ಅರ್ಜುನ ಆನೆಯ ನೆನಪಿಗಾಗಿ ಸ್ಮಾರಕ ನಿರ್ಮಾಣ: ಎಲ್ಲೆಲ್ಲಿ ಗೊತ್ತಾ?
ಬೆಳಗಾವಿ, ಡಿಸೆಂಬರ್ 06: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಆನೆ ಕಾರ್ಯಾಚರಣೆ ವೇಳೆ ಪುಂಡಾನೆಯ ಜೊತೆ ಕಾದಾಡಿ ಮಡಿದ ಕ್ಯಾಪ್ಟನ್, ಸೀನಿಯರ್, ಬಲಭೀಮ ಎಂದೇ ಖ್ಯಾತವಾಗಿದ್ದ ಹಾಗೂ ಮೈಸೂರಿನ ಜಗದ್ವಿಖ್ಯಾತ ದಸರಾ ಜಂಬೂಸವಾರಿಯಲ್ಲಿ 8 ಬಾರಿ ಚಿನ್ನದ ಅಂಬಾರಿ ಹೊತ್ತಿದ್ದ ಅರ್ಜುನ ಆನೆಯ ಸ್ಮಾರಕವನ್ನು ಹಾಸನ ಮತ್ತು ಮೈಸೂರು ಜಿಲ್ಲೆಯಲ್ಲಿ ನಿರ್ಮಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಅರ್ಜುನನ ಸಾವಿನ ಬಗ್ಗೆ ತೀವ್ರ ಶೋಕ ವ್ಯಕ್ತಪಡಿಸಿರುವ ಅವರು, ನಾಡಿನ ಜನರ ಪ್ರೀತಿಗೆ ಪಾತ್ರನಾಗಿದ್ದ ಅರ್ಜನನ ಸಾವು ಅತ್ಯಂತ ದುಃಖದಾಯಕ. ಅರ್ಜನ ಮತ್ತು ನಾಡಿನ ಜನತೆಯ ನಡುವೆ ಭಾವನಾತ್ಮಕ ಸಂಬಂಧ ಇತ್ತು. ಈ ಆನೆ ಸಾವು ನಾಡಿನಾದ್ಯಂತ ಇರುವ ಪ್ರಾಣಿ ಪ್ರಿಯರಿಗೆ ಮತ್ತು ಸಾರ್ವಜನಿಕರಿಗೆ ನೋವು ತಂದಿದೆ.

ಹಲವು ಹುಲಿ, ಆನೆ ಕಾರ್ಯಾಚರಣೆಗಳಲ್ಲಿ ಯಶಸ್ವಿಯಾಗಿ ಪಾಲ್ಗೊಂಡಿದ್ದ ಅರ್ಜುನನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ಅಂತ್ಯ ಸಂಸ್ಕಾರ ನೆರವೇರಿಸಲಾಗಿದ್ದು, ಅರ್ಜುನ ಸೇವೆಯನ್ನು ನಾಡಿನ ಜನರು ಸದಾ ಸ್ಮರಿಸುವಂತೆ ಹಾಸನ ಮತ್ತು ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.
ವನ್ಯಜೀವಿ ಕಾರ್ಯಾಚರಣೆ: ಸಿಬ್ಬಂದಿಗೆ ಸೂಕ್ತ ತರಬೇತಿ
ಆನೆ ಸೇರಿದಂತೆ ವನ್ಯಮೃಗಗಳು ಕಾಡಿನಿಂದ ನಾಡಿಗೆ ಬರುತ್ತಿರುವುದು ಹೆಚ್ಚಾಗುತ್ತಿದ್ದು, ಕಾರ್ಯಾಚರಣೆಯ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಮತ್ತು ವನ್ಯಮೃಗಗಳೂ ಸಾವಿಗೀಡಾಗುತ್ತಿರುವುದು ಆಂತಕದ ವಿಷಯವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಪಡೆ ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಲು ಕ್ರಮ ಕೈಗೊಳ್ಳುಲು ಸೂಚಿಸಲಾಗಿದೆ ಎಂದು ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ, ಕೊಠಡಿ ಸಂಖ್ಯೆ 318ರಲ್ಲಿ ನಡೆದ ಸಭೆಯಲ್ಲಿ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರುಗಳಾದ ಕೆ.ಜೆ. ಜಾರ್ಜ್, ಬೋಸರಾಜ್ ಮತ್ತು ಕೆ.ಎನ್. ರಾಜಣ್ಣ ಹಾಗೂ ಮೂರೂ ಜಿಲ್ಲೆಗಳ ಶಾಸಕರ ಉಪಸ್ಥಿತಿಯಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ಹೆಚ್ಚಾಗಿರುವ 9 ಜಿಲ್ಲೆಗಳಿಗೆ ಈಗಾಗಲೇ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ವಾರದಲ್ಲಿ ಕನಿಷ್ಠ 2 ದಿನ ನಿಯೋಜಿತ ಜಿಲ್ಲೆಯಲ್ಲೇ ಉಳಿದು ಪರಿಸ್ಥಿತಿಯನ್ನು ನಿಭಾಯಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸನ್ನಿವೇಶದಲ್ಲಿ ಆನೆ ನಾಡಿಗೆ ಬಾರದಂತೆ ತಡೆಯಲು ನಮ್ಮ ಬಳಿ ಇರುವ ಉತ್ತಮ ಮಾರ್ಗೋಪಾಯ ಎಂದರೆ ರೈಲ್ವೆ ಬ್ಯಾರಿಕೇಡ್ ಆಗಿದೆ. ಆದರೆ ಇದು ಒಂದೆರಡು ವರ್ಷದಲ್ಲಿ ಆಗುವ ಕೆಲಸವಲ್ಲ. ಬಜೆಟ್ ನಲ್ಲಿ 100 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದ್ದು, ಆನೆ ಹಾವಳಿ ಹೆಚ್ಚಾಗಿರುವ ಕಡೆ ರೈಲ್ವೆ ಬ್ಯಾರಿಕೇಡ್ ಹಾಕಲು ಕ್ರಮ ವಹಿಸಲಾಗಿದೆ. ಆನೆಗಳ ಸಮಸ್ಯೆ ಇರುವ ಭಾಗದ ಶಾಸಕರೊಂದಿಗೆ ಮುಖ್ಯಮಂತ್ರಿಗಳ ಬಳಿಗೆ ನಿಯೋಗ ತೆರಳಿ ಹೆಚ್ಚಿನ ಅನುದಾನಕ್ಕೆ ಮನವಿ ಮಾಡೋಣ ಎಂದರು.
ಕಳೆದ ಏಪ್ರಿಲ್ ನಿಂದೀಚೆಗೆ ರಾಜ್ಯದಲ್ಲಿ ಒಟ್ಟು 43 ಜನರು ಮಾನವ -ವನ್ಯಜೀವಿ ಸಂಘರ್ಷದಲ್ಲಿ ಸಾವಿಗೀಡಾಗಿದ್ದು, ಈ ಪೈಕಿ 30 ಆನೆ ದಾಳಿಯಿಂದ ಮೃತಪಟ್ಟಿದ್ದಾರೆ. ಚಾಮರಾಜನಗರದಲ್ಲಿ 10, ಕೊಡಗು ಜಿಲ್ಲೆಯಲ್ಲಿ 7, ರಾಮನಗರ 3, ಬೆಂಗಳೂರು ಮತ್ತು ಮೈಸೂರು, ಹಾಸನ ವೃತ್ತದಲ್ಲಿ ತಲಾ 2, ಶಿವಮೊಗ್ಗದಲ್ಲಿ ಒಬ್ಬರು ಆನೆ ದಾಳಿಯಿಂದ ಸಾವಿಗೀಡಾಗಿದ್ದಾರೆ ಎಂದು ವಿವರಿಸಿದರು.
ಉಳಿದಂತೆ ಕಾಡುಹಂದಿ ದಾಳಿಗೆ ಇಬ್ಬರು, ಮೊಸಳೆಗೆ ಒಬ್ಬರು ಬಲಿಯಾಗಿದ್ದಾರೆ. ಕರಡಿ ದಾಳಿಯಿಂದ ಇಬ್ಬರು ಸಾವಿಗೀಡಾಗಿದ್ದರೆ, ಚಿರತೆ ದಾಳಿಯಿಂದ 3 ಸಾವು ಸಂಭವಿಸಿದೆ. ಹುಲಿ ದಾಳಿಯಿಂದ 4 ಸಾವು ಸಂಭವಿಸಿದ್ದರೆ, ಕೋತಿ ಕಚ್ಚಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದರು.
ಆನೆಗಳ ಸ್ಥಳಾಂತರ ಕಷ್ಟಸಾಧ್ಯವಾದ ಕೆಲಸ. ರಾಜ್ಯದಲ್ಲಿ ಆನೆಗಳ ಸಂಖ್ಯೆ ಹೆಚ್ಚಾಗಿದೆ. ಕಾಡೊಳಗೆ ಆಹಾರ ಸಿಗುತ್ತಿಲ್ಲ ಎಂಬ ದೂರಿದೆ. ನೀರಿನ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ, ಆದರೆ ಆ ಸಂಖ್ಯೆ ಹೆಚ್ಚಿಸಬೇಕು. ಪುಂಡಾನೆ ಹಿಡಿಯಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸಚಿವ ಬೋಸರಾಜ್, ಆನೆಯಿಂದ ಹೆಚ್ಚಿನ ಸಾವು ಸಂಭವಿಸಿದೆ. ವೈಜ್ಞಾನಿಕವಾಗಿ ವಿದ್ಯುತ್ ತಂತಿ ಬೇಲಿ ಹಾಕಿದರೂ ಅತ್ಯಂತ ಬುದ್ಧವಂತಿಕೆಯಿಂದ ಆನೆ ದಾಟಿ ಬರುತ್ತದೆ. ಹೀಗಾಗಿ ಆನೆ ತಡೆಯಲು ವ್ಯವಸ್ಥೆ ರೂಪಿಸಬೇಕಾಗುತ್ತದೆ. ಬೆಳೆ ಹಾನಿ ಹೆಚ್ಚಾಗುತ್ತಿದೆ. ಕಾಫಿ ತೋಟಗಳಲ್ಲಿ ಆನೆಗಳು ಉಳಿಯುತ್ತಿವೆ. ಹೀಗಾಗಿ ಆನೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಬೇಕೆಂದರು.
-
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ












Click it and Unblock the Notifications