ನನ್ನ ಆತ್ಮ ಕಳ್ಳ ಎಂದರೇ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ: ಆರಗ ಜ್ಞಾನೇಂದ್ರ

ಬೆಂಗಳೂರು,ಜನವರಿ 16: ನನಗೆ ಯಾರ ಸರ್ಟಿಫಿಕೇಟ್ ಆಗತ್ಯ ಇಲ್ಲ. ನನ್ನ ಆತ್ಮ ಕಳ್ಳ ಎನ್ನುವವರೆಗೂ ನಾನು ಧೈರ್ಯವಾಗಿ ಬದುಕುತ್ತೇನೆ, ಕಳ್ಳ ಎಂದ ದಿನ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಗೃಹ ಸಚಿವ ಆಗರ ಜ್ಞಾನೇಂದ್ರ ಹೇಳಿದ್ದಾರೆ.

ಭಾನುವಾರ ಬೆಂಗಳೂರಿನಲ್ಲಿ ಮಲೆನಾಡು ಮಿತ್ರ ವೃಂದ ಆಯೋಜಿಸಿದ್ದ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತಿದ ಅವರು, ಪಿಎಸ್ ಐ 107 ಜನ ರನ್ನ ಅರೆಸ್ಟ್ ಮಾಡಿಸಿದ್ದೇನೆ. ನಾನು ಪ್ರಮಾಣಿಕವಾಗಿ ಹಾಗೂ ಪಾರದರ್ಶಕವಾಗಿ ಬದುಕುವ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ಸ್ಯಾಂಟ್ರೊ ರವಿ ಯಂಥ ವ್ಯಕ್ತಿಗಳಿಂದ ಆಮಿಷಕ್ಕೆ ಒಳಗಾಗುವಂಥ ಪ್ರಸಂಗ ಬರುವಂತಾದರೆ, ಸಾವನ್ನು ಬಯಸುತ್ತೇನೆ. ಸ್ವಚ್ಚ ರಾಜಕಾರಣದಲ್ಲಿ ಬದ್ಧತೆ ಹೊಂದಿರುವ ನಾನು, ಸಮಾಜ ಧ್ರೋಹಿಗಳೂ ಮತ್ತು ಪೀಡಕರಿಂದ ಅಕ್ರಮವಾಗಿ ಹಣಗಳಿಸಬೇಕಾದ ಸಂದರ್ಭ ಬಂದರೆ, ಬದುಕಲು ಇಚ್ಛಿಸುವುದಿಲ್ಲ ಎಂದರು.

Araga jnanendra Said That I Will Commit Suicide At That Moment If My Soul Says I Am Theif

ನನ್ನ ಗುಜರಾತ್ ಪ್ರವಾಸಕ್ಕೂ ಸ್ಯಾಂಟ್ರೋ ರವಿ ಬಂಧನಕ್ಕೂ ಥಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದರು. ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು ಪಾರದರ್ಶಕವಾಗಿವೆ.

ಗುಜರಾತ್ ಪ್ರವಾಸದ ಸಂದರ್ಭದಲ್ಲಿ ರಾಜ್ಯದಲ್ಲಿ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯ ಸ್ಥಾಪನೆ ಕುರಿತು ರಾಷ್ಟ್ರೀಯ ವಿಧಿ ವಿಜ್ಞಾನ ವಿಶ್ವ ವಿದ್ಯಾಲಯದ ಉಪ ಕುಲಪತಿಗಳು ಹಾಗೂ ಇತರ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಇದರ ಮುಂದುವರಿದ ಭಾಗವಾಗಿ ಶೀಘ್ರದಲ್ಲಿಯೇ ವಿಶ್ವ ವಿದ್ಯಾಲಯದ ಶಂಕು ಸ್ಥಾಪನ ಕಾರ್ಯಕ್ರಮವೂ ನಡೆಯಲಿದೆ ಎಂದರು.

ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೆಂಧ್ರ ಭಾಯಿ ಪಟೇಲ್ ಅವರನ್ನು ಸೌಜನ್ಯ ಭೇಟಿ ನಡೆಸಿದ್ದೇನೆ. ಎಲ್ಲವೂ ತೆರದ ಪುಸ್ತಕದಂತೆ ಇದೆ. ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದ ವ್ಯಕ್ತಿಯೊಬ್ಬರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದು ಹೇಳಿದರು.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+