ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದಲ್ಲೇ ಮೊದಲ ಪ್ರಯತ್ನ, ಇ- ಆಡಳಿತದತ್ತ ಕರ್ನಾಟಕ

ರಾಜ್ಯ ಪತ್ರಾಗಾರ ಇಲಾಖೆ ಮಹತ್ವದ ಡಿಜಿಟಲ್ ಹೆಜ್ಜೆಯನ್ನಿಟ್ಟಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರದ ವಿವಿಧ ಇಲಾಖೆಗಳ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ.

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 3: ರಾಜ್ಯ ಪತ್ರಾಗಾರ ಇಲಾಖೆ ಮಹತ್ವದ ಡಿಜಿಟಲ್ ಹೆಜ್ಜೆಯನ್ನಿಟ್ಟಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ಸರ್ಕಾರದ ವಿವಿಧ ಇಲಾಖೆಗಳ ದಾಖಲೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲಾಗುತ್ತಿದೆ.

ಸಚಿವರಾದ ಉಮಾಶ್ರೀ ಪತ್ರಾಗಾರ ಇಲಾಖೆ ಕೈಗೆತ್ತಿಕೊಂಡಿರುವ ಈ ಕಾರ್ಯದ ಮೊದಲ ಹಂತದ ಡಿಜಿಟಲೀಕರಣ ವ್ಯವಸ್ಥೆಯನ್ನು ಬುಧವಾರ ಲೋಕಾರ್ಪಣೆ ಮಾಡಿದರು. ವಿಕಾಸ ಸೌಧದಲ್ಲಿ ಇ-ಆಡಳಿತ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು ಪತ್ರಾಗಾರ ಇಲಾಖೆಯಲ್ಲಿ ಈ ವ್ಯವಸ್ಥೆ ಪ್ರಪ್ರಥಮ ಬಾರಿಗೆ ಅಳವಡಿಸಲಾಗಿದ್ದು, ಇದು ದೇಶದಲ್ಲಿಯೇ ಪ್ರಥಮ ಎಂದು ಹೇಳಿದರು.

Archives department goes digital, lakhs of historical documents at online

"ರಾಜ್ಯ ಸರ್ಕಾರದ ಪತ್ರಾಗಾರ ಇಲಾಖೆ ಸುಮಾರು 60 ಲಕ್ಷ ಪುಟಗಳ ಐತಿಹಾಸಿಕ ಮೌಲ್ಯವುಳ್ಳ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಲಿದ್ದು, ಈ ಪೈಕಿ ಮೊದಲನೇ ಹಂತದಲ್ಲಿ ಐದು ಲಕ್ಷ ಪುಟಗಳ ದಾಖಲೆಗಳು ಅಂತರ್ಜಾಲದಲ್ಲಿ ವೀಕ್ಷಣೆಗೆ ಲಭ್ಯವಾಗಿವೆ," ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಈಗಾಗಲೇ ರಾಜ್ಯ ಸರ್ಕಾರ ಎಲ್ಲಾ ಇಲಾಖೆಯ ಎ.ಬಿ.ಸಿ. ವರ್ಗದ ಕಡತಗಳ ನಿರ್ವಹಣೆಯನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇಲಾಖೆಯಲ್ಲಿ ಹಸ್ತಪ್ರತಿ ಆಧಾರಿತ 102 ಪುಸ್ತಕಗಳನ್ನು ಪ್ರಕಟಿಸಲಾಗಿದೆ. ನೂರಕ್ಕೂ ಹೆಚ್ಚು ನಾಡು-ನುಡಿ ಸಾಧಕರ, ಸ್ವಾತಂತ್ರ ಹೋರಾಟಗಾರರ, ಯೋಧರ, ಆಡಳಿತಗಾರರ, ಕಲಾವಿದರ ಧ್ವನಿಯನ್ನು ಸಂಗ್ರಹಿಸಲಾಗಿದ್ದು ಅಂತರ್ಜಾಲದಲ್ಲಿ ಅಳವಡಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸುಮಾರು 60 ಸಾವಿರ ಪುಟಗಳ ಕನ್ನಡ ಸೇರಿದಂತೆ ವಿವಿಧ ಭಾಷೆಗಳ ದಾಖಲೆಗಳನ್ನು ಲಿಪ್ಯಾಂತರ ಹಾಗೂ ಪ್ರಕಟಣಾ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಇಂಗ್ಲೆಂಡಿನಲ್ಲಿರುವ ಭಾರತದ ಗ್ರಂಥಾಲಯದಲ್ಲಿ ರಾಜ್ಯದ ಇತಿಹಾಸಕ್ಕೆ ಸಂಬಂಧಿಸಿದ 20 ಸಾವಿರ ಪುಟಗಳ ದಾಖಲೆಗಳನ್ನು ಸಂಗ್ರಹಣೆ ಮಾಡಲಾಗಿದ್ದು 72 ಸಂಪುಟಗಳಲ್ಲಿ ಹೊರತರಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಹೈದ್ರಾಬಾದ್ ಕರ್ನಾಟಕ ಭಾಗದ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ಕಛೇರಿಯನ್ನು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಐತಿಹಾಸಿಕ ದಾಖಲೆಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಂಬಂಧ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಇ-ಆಡಳಿತವನ್ನು ಸದುಪಯೋಗಪಡಿಸಿಕೊಂಡು ಆಡಳಿತ ನಡೆಸಿದಲ್ಲಿ ಆಡಳಿತದಲ್ಲಿ ಪಾರದರ್ಶಕತೆ ತರಬಹುದು ಎಂದು ಉಮಾಶ್ರೀ ಇದೇ ಸಂದರ್ಭದಲ್ಲಿ ಅಭಿಪ್ರಾಯಪಟ್ಟರು.

English summary
Karnataka State Archives department has decided to made 60 lakh pages of the historical content as digital out of which 5 lakh pages are available online, said Kannada and Culture Minister Umashree, inaugurating the E-office at the Vikasa Souda.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X