ಷಗಳಲ್ಲಿ ಇದು ಮತ್ತಷ್ಟು ಹೆಚ್ಚಲಿದೆ ಎಂದು ಹೇಳಿದರು.












Click it and Unblock the Notifications