ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅರ್ನಬ್ ಬಂಧನ; ಬಿಜೆಪಿಗೆ ದಿನೇಶ್ ಗುಂಡೂರಾವ್ ಟ್ವೀಟ್ ಬಾಣ!

|
Google Oneindia Kannada News

ಬೆಂಗಳೂರು, ನವೆಂಬರ್ 04 : ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧಿಸಿದ್ದಾರೆ. ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಇದಾಗಿದೆ ಎಂದು ಹಲವಾರು ಬಿಜೆಪಿ ನಾಯಕರು ಟ್ವೀಟ್‌ ಮೂಲಕ ಖಂಡಿಸಿದ್ದಾರೆ.

ರಿಪಬ್ಲಿಕ್ ಟಿವಿಯ ಮುಖ್ಯಸ್ಥ, ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನದ ಕುರಿತು ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಸಹ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಮಾಜಿ ಸಚಿವ, ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ.

ಅರ್ನಬ್ ಗೋಸ್ವಾಮಿ ಬಂಧನವಾಗಿರುವುದು ಯಾವ ಪ್ರಕರಣದಲ್ಲಿ?: ಇಲ್ಲಿದೆ ವಿವರಅರ್ನಬ್ ಗೋಸ್ವಾಮಿ ಬಂಧನವಾಗಿರುವುದು ಯಾವ ಪ್ರಕರಣದಲ್ಲಿ?: ಇಲ್ಲಿದೆ ವಿವರ

"ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ, ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?" ಎಂದು ಟ್ವೀಟ್‌ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಮುಂಬೈನಲ್ಲಿ ಬೆಳ್ಳಂಬೆಳಿಗ್ಗೆ ಹೈಡ್ರಾಮಾ: ಅರ್ನಬ್ ಗೋಸ್ವಾಮಿ ಬಂಧನಮುಂಬೈನಲ್ಲಿ ಬೆಳ್ಳಂಬೆಳಿಗ್ಗೆ ಹೈಡ್ರಾಮಾ: ಅರ್ನಬ್ ಗೋಸ್ವಾಮಿ ಬಂಧನ

 Arnab Goswami Arrest Dinesh Gundu Rao Tweet

ಕೆಲವು ದಿನಗಳ ಹಿಂದೆ ಕನ್ನಡದ ಸುದ್ದಿ ವಾಹಿನಿ ಪವರ್ ಟಿವಿ ಕಚೇರಿ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದರು. ಟಿವಿ ನೇರ ಪ್ರಸಾರ ಮಾಡಲು ಬೇಕಾದ ಕಂಪ್ಯೂಟರ್‌ಗಳನ್ನು ತೆಗೆದುಕೊಂಡು ಹೋಗಿದ್ದರು. ಆಗ ಸುಮಾರು 1 ವಾರಗಳ ಕಾಲ ಪವರ್ ಟಿವಿ ಪ್ರಸಾರ ಸ್ಥಗಿತಗೊಂಡಿತ್ತು.

ಪವರ್ ಟಿವಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪುತ್ರ, ಬಿಜೆಪಿಯ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ವಿರುದ್ಧ ಸುದ್ದಿ ಪ್ರಸಾರ ಮಾಡಿತ್ತು. ಅದಕ್ಕಾಗಿ ಪೊಲೀಸರಿಂದ ದಾಳಿ ಮಾಡಿಸಿ ಪ್ರಸಾರ ನಿಲ್ಲಿಸಲಾಗಿದೆ ಎಂದು ಆರೋಪಿಸಲಾಗಿತ್ತು.

ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಎನ್ನಲು ಅಡ್ಡಿಯಿಲ್ಲ!: ಹೈಕೋರ್ಟ್ಅರ್ನಬ್ ಗೋಸ್ವಾಮಿ 'ನೇಷನ್ ವಾಂಟ್ಸ್ ಟು ನೋ' ಎನ್ನಲು ಅಡ್ಡಿಯಿಲ್ಲ!: ಹೈಕೋರ್ಟ್

Recommended Video

Vote ಮಾಡಿದ ಎಲ್ಲರಿಗೂ ಧನ್ಯವಾದ | DK Shivakumar | Oneindia Kannada

ಬುಧವಾರ ಅರ್ನಬ್ ಗೋಸ್ವಾಮಿ ಬಂಧನವಾಗುತ್ತಿದ್ದಂತೆ ವಿವಿಧ ಕೇಂದ್ರ ಸಚಿವರು ಮಹಾರಾಷ್ಟ್ರ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ. ಶಿವಸೇನೆ ನೇತೃತ್ವದ ಮೈತ್ರಿಕೂಟದ ಸರ್ಕಾರ ಪತ್ರಿಕಾ ಸ್ವಾತಂತ್ರ್ಯದ ಮೇಲೆ ಹಾನಿ ಮಾಡಿದೆ ಎಂದು ಆರೋಪಿಸುತ್ತಿದ್ದಾರೆ.

English summary
Karnataka Congress leader Dinesh Gundu Rao tweet on journalist Arnab Goswami arrest by Mumbai police.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X