ಕರ್ನಾಟಕಕ್ಕೆ ರಾಷ್ಟ್ರೀಯ ಹೆದ್ದಾರಿ, ಎಕ್ಸ್‌ಪ್ರೆಸ್‌ಗಳ ಯೋಜನೆ ಮಂಜೂರು ಬಗ್ಗೆ ನಿತಿನ್ ಗಡ್ಕರಿ ಮಹತ್ವದ ಮಾಹಿತಿ
Karnataka National Highways: ರಾಜ್ಯದಲ್ಲಿ ರಾಷ್ಟ್ರೀಯ ಹೆದ್ದಾರಿ, ಎಕ್ಸ್‌ಪ್ರೆಸ್ ವೇ ಜಾಲ ಹೆಚ್ಚಾಗುತ್ತಲಿದೆ. ಇನ್ನೂ ಇಲ್ಲಿ ಕಳೆದ 5 ಹಣಕಾಸು ವರ್ಷದಲ್ಲಿ ಎಷ್ಟು ಕಿಲೋ ಮೀಟರ್ ಯೋಜನೆಗಳಿಗೆ ಮಂಜೂರು ಮಾಡಲಾಗಿದ ಎನ್ನುವ ಬಗ್ಗೆ ಸಾರಿಗೆ ಸಚಿವ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಈಗಾಗಲೇ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಯಾಗಿ ಇಲ್ಲಿ ವಾಹನಗಳು ಸಹ ಸಂಚಾರ ಮಾಡುತ್ತಿವೆ. ಬಹುನಿರೀಕ್ಷಿತ ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್ ವೇ ಕರ್ನಾಟಕ ಭಾಗದಲ್ಲಿ ಮಾತ್ರ ಕಾಮಗಾರಿ ಪೂರ್ಣಗೊಂಡಿದೆ. ಆದರೆ, ಆಂಧ್ರಪ್ರದೇಶ ಹಾಗೂ ತಮಿಳುನಾಡು ಭಾಗದಲ್ಲಿ ಕಾಮಗಾರಿ ಬಾಕಿ ಉಳಿದ ಕಾರಣ ಉದ್ಘಾಟನೆ ದಿನಾಂಕ ಮುಂದೂಡಿಕೆ ಆಗುತ್ತಲಿದೆ. ಮುಂದಿನ ವರ್ಷ ಜೂನ್ ಅಥವಾ ಜುಲೈನಲ್ಲಿ ಲೋಕಾರ್ಪಣೆ ಆಗಲಿದೆ ಎನ್ನುವ ಮಾಹಿತಿಯಿದೆ.

ಇದನ್ನು ಸೇರಿದಂತೆ ರಾಜ್ಯದಲ್ಲಿ ಕೆಲ ಎಕ್ಸ್‌ಪ್ರೆಸ್ ವೇ, ರಾಷ್ಟ್ರೀಯ ಹೆದ್ದಾರಿಗಳು ನಿರ್ಮಾಣ ಕಾಮಗಾರಿ ಹಂತದಲ್ಲಿದ್ದರೆ, ಇನ್ನೂ ಹಲವು ಕಾಮಗಾರಿ ಆರಂಭದ ಹಂತದಲ್ಲಿವೆ. ಈ ನಡುವೆಯೇ ರಾಜ್ಯದಲ್ಲಿ ಕಳೆದ ಐದು ವರ್ಷದಲ್ಲಿ ಎಕ್ಸ್‌ಪ್ರೆಸ್‌ವೇಗಳು ಮತ್ತು ಆರ್ಥಿಕ ಕಾರಿಡಾರ್‌ಗಳು ಸೇರಿ ಎಷ್ಟು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ ಎನ್ನುವ ಬಗ್ಗೆ ನಿತಿನ್ ಗಡ್ಕರಿ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಕಳೆದ 5 ಹಣಕಾಸು ವರ್ಷಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಎಕ್ಸ್‌ಪ್ರೆಸ್‌ವೇಗಳು & ಆರ್ಥಿಕ ಕಾರಿಡಾರ್‌ಗಳು ಸೇರಿದಂತೆ 3,187 ಕಿಲೋ ಮೀಟರ್ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಮಂಜೂರಯ ಮಾಡಲಾಗಿದೆ ಎಂದು ಕೇಂದ್ರ ಹೆದ್ದಾರಿ ಹಾಗೂ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಬಿಜೆಪಿ ಸದಸ್ಯ ಲಹರ್ ಸಿಂಗ್ ಸಿರೋಯಾ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಪ್ರಶ್ನೆಗೆ ಅವರು ಈ ಮಾಹಿತಿ ನೀಡಿದ್ದಾರೆ.
ಹಾಸನ ಸಂಸದ ಶ್ರೇಯಸ್ ಎಂ.ಪಟೇಲ್ ಅವರು, ರಾಷ್ಟ್ರೀಯ ಹೆದ್ದಾರಿ 373 ಬೇಲೂರು-ಹಾಸನ ಮಾರ್ಗದ ಚತುಷ್ಪಥ ಯೋಜನೆಗೆ ಪರಿಷ್ಕೃತ ವೆಚ್ಚದ ಅಂದಾಜಿಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು. ಲೋಕಸಭೆಯಲ್ಲಿ ಮಾತನಾಡಿದ ಅವರು, ಈ ಕಾರಿಡಾರ್ ಅತ್ಯಂತ ಮುಖ್ಯ ಆಗಿದೆ. ಯಾಕಂದ್ರೆ ಇದು ಸರಕುಗಳ ತ್ವರಿತ ಸಾಗಣೆಗೆ ಅನುಕೂಲ ಆಗುತ್ತದೆ. ಭೂಸ್ವಾಧೀನ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಈ ಯೋಜನೆಯನ್ನು ತ್ವರಿತಗೊಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಈಗಾಗಲೇ ಮಂಜೂರು ಆಗಿರುವ ಕೆಲವರು ರಾಷ್ಟ್ರೀಯ ಹೆದ್ದಾರಿ, ಆರ್ಥಿಕ ಕಾರೀಡರ್, ರಾಷ್ಟ್ರೀಯ ಹೆದ್ದಾರಿ ಯೋಜನೆ ಕಾಮಗಾರಿ ಹಂತದಲ್ಲಿದರೆ, ಇನ್ನೂ ಹಲವು ಡಿಪಿಆರ್ ಹಾಗೂ ಕಾಮಗಾರಿ ಆರಂಭದ ಹಂತದಲ್ಲಿವೆ. ಇಂತಹ ಯೋಜನೆಗಳುಗೆ ತುಂಬಾ ಅಡೆತಡೆಗಳು ಕೂಡ ಆಗುವುದರಿಂದ ಕಾಮಗಾರಿಗಳು ಮಂದಗತಿಯಲ್ಲಿ ಸಾಗಿವೆ. ಭೂಸ್ವಾಧೀನದ ವೇಳೆ ವಿಳಂಬ ಆಗುತ್ತಿರುವುದೇ ಕಾಮಗಾರಿ ಆರಂಭಕ್ಕೆ ಅಡೆತಡೆಗಳಾಗುತ್ತಿವೆ ಎನ್ನುವ ಮಾತುಗಳು ಕೇಳಿಬರುತ್ತಲಿರುತ್ತವೆ. ಮತ್ತೊಂದೆಡೆ ಕೆಲವೆಡೆ ಹೆದ್ದಾರಿಗಳ ಅಭಿವೃದ್ಧಿಗೆ ಹಣ ಮಂಜೂರು ಮಾಡಿದರೂ ಸಹ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅವುಗಳು ದುರಸ್ತಿ ಕಾಣದೇ ವಾಹನ ಸವಾರರು ಪರದಾಡುತ್ತಿರುವ ಘಟನೆಗಳು ಬೆಳಕಿಗೆ ಬರುತ್ತಲಿರುತ್ತವೆ. ಹೀಗೆ "ಒಂದು ಒಳ್ಳೆ ಕೆಲಸಕ್ಕೆ ನೂನಾರು ವಿಘ್ಞಗಳು" ಎನ್ನುವ ಮಾತು ಇದಕ್ಕೆ ಹೊಂದಾಣಿಕೆಯಾಗುತ್ತದೆ ಎಂದರೆ ತಪ್ಪಾಗಲಾರದು.












Click it and Unblock the Notifications