ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಡಿಕೆ ಆಮದು ವಿರುದ್ಧದ ಪ್ರತಿಭಟನೆ ಬಲವಂತದಿಂದ ಅಂತ್ಯ: ಎಎಪಿ ಕಿಡಿ

|
Google Oneindia Kannada News

ಬೆಂಗಳೂರು, ಡಿಸೆಂಬರ್ 21: ಭಾರತಕ್ಕೆ ಭೂತಾನ್‌ ದೇಶದಿಂದ ಅಡಿಕೆ ಆಮದು ಮಾಡಿಕೊಳ್ಳುವ ಸರ್ಕಾರ ನೀತಿ ಖಂಡಿಸಿ ಶಿವಮೊಗ್ಗದಲ್ಲಿ ಎಎಪಿ ನಾಯಕಿ ಟಿ. ನೇತ್ರಾವತಿ ಅವರು ಪ್ರತಿಭಟನೆ ನಡೆಸುತ್ತಿದ್ದರು. ಅವರ ಹೋರಾಟವನ್ನು ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆ ಬಲವಂತದಿಂದ ತೆರವುಗೊಳಿಸಿರುವುದು ಖಂಡನೀಯ ಎಂದು ಆಮ್‌ ಆದ್ಮಿ ಪಕ್ಷದ ಮುಖಂಡ ಹಾಗೂ ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಬ್ರಿಜೇಶ್‌ ಕಾಳಪ್ಪ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೊಳೆರೋಗ, ಹಳದಿರೋಗ, ಎಲೆಚುಕ್ಕಿ ರೋಗ ಮುಂತಾದ ಸಮಸ್ಯೆಗಳಿಂದ ಕರ್ನಾಟಕ ಅಡಿಕೆ ಬೆಳೆಗಾರರು ತತ್ತರಿಸಿ ಹೋಗಿದ್ದಾರೆ. ಗಾಯದ ಮೇಲೆ ಬರೆ ಎಂಬಂತೆ ಭೂತಾನ್‌ನಿಂದ ಕಳಪೆ ಗುಣಮಟ್ಟದ ಅಡಿಕೆ ಆಮದು ಮಾಡಿಕೊಳ್ಳಲು ಸರ್ಕಾರ ಮುಂದಾಗಿದೆ.

ಭಾರತಕ್ಕೆ ಹಸ್ತಾಂತರ: ಕೊನೆಯ ಆಯ್ಕೆ ಕಳೆದುಕೊಂಡ ನೀರವ್ ಮೋದಿ! ಭಾರತಕ್ಕೆ ಹಸ್ತಾಂತರ: ಕೊನೆಯ ಆಯ್ಕೆ ಕಳೆದುಕೊಂಡ ನೀರವ್ ಮೋದಿ!

ಸರ್ಕಾರ ಈ ನಡೆಯನ್ನು ಖಂಡಿಸಿ ಆಮ್‌ ಆದ್ಮಿ ಪಕ್ಷ (ಎಎಪಿ) ಮುಖಂಡರಾದ ಟಿ.ನೇತ್ರಾವತಿ ಅವರು ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಎದುರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು. ಆದರೆ ಜಿಲ್ಲಾಡಳಿತ ಹಾಗೂ ಪೊಲೀಸ್‌ ಇಲಾಖೆಯು ಬಲವಂತದಿಂದ ಎಳನೀರು ಕುಡಿಸಿ, ಕಾರ್ಯಕರ್ತರನ್ನು ಬಂಧಿಸುವ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಿದೆ ಎಂದು ಅವರು ಆಕ್ರೋಶ ಹೊರಹಾಕಿದರು.

Araga Jnanendra Misused His Power And Ended Protest Against The Import Areca Nut.

ಗೃಹಸಚಿವರಿಂದ ಪೊಲೀಸ್ ಇಲಾಖೆ ದುರ್ಬಳಕೆ

ಗೃಹಸಚಿವ ಆರಗ ಜ್ಞಾನೇಂದ್ರ ಅವರಿಗೆ ತಾಕತ್ತಿದ್ದರೆ ಭೂತಾನ್‌ ಅಡಿಕೆ ಆಮದನ್ನು ಗಟ್ಟಿ ಧ್ವನಿಯಲ್ಲಿ ವಿರೋಧಿಸುವ ಧೈರ್ಯ ತೋರಿಸಲಿ. ಅದರ ಬದಲು ಪೊಲೀಸ್‌ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಸತ್ಯಾಗ್ರಹದ ಹಕ್ಕನ್ನು ಕಸಿಯುವುದು ಹೇಡಿತನ ಕೆಲಸ ಮಾಡಿದ್ದಾರೆ. ಎಎಪಿಯು ಅಡಿಕೆ ಬೆಳೆಗಾರರ ಪರವಾಗಿದೆ. ಅವರ ಹಿತರಕ್ಷಣೆಗೆ ಸದಾ ಬದ್ಧವಾಗಿರುತ್ತದೆ. ಒಂದು ಪ್ರತಿಭಟನೆಯನ್ನು ಹತ್ತಿಕ್ಕಿದ ಮಾತ್ರಕ್ಕೆ ನಾವು ಸುಮ್ಮನಾಗುತ್ತೇವೆ ಎಂದು ಬಿಜೆಪಿ ನಾಯಕರು ಭಾವಿಸಿದ್ದರೆ ಅದು ತಪ್ಪು. ನಮ್ಮ ಹೋರಾಟ ಬೇರೆಬೇರೆ ಸ್ವರೂಪದಲ್ಲಿ ಮುಂದುವರಿಯಲಿದೆ ಎಂದು ಅವರು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರು ಬಹಿರಂಗ ಸಮಾವೇಶಗಳಲ್ಲಿ ಮೇಕ್ ಇನ್‌ ಇಂಡಿಯಾ ಮಂತ್ರ ಜಪಿಸುತ್ತಾರೆ. ಆದರೆ ಅದಕ್ಕೆ ವಿರುದ್ಧವಾಗಿ, ವಿದೇಶದಲ್ಲಿ ಉತ್ಪಾದನೆಯಾದ ಅಡಿಕೆಯನ್ನು ಸದ್ದಿಲ್ಲದೇ ತರಿಸುತ್ತಾರೆ. ಭಾರತಕ್ಕೆ ಭೂತಾನ್‌ ಅಡಿಕೆಯ ಅವಶ್ಯಕತೆ ಇಲ್ಲದಿದ್ದರೂ ಆಮದು ಮಾಡಿಕೊಳ್ಳುವ ಕಂಪನಿಗಳಿಗೆ ಲಾಭ ಮಾಡಿಕೊಟ್ಟು ಕಮಿಷನ್‌ ಪಡೆಯುವ ದುರಾಲೋಚನೆಯಿಂದ ಈ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಗುಡುಗಿದರು.

Araga Jnanendra Misused His Power And Ended Protest Against The Import Areca Nut.

ಆಮದು ಮಾಡಿಕೊಳ್ಳುವ ಅಡಿಕೆಗೆ ಭಾರೀ ಆಮದು ಸುಂಕ ವಿಧಿಸಲು ಕೂಡ ಕೇಂದ್ರ ಸರ್ಕಾರ ಮುಂದಾಗಿಲ್ಲ. ಅಡಿಕೆ ಬೆಳೆಗಾರರ ಬಗ್ಗೆ ಬಿಜೆಪಿಗೆ ಕಿಂಚಿತ್ತೂ ಕಾಳಜಿಯಿಲ್ಲ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಬ್ರಿಜೇಶ್ ಕಾಳಪ್ಪ ಹೇಳಿದರು.

English summary
Home minister Araga Jnanendra misused his power and ended protest against the import areca nut, Aam Aadmi Party leader Brijesh Kalappa said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X