ವಿದ್ಯಾರ್ಥಿಗಳೇ ಸಾಲ ಸೌಲಭ್ಯ ಬೇಕಿತ್ತಾ? ಹಾಗಿದ್ರೆ ಈ ಸುದ್ದಿ ಓದಿ!

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಈಗ, 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆ ಅಡಿಯಲ್ಲಿ ಸಾಲ ಸೌಲಭ್ಯವನ್ನು ಪಡೆಯಲು ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದ್ರೆ ಈ ಸಾಲ ಸೌಲಭ್ಯಕ್ಕೆ ಯಾರೆಲ್ಲಾ ಅರ್ಜಿ ಹಾಕಬಹುದು? ಅರ್ಜಿ ಸಲ್ಲಿಸೋಕೆ ಕೊನೆಯ ದಿನಾಂಕ ಯಾವುದು? ಸಂಪೂರ್ಣ ಮಾಹಿತಿ ಇಲ್ಲಿದೆ.

ಅಂದಹಾಗೆ ಈ ಯೋಜನೆ ಅಡಿಯಲ್ಲಿ ಸಿ.ಇ.ಟಿ/ ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ & ಪಿಎಚ್‌ಡಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಈಗ ಸಾಲ ಸೌಲಭ್ಯ ಪಡೆಯಬಹುದು. ಅರ್ಜಿದಾರರು 18 ವರ್ಷ ಮೇಲ್ಪಟ್ಟು, 35 ವರ್ಷದ ಒಳಗಿನವರು ಆಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯ ಒಳಗೆ ಇರಬೇಕು.

Arivu Loan Last Date To Apply & Complete Information Is Here

ವಿದ್ಯಾರ್ಥಿಗಳು ಸಾಲ ಪಡೆಯಲು ನಿಯಮ

ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು. ಇನ್ನೂ ಪ್ರಮುಖವಾಗಿ ಪ್ರಮಾಣ ಪತ್ರ ಚಾಲ್ತಿಯಲ್ಲಿರಬೇಕು. ಕರ್ನಾಟಕ ರಾಜ್ಯದವರು ಆಗಿರಬೇಕು ಮತ್ತು ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು, ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯ ಜೋಡಣೆ & ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು. ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಈ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ವೈಬ್ ಸೈಟ್ www.kacdc.karnataka.gov.in ನಲ್ಲಿ ನವೆಂಬರ್ 30ರ ಒಳಗೆ ಸಲ್ಲಿಸಬಹುದು. ಹಾಗೇ ಹೆಚ್ಚಿನ ಮಾಹಿತಿಗಾಗಿ, ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು ಉತ್ತರ ಜಿಲ್ಲೆ, ನಂ.324/62, ಸರ್ವಶೀಲಾ ಕಾಂಪ್ಲೆಕ್ಸ್, ಬಳ್ಳಾರಿ ಮೈನ್ ರೋಡ್, ಗಂಗಾನಗರ, ಬೆಂಗಳೂರು-560 032 ಸಂಪರ್ಕಿಸಬಹುದು.

ಅಥವಾ ನಿಗಮದ ಜಿಲ್ಲಾ ಕಚೇರಿ ಸಹಾಯವಾಣಿ ಸಂಖ್ಯೆ 080-23539600 ಅಥವಾ 080-23539601 ಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ಉತ್ತರ ಜಿಲ್ಲೆ, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಈಗ ಮಾಹಿತಿ ನೀಡಿದ್ದಾರೆ. ಅಗತ್ಯ ಇರುವ ಮತ್ತು ಆಸಕ್ತ ಅರ್ಹ ವಿದ್ಯಾರ್ಥಿಗಳು ಈ ಸಾಲ ಸೌಲಭ್ಯದ ಸಹಾಯ ಪಡೆಯಲು ಈ ಮೂಲಕ ತಿಳಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+