ಎಚ್‌ಡಿ ಕುಮಾರಸ್ವಾಮಿ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು, ಜುಲೈ 6: ತಮ್ಮ ಅವರ ಮಗ, ಮಾಜಿ ಶಾಸಕ ಡಾ ಯತೀಂದ್ರ ಸಿದ್ದರಾಮಯ್ಯ ಅವರ ಬಗ್ಗೆ ಭ್ರಷ್ಟಾಚಾರದ ಆರೋಪ ಮಾಡಿದ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಮಾರಸ್ವಾಮಿ ಅವರ ಕುಟುಂಬದವರೂ ಭ್ರಷ್ಟಾಚಾರ ಮಾಡಿದವರೇ ಎಂದು ಪ್ರಶ್ನಿಸಿದ್ದಾರೆ.

ನಾನು ಮುಖ್ಯಮಂತ್ರಿ ಆಗಿದ್ದೇನೆ ಎಂದ ಮಾತ್ರಕ್ಕೆ ನನ್ನ ಪುತ್ರ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎನ್ನುವುದು ಎಚ್‌ಡಿ ಕುಮಾರಸ್ವಾಮಿ ಅವರ ಕಲ್ಪನಾ ವಿಲಾಸ. ಇದೇ ವಾದವನ್ನು ಅವರಿಗೆ ಮತ್ತು ಅವರ ಕುಟುಂಬಕ್ಕೆ ಅನ್ವಯಿಸಬಹುದಾ? ಎಂದು ಕೇಳಿದ್ದಾರೆ.

Are members of HD Kumaraswamys family also involved in corruption? Siddaramaiah question

ಕುಮಾರಸ್ವಾಮಿಯವರ ಅಣ್ಣ ಸಚಿವರಾಗಿದ್ದರು, ಈಗ ಶಾಸಕ, ಇವರ ಪತ್ನಿ ಶಾಸಕಿಯಾಗಿದ್ದರು, ತಂದೆ ಪ್ರಧಾನಿಗಳಾಗಿದ್ದರು, ಅಣ್ಣನ ಮಗ ಸಂಸದ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಅವರ ಕುಟುಂಬದ ಸದಸ್ಯರೆಲ್ಲೂ ಭ್ರಷ್ಟಾಚಾರದಲ್ಲಿ ತೊಡಗಿಸಿಕೊಂಡಿದ್ರಾ? ಎಂದು ಟ್ವೀಟ್‌ ಮೂಲಕ ಪ್ರಶ್ನಿಸಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ಅಧಿಕಾರಿಗಳ ವರ್ಗಾವಣೆ ಸಹಜ ಪ್ರಕ್ರಿಯೆ. ಹೊಸ ಸರ್ಕಾರ ಬಂದಾಗ ಆಡಳಿತದ ಹಿತದೃಷ್ಟಿಯಿಂದ ವರ್ಗಾವಣೆ ಮಾಡಲೇಬೇಕಾಗುತ್ತದೆ. ಕಳೆದ ಮಾರ್ಚ್-ಏಪ್ರಿಲ್ ತಿಂಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವರ್ಗಾವಣೆಯಾಗಿರಲಿಲ್ಲ. ಈಗ ಆ ಸಾಮಾನ್ಯ ವರ್ಗಾವಣೆಗಳೂ ನಡೆಯುತ್ತಿದೆ.

ಇದು ನಮ್ಮಿಂದ ಶುರುವಾದುದಲ್ಲ, ಹಿಂದಿನ ಸರ್ಕಾರದಲ್ಲಿಯೂ ನಡೆದಿದೆ, ಮುಂದೆಯೂ ನಡೆಯುತ್ತದೆ. ಎಚ್‌ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾಗ ವರ್ಗಾವಣೆ ನಡೆದಿರಲಿಲ್ಲವೇ? ಅವರೂ ಹಣ ಪಡೆದೇ ವರ್ಗಾವಣೆ ನಡೆಸಿದ್ದೇ? ಎಂದು ಕೇಳಿದ್ದಾರೆ.

Are members of HD Kumaraswamys family also involved in corruption? Siddaramaiah question

ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಅಧಿಕಾರವಿಲ್ಲದೆ ಹತಾಶರಾಗಿದ್ದಾರೆ. ಅವರ ಆರೋಪಗಳು ಹಿಟ್ ಅಂಡ್ ರನ್ ಇದ್ದಂತೆ. ಅವರು ತಮ್ಮ ರಾಜಕೀಯ ಜೀವನದಲ್ಲಿ ಈ ವರೆಗೆ ಮಾಡಿರುವ ಯಾವುದೇ ಒಂದು ಆರೋಪವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ದಿದ್ದಾರ? ಕತ್ತಲಲ್ಲಿ ನಿಂತು ಕಲ್ಲೆಸೆದು ಓಡಿಹೋಗುತ್ತಾರೆ. ಅವರನ್ನು ಗಂಭೀರವಾಗಿ ತೆಗೆದುಕೊಳ್ಳಬೇಕಾದ ಅಗತ್ಯ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಬುಧವಾರವಷ್ಟೇ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ವೈಎಸ್ ತೆರಿಗೆ (YST) ವಿಚಾರ ಎತ್ತಿದ್ದು, ಶಿಫಾರಸ್ಸಿನಂತೆ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಉಪ ನಿರ್ದೇಶಕರ ವರ್ಗಾವಣೆ ಆದೇಶ ಕೈ ಸೇರಬೇಕಾದರೆ ವೈಎಸ್‌ಟಿ ತೆರಿಗೆ ಕಡ್ಡಾಯ ಎಂದು ಯತೀಂದ್ರ ವಿರುದ್ಧ ವಾಗ್ದಾಳಿ ಮಾಡಿದ್ದರು.

ವೈಎಸ್‌ಟಿ ತೆರಿಗೆ ಪಾವತಿಸದಿದ್ದರೆ ವರ್ಗಾವಣೆ ಆದೇಶಗಳೆಲ್ಲ ಮುಲಾಜಿಲ್ಲದೆ ಕಸದ ಬುಟ್ಟಿ ಸೇರುತ್ತವೆ. ವರ್ಗಾವಣೆ ಆದೇಶ ಜಾರಿಯಾದ ದಿನವೇ ಅದು ಕೈಗೆ ಸಿಗಬೇಕಾದರೆ #YstTax ಕಡ್ಡಾಯ. ಇಲ್ಲವಾದರೆ ತಪ್ಪಿದ್ದಲ್ಲ ಅನ್ಯಾಯ. 'ಕೈ' ಬೆಚ್ಚಗೆ ಆಗದಿದ್ದರೆ ವರ್ಗಾವಣೆ ಆದೇಶದ ಪ್ರತಿ ನೇರ ಕಸದ ಬುಟ್ಟಿಗೆ ಹೋಗುವುದು 'ಗ್ಯಾರಂಟಿ' ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+