ದಾವಣಗೆರೆಯಲ್ಲಿ ಜೂನ್‌ 4ರಿಂದ ಸೇನಾ ನೇಮಕಾತಿ

Posted By:
Subscribe to Oneindia Kannada

ದಾವಣಗೆರೆ, ಮೇ 11 : ದಾವಣಗೆರೆಯಲ್ಲಿ ಜೂನ್ 4 ಸೇನಾ ನೇಮಕಾತಿ ನಡೆಯಲಿದೆ. ನೇಮಕಾತಿಯಲ್ಲಿ ಪಾಲ್ಗೊಳ್ಳಲು ಇಚ್ಛಿಸುವ ಅಭ್ಯರ್ಥಿಗಳು ಮೇ 20ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ನೋಂದಣಿ ಮಾಡಿಕೊಳ್ಳಬೇಕು.

ದಾವಣಗೆರೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂನ್ 4 ರಿಂದ 8ರ ತನಕ ಸೇನಾ ನೇಮಕಾತಿ ನಡೆಯಲಿದೆ. ಸೈನಿಕ, ಲಿಪಿಕ/ ಉಗ್ರಾಣ ಪಾಲಕ, ತಾಂತ್ರಿಕ, ನರ್ಸಿಂಗ್ ಅಸಿಸ್ಟೆಂಟ್, ಸೋಲ್ಜರ್ ಟೆಕ್ನಿಕಲ್ ಹಾಗೂ ಸೋಲ್ಜರ್ ಜೆಡಿ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. [UPSC ನೇಮಕಾತಿ ವಿವರಗಳು]

army recruitment

ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಪುರುಷ ಅಭ್ಯರ್ಥಿಗಳು ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದಾಗಿದೆ.

ನೇಮಕಾತಿಯಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಭರ್ತಿ ಮಾಡಬೇಕಾಗಿದ್ದು www.joinindianarmy.nic.in ವೆಬ್‌ಸೈಟ್‌ಗೆ ಭೇಟಿ ನೀಡಿ, ಮೇ 20 ರೊಳಗೆ ಅರ್ಜಿಗಳನ್ನು ಭರ್ತಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ 0824-2450933 ದೂರವಾಣಿ ಸಂಖ್ಯೆಗೆ ಕರೆ ಮಾಡಬಹುದಾಗಿದೆ.

ಉದ್ಯೋಗವಕಾಶಗಳು

* ಕರ್ನಾಟಕ ರಾಜ್ಯ ಉಗ್ರಾಣ ನಿಗಮದಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು, ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 4, 2016. [ವಿವರಗಳು ಇಲ್ಲಿವೆ]

* ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ದೇಶದೆಲ್ಲೆಡೆ ಪ್ರೊಬೇಷನರಿ ಆಫೀಸರ್ (ಪಿಒ) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಸುಮಾರು 2,200 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಮೇ 04 ರಿಂದ 24ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. [ವಿವರಗಳು]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Army recruitment rally will be held in Davanagere district stadium from June 4 to 8 2016. Candidates should fill applications online before May 20.
Please Wait while comments are loading...