Arecanut: ಕರ್ನಾಟಕ ಅಡಿಕೆ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ಮಾರ್ಚ್ 05: ರಾಜ್ಯದಲ್ಲಿ ಕಳೆದ ವರ್ಷಾಂತ್ಯದ ತಿಂಗಳುಗಳಲ್ಲಿ ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕೆ ರೋಗ ಕಂಡು ಬಂದಿತ್ತು. ಎಷ್ಟು ತಡೆಯಲು ಪ್ರಯತ್ನಿಸಿದರು ಸಾಧ್ಯವಾಗದೇ, ಬೆಳಗಾರರು ನಷ್ಟು ಅನುಭವಿಸಬೇಕಾಯಿತು. ಈ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಕ್ತ ಕ್ರಮಕ್ಕೆ ರೈತರು, ಸಂಸದರು ಆಗ್ರಹಿಸಿದ್ದರು. ಇದೀಗ ರಾಜ್ಯ ಸರ್ಕಾರ ಕಳೆದ ಬಾರಿಯಂತ ತ್ವರಿತವಾಗಿ ಬೆಳಗಾರರಿಗೆ ಪರಿಹಾರ ನೀಡಲು ಕ್ರಮ ವಹಿಸುವುದಾಗಿ ತಿಳಿಸಿದೆ.
ರಾಜ್ಯ ಸರ್ಕಾರ ಅಡಿಕೆ ಬೆಳೆ ನೆಚ್ಚಿಕೊಂಡು ಕೃಷಿಕರಿಗೆ ಸಿಹಿ ಸುದ್ದಿ ಕೊಟ್ಟಿದೆ. ಅಡಿಕೆಗೆ ಎಲೆ ಚುಕ್ಕೆ ರೋಗ ಹಾಗೂ ಹಳದಿ ಎಲೆ ರೋಗಗಳಿಂದ ತೊಂದರೆಗೆ ಒಳಗಾದ ರೈತರಿಗೆ ನಷ್ಟವಾಗಿದೆ. ಅದಷ್ಟು ಶೀಘ್ರವಾಗಿ ಪರಿಹಾರ ಧನ ಬಿಡುಗಡೆ ಮಾಡಲಾಗುವುದು ಎಂದು ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಮಂಗಳವಾರ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಸಚಿವರು ಉತ್ತರಿಸಿದರು. 2023-24ನೇ ಸಾಲಿನಲ್ಲಿ ರೈತರಿಗೆ ಪ್ರತಿ ಹೆಕ್ಟೇರ್‌ಗೆ ರೂ. 4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/- ಮೊತ್ತದ ಸಸ್ಯ ಸಂರಕ್ಷಣಾ ಔಷಧಿಗಳನ್ನು 6,250 ಹೆಕ್ಟೇರ್ ಪ್ರದೇಶಕ್ಕೆ ವಿತರಿಸಿ ರೂ. 2.50 ಕೋಟಿ ಅನುದಾನವನ್ನು 12,300 ಅಡಿಕೆ ಬೆಳೆಗಾರರಿಗೆ ನೀಡಲಾಗಿರುತ್ತದೆ ಎಂದು ಮಾಹಿತಿ ನೀಡಿದರು.
ಅಡಿಕೆ ಬೆಳೆಗಾರರಿಗೆ ಅಡಿಕೆ ಬೆಳೆಯ ಕಟಾವು ಹಾಗೂ (ದೋಟಿ) ಖರೀದಿಸಲು ಕೃಷಿ ಯಾಂತ್ರೀಕರಣ ಯೋಜನೆಯಡಿ ಸಾಮಾನ್ಯ ವರ್ಗದವರಿಗೆ ಶೇಕಡಾ 40 ರಷ್ಟು ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇಕಡಾ 50 ರಂತೆ ಸಹಾಯಧನ ನೀಡಲಾಗುತ್ತಿದೆ.
2023-24ನೇ ಸಾಲಿನಲ್ಲಿ 1,201 ಫಲಾನುಭವಿಗಳಿಗೆ ರೂ.3.66 ಕೋಟಿ ಸಹಾಯಧನ ನೀಡಲಾಗಿದೆ. ಅಡಿಕೆ ಎಲೆ ಚುಕ್ಕೆ ರೋಗದ ನಿಯಂತ್ರಣ ಕುರಿತು ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ತಜ್ಞರ ಸಹಯೋಗದೊಂದಿಗೆ ತರಬೇತಿ ಕಾರ್ಯಗಾರಗಳು ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸುವುದರ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ಅವರು ಹೇಳಿದರು.
ಈ ವರ್ಷ 2025ರಲ್ಲಿ ಯಾವೆಲ್ಲ ಮಾನದಂಡದ ಆಧಾರದಲ್ಲಿ ಎಷ್ಟು ಪರಿಹಾರ ನೀಡಲಿದ್ದಾರೆ. ಕಳೆದ ವರ್ಷದಂತೆ ಅಷ್ಟೇ ಪರಿಹಾರ ನೀಡುತ್ತಾರಾ ಎಂಬುದು ತಿಳಿಯಬೇಕಿದೆ. ಪ್ರತಿ ಹೆಕ್ಟೇರ್‌ಗೆ ರೂ. 4000/- ಗಳಂತೆ 1.5 ಹೆಕ್ಟೇರ್ ವರೆಗೆ ಪ್ರತಿ ಫಲಾನುಭವಿಗೆ ಗರಿಷ್ಠ ರೂ. 6000/ ಮೊತ್ತದ ಸಸ್ಯ ಸಂರಕ್ಷಣಾ ಔಧಿಗೆ ನೀಡಲಾಗಿತ್ತು. ಈ ವರ್ಷ ಅಗತ್ಯ ವಸ್ತುಗಳ ದರ ಹೆಚ್ಚಾಗಿದೆ. ಹೀಗಾಗಿ ಪರಿಹಾರ ವಿತರಣೆ ಮೊತ್ತದಲ್ಲಿ ಏರಿಕೆ ಆಗುತ್ತಾ ಎಂಬುದು ಆದೇಶದ ಬಳಿಕ ಗೊತ್ತಾಗಲಿದೆ.
ನಷ್ಟ ತುಂಬಲು ಅಡಿಕೆಗೆ ಉತ್ತಮ ಬೆಲೆ ಸಿಗಬೇಕು
ಅಡಿಕೆ ಬೆಲೆ ಏರಿಳಿಕೆ ಮುಂದುವರಿಯುತ್ತದೆ. ಬದಲಾದ ಹವಾಮಾನ ಕಾರಣದಿಂದಾಗಿ ಅಡಿಕೆ ಫಸಲು ವರ್ಷಕ್ಕಿಂತ ವರ್ಷಕ್ಕೆ ಕಡಿಮೆ ಆಗಿದೆ. ಇತ್ತ ಅಡಿಕೆ ಪ್ರತಿ ಕ್ವಿಂಟಾಲ್ ಸೂಕ್ತ ಬೆಲೆ ಸಿಗಬೇಕಿದೆ. ಇಲ್ಲವಾದಲ್ಲಿ ಬೆಳೆಗಾರರು ಮತ್ತಷ್ಟು ನಷ್ಟ ಅನುಭವಿಸಲಿದ್ದಾರೆ. ಸರ್ಕಾರ ಅನುದಾನ ಕೊಟ್ಟಿಲ್ಲ. ಕೈಯಿಂದಮೇ ಎಲೆ ಚುಕ್ಕೆ ರೋಗ ನಿರೋಧಕ ಔಷಧಿ, ನಿರ್ವಹಣೆ ಮಾಡಿದ್ದಾರೆ. ಆ ಖರ್ಚು ಭರಿಸಿದ ಲಾಭ ತಂದುಕೊಡುಂವಂತೆ ಬೆಲೆ ಸಿಗಬೇಕಿದೆ. ಇಲ್ಲವಾದರೆ ಅವರ ಬದುಕು ಮತ್ತಷ್ಟು ಕಷ್ಟಕರವಾಗಬಹುದು.












Click it and Unblock the Notifications