ಪಕ್ಷದ ಕಚ್ಚಾಟ ಮರೆಮಾಚಲು ಕಾಂಗ್ರೆಸ್ ನಾಯಕರಿಂದ ಸದನ ದುರುಪಯೋಗ: ಆರಗ ಜ್ಞಾನೇಂದ್ರ
ಬೆಂಗಳೂರು, ಫೆ. 17: ಪಕ್ಷದೊಳಗಿನ ಆಂತರಿಕ ಕಚ್ಚಾಟ ಮರೆ ಮಾಚಲು ಕಾಂಗ್ರೆಸ್ ನಾಯಕರು ಸದನ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರದ್ದು ಹುಸಿ ಒಗ್ಗಟ್ಟು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅಭಿಪ್ರಾಯಪಟ್ಟಿದ್ದಾರೆ
ಸುದ್ದಿಗಾರ ರೊಂದಿಗೆ ಮಾತನಾಡಿದ ಸಚಿವರು, ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ರಾಷ್ಟ್ರ ಧ್ವಜ ಹಾರಿಸಲು ಪ್ರಯತ್ನಿಸಿದ ನಾಗರಿಕರನ್ನು ಗುಂಡಿಟ್ಟು ಕೊಂದ ಇತಿಹಾಸ ಹೊಂದಿರುವ ಕಾಂಗ್ರೆಸ್ ನಾಯಕರು ಅದೇ ರಾಷ್ಟ್ರ ಧ್ವಜವನ್ನು ಸದನದ ಸಂಹಿತೆಗೆ ವಿರುದ್ಧವಾಗಿ ಸದನದಲ್ಲಿ ಪ್ರದರ್ಶಿಸಿದ್ದಾರೆ. ಈ ಮೂಲಕ ಸದನವನ್ನು ದುರುಪಯೋಗ ಪಡಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
''ಕಾಂಗ್ರೆಸ್ ನಾಯಕರು ಅಂತರಿಕವಾಗಿ ಕಚ್ಚಾಡುತ್ತಿದ್ದಾರೆ. ಅದನ್ನು ಮರೆ ಮಾಚಿ ಹುಸಿ ಒಗ್ಗಟ್ಟನ್ನು ಪ್ರದರ್ಶಿಸುತ್ತಿದ್ದಾರೆ. ರಾಷ್ಟ್ರಧ್ವಜವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಬಳಸಿಕೊಂಡಿರುವುದು ಆ ಪಕ್ಷದ ದುರ್ಬಲ ಸ್ಥಿತಿ ಯನ್ನು ಪ್ರತಿಫಲಿಸುತ್ತದೆ,'' ಎಂದು ವ್ಯಾಖ್ಯಾನಿಸಿದ್ದಾರೆ.

ಸಚಿವ ಕೆ. ಎಸ್. ಈಶ್ವರಪ್ಪ ಅಪ್ಪಟ ರಾಷ್ಟ್ರ ಪ್ರೇಮಿ. ಅಂತಹ ನಾಯಕನನ್ನು ಗುರಿಯಾಗಿಟ್ಟುಕೊಂಡು, ಕೆಸರೆರುಚುವ ವ್ಯರ್ಥ ಪ್ರಯತ್ನ ಬಿಟ್ಟು, ಕಾಂಗ್ರೆಸ್ ಶಾಸಕರು, ಸದನದ ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.
ರಾಜ್ಯಪಾಲರು ಜಂಟಿ ಸದನವನ್ನುದ್ದೇಶಿಸಿ ಮಾತನಾಡಿದ ಭಾಷಣಕ್ಕೆ ವಂದನೆ ಸಲ್ಲಿಸುವ ಸಾಂವಿಧಾನಿಕ ಕರ್ತವ್ಯ ನಿರ್ವಹಣೆ, ಜನರ ಕುಂದು ಕೊರತೆಗಳ ನಿವಾರಣೆಗೆ ಬೆಳಕು ಚಲ್ಲುವಂತಹ ಪ್ರಯತ್ನ. ಇಂತಹ ವೇದಿಕೆಯನ್ನು ರಾಜಕೀಯ ಅಂಗಳ ವನ್ನಾಗಿ ಮಾಡುತ್ತಿರುವುದು ವಿಷಾದನೀಯ ಎಂದರು.
ಹಿಜಾಬ್ ವಿವಾದ ಕುರಿತು ಕೇಳಿದ ಪ್ರಶ್ನೆಗೆ, ಹಿಜಾಬ್ ವಿಷಯವನ್ನು ಕೆಲವು ಮತೀಯ ಸಂಘಟನೆಗಳು ಸಮಾಜವನ್ನು ಒಡೆಯುವ ಅಸ್ತ್ರವನ್ನಾಗಿ ಬಳಸುತ್ತಿವೆ. ಇದನ್ನು ಸಹಿಸಲಾಗುವುದಿಲ್ಲ. ಇದರ ಹಿಂದಿರುವ ಷಡ್ಯಂತ್ರವನ್ನು ಪೊಲೀಸರು ಬಯಲು ಗೊಳಿಸುತ್ತಾರೆ. ತಪ್ಪಿಸ್ಥರು ಕಠಿಣ ಶಿಕ್ಷೆಗೆ ಗುರಿಯಾಗಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾರಣಗಿರಿ ಸೇತುವೆ ಕಾಮಗಾರಿಗೆ ರೂ 18 ಕೋಟಿ ಅನುದಾನ ನೀಡಲು ಮುಖ್ಯಮಂತ್ರಿ ಒಪ್ಪಿಗೆ: ಆರಗ ಜ್ಞಾನೇಂದ್ರ
ಬಿಲ್ಸಾಗರಬ ಮೇಲ್ಸೇತುವೆ ನಿರ್ಮಾಣಕ್ಕೆ 18 ಕೋಟಿ: ಕಾರಣಗಿರಿ ಮತ್ತು ಬಪ್ಪನಮನೆ ಸಂಪರ್ಕ ರಸ್ತೆಯ ಶರಾವತಿ ಹಿನ್ನೀರನ ಬಿಲ್ಸಾಗರದಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಈ ಬಾರಿಯ ಆಯಾ ವ್ಯಯದಲ್ಲಿ 18 ಕೋಟಿ ರೂಪಾಯಿ ಅನುದಾನ ಒದಗಿಸಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಒಪ್ಪಿಗೆ ನೀಡಿದ್ದಾರೆ.
ಈ ಬಗ್ಗೆ ಮಾನ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಾಗರ ಶಾಸಕ ಹರತಾಳು ಹಾಲಪ್ಪ ಮತ್ತು ವಿಧಾನ ಪರಿಷತ್ ಸದಸ್ಯ ಅರುಣ್ ನೇತೃತ್ವದ ನಿಯೋಗ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿಯಾಗಿ, ಮನವಿ ಸಲ್ಲಿಸಿತ್ತು. ನಿಯೋಗದಲ್ಲಿ ಸ್ಥಳೀಯರಾದ ಕೆ ವಿ ಕೃಷ್ಣಮೂರ್ತಿ, ನಗರ ಸೊಸೈಟಿ ಗುರುರಾಜ್, ಕೆ . ಎಸ್ ರವಿ, ಮಧುಸೂಧನ್ ನಾವಡ ಹಾಗೂ ಶಾಂತ ಮೂರ್ತಿ ಉಪಸ್ಥಿತರಿದ್ದರು.












Click it and Unblock the Notifications