Get Updates
Get notified of breaking news, exclusive insights, and must-see stories!

ಇನ್ಫೋಸಿಸ್ ಸಂಸ್ಥೆಯವರು ಬೃಹಸ್ಪತಿಗಳೇ?: ಸಿ.ಎಂ ಪ್ರಶ್ನೆ, ನಾರಾಯಣ ಮೂರ್ತಿ - ಸುಧಾ ಮೂರ್ತಿಗೆ ಪರೋಕ್ಷ ಕ್ಲಾಸ್

ಇನ್ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ಹೇಳಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿರುಗೇಟು ನೀಡಿದ್ದಾರೆ.

ಇನ್ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡದೆ ಇರುವುದು ಹಾಗೂ ಈ ಸಂಬಂಧ ದೃಢೀಕರಣ ಪತ್ರ ನೀಡಿರುವುದು ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಅಲ್ಲದೇ ಈ ಪತ್ರ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಸಹ ಆಗಿತ್ತು.

Are Infosys Founders Narayana Murthy and Sudha Murthy Brihaspatis CM Siddaramaiah Questions

ಇದೀಗ ಈ ವಿಚಾರವಾಗಿ ರಿಯಾಕ್ಟ್‌ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಇನ್ಫೋಸಿಸ್‌ ಸಂಸ್ಥೆಯ ಮುಖ್ಯಸ್ಥರಾದ ಸುಧಾ ಮೂರ್ತಿ ಹಾಗೂ ನಾರಾಯಣಮೂರ್ತಿ ಅವರು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಮಾಹಿತಿ ನೀಡುವುದಿಲ್ಲ, ನಾವು ಹಿಂದುಳಿದ ಜಾತಿಯವರಲ್ಲ ಎಂದು ದೃಢೀಕರಣ ಪತ್ರ ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ಸಮೀಕ್ಷೆ ಕೇವಲ ಹಿಂದುಳಿದವರಿಗಲ್ಲಾ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.

ಮುಂದುವರಿದು ಇನ್ಫೋಸಿಸ್ ಸಂಸ್ಥೆಯವರು ಅಂದರೆ ಅವರು ಬೃಹಸ್ಪತಿಗಳೇ? ಸರ್ಕಾರ ಮಾಡುತ್ತಿರುವುದು ಹಿಂದುಳಿದವರ ಸಮೀಕ್ಷೆಯಲ್ಲ ಎಂದು ಈಗಾಗಲೇ ಹೇಳಿದೆ. ಇದು ಎಲ್ಲಾ ಜನರನ್ನು ಒಳಗೊಂಡಂತೆ ಮಾಡುತ್ತಿರುವ ಸಮೀಕ್ಷೆ. ಶಕ್ತಿ ಯೋಜನೆಯಡಿ ಬಡವರು, ಮೇಲ್ಜಾತಿಯವರು ಎಲ್ಲರೂ ಬಳಸಿಕೊಳ್ಳುತ್ತಾರೆ. ಈ ಬಗ್ಗೆ ತಪ್ಪು ಮಾಹಿತಿ ಹೋಗಿದೆ. ಸರ್ಕಾರ ಈ ಬಗ್ಗೆ ಜಾಹೀರಾತು ನೀಡಿದೆ, ಸಚಿವರು ಹಾಗೂ ಮುಖ್ಯಮಂತ್ರಿಗಳ ಸಂದೇಶಗಳನ್ನು ಜನರಿಗೆ ತಲುಪಿಸಲಾಗಿದೆ.

ಸಮೀಕ್ಷೆಯನ್ನು ಹಿಂದುಳಿದವರ ಸಮೀಕ್ಷೆಯೆಂದು ಭಾವಿಸುವುದು ತಪ್ಪು. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರವೂ ಜಾತಿಗಣತಿಯನ್ನು ಮಾಡುತ್ತದೆ. ಆಗಲೂ ಇವರು ಸಹಕರಿಸುವುದಿಲ್ಲವೇ? ಅವರಿಗಿರುವ ತಪ್ಪು ಮಾಹಿತಿಯಿಂದಾಗಿ ಈ ರೀತಿ ಅಸಹಕಾರ ತೋರುತ್ತಿರಬಹುದು. ರಾಜ್ಯದಲ್ಲಿ ಸುಮಾರು 7 ಕೋಟಿ ಜನಸಂಖ್ಯೆಯಿದ್ದು, ಈ ಜನರ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕ ಸಮೀಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಕರ್ನಾಟಕ ಸರ್ಕಾರದಿಂದ ಉದ್ಯೋಗ ಸೃಷ್ಟಿ: ಇನ್ನು ಕಳೆದ ಎರಡೂವರೆ ವರ್ಷಗಳಲ್ಲಿ ನಮ್ಮ‌ ಸರ್ಕಾರ ಬೆಂಗಳೂರಿನಲ್ಲಿ ನಡೆಸಿದ ಉದ್ಯೋಗ ಮೇಳದಿಂದಾಗಿ 58,892 ಮಂದಿ ಉದ್ಯೋಗಾಕಾಂಕ್ಷಿಗಳು ಭಾಗಿಯಾಗಿ ಅನುಕೂಲ, ಅರಿವು ಪಡೆದುಕೊಂಡಿದ್ದಾರೆ. ಇವರಲ್ಲಿ 11,507 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 22,869 ಅಭ್ಯರ್ಥಿಗಳ ಹೆಸರನ್ನು ಅಂತಿಮ ಹಂತಕ್ಕೆ ಆಯ್ಕೆ ಮಾಡಲಾಗಿದೆ.

ಜಿಲ್ಲೆಗಳಲ್ಲಿ ನಡೆದ ಉದ್ಯೋಗ ಮೇಳದಲ್ಲಿ 1,20,563 ಅಭ್ಯರ್ಥಿಗಳು ಭಾಗವಹಿಸಿ, 24,391 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಲಾಗಿದೆ, 48,232 ಅಭ್ಯರ್ಥಿಗಳ ಹೆಸರನ್ನು ಅಂತಿಮ‌ ಸುತ್ತಿಗೆ ಮಾಡಲಾಗಿದೆ. ಈ ಎರಡೂವರೆ ವರ್ಷಗಳಲ್ಲಿ ಸರ್ಕಾರದಲ್ಲಿ ಖಾಲಿ ಇದ್ದ 28,000 ಉದ್ಯೋಗಗಳನ್ನು ಈಗಾಗಲೇ ಭರ್ತಿ ಮಾಡಿದೆ. 35 ಸಾವಿರ ಹುದ್ದೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+