ಕೇಂದ್ರದಿಂದ ವಾರಾಂತ್ಯದೊಳಗೆ ಅಡಿಕೆಗೆ ಬೆಂಬಲ ಬೆಲೆ ನಿಗದಿ
ಬೆ೦ಗಳೂರು, ಆಗಸ್ಟ್, 24: ಅಡಿಕೆಗೆ ಬೆಂಬಲ ಬೆಲೆ ನೀಡುವ ಬಗ್ಗೆ ಈ ವಾರದ ಅ೦ತ್ಯದೊಳಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿದೆ.
ವಾಣಿಜ್ಯ ಹಾಗೂ ಕೃಷಿ ಇಲಾಖೆಯ ಅಧಿಕಾರಿಗಳೊ೦ದಿಗೆ ಅಡಿಕೆ ಬೆಳೆಯುವ ರಾಜ್ಯಗಳ ತೋಟಗಾರಿಕೆ ಇಲಾಖೆ ಅಧಿಕಾರಿಗಳ ನಡುವೆ ನವದೆಹಲಿಯಲ್ಲಿ ನಡೆದ ಸಭೆ ನಂತರ ಈ ತೀರ್ಮಾನಕ್ಕೆ ಬರಲಾಗಿದೆ.[ಅಡಿಕೆ ಧಾರಣೆ ಕುಸಿತಕ್ಕೆ ಸಾರ್ಕ್ ಒಕ್ಕೂಟ ಕಾರಣ ಅಂದ್ರೆ ನಂಬ್ತೀರಾ?]

ಅಡಿಕೆ ಬೆಳೆ ನಿರ್ವಹಣೆ ಮತ್ತು ಇತರೆ ವೆಚ್ಚಗಳ ಬಗ್ಗೆ ಕೆಲವು ಮಾಹಿತಿ ನೀಡಲು ಕರ್ನಾಟಕ ಹೊರತುಪಡಿಸಿ ಉಳಿದ ರಾಜ್ಯಗಳ ತೋಟಗಾರಿಕೆ ಇಲಾಖೆಗೆ ಕೇ೦ದ್ರ ಸರ್ಕಾರ ಸೂಚನೆ ನೀಡಿದೆ.[ತೆಂಗಿನಕಾಯಿ ಬೆಲೆ ಪ್ರಪಾತಕ್ಕೆ ಕುಸಿಯಲು ಕಾರಣಗಳೇನು?]
ಪ್ರತಿ ಕ್ವಿ೦ಟಾಲ್ ಅಡಿಕೆಗೆ ಕನಿಷ್ಠ 40 ಸಾವಿರ ರು. ಬೆಂಬಲ ಬೆಲೆ ನೀಡುವ೦ತೆ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಇನ್ನು 3-4 ದಿನಗಳಲ್ಲಿ ಸ್ಪಷ್ಟ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ತೆಂಗಿಗೆ ಬೆಂಬಲ ನೀಡಿಕೆ ಸಂಬಂಧವೂ ಚರ್ಚೆ ನಡೆಯಿತು.












Click it and Unblock the Notifications