ನವೆಂಬರ್ 1ರಿಂದ ಆರೋಗ್ಯ ಭಾಗ್ಯ ಯೋಜನೆ ಜಾರಿ

Posted By: Gururaj
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 15 : ಕರ್ನಾಟಕ ಸರ್ಕಾರ ನವೆಂಬರ್ 1ರಂದು ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೆ ತಲಿದೆ. ಎಪಿಎಲ್ ಮತ್ತು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಇದರಿಂದ ಸಹಾಯಕವಾಗಲಿದೆ.

ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಘೋಷಣೆ ಮಾಡಿದ್ದಾರೆ. 'ನವೆಂಬರ್ 1ರ ಕನ್ನಡ ರಾಜ್ಯೋತ್ಸವದ ದಿನದಂದು ಆರೋಗ್ಯ ಭಾಗ್ಯ ಯೋಜನೆಯನ್ನು ರಾಜ್ಯಾದ್ಯಂತ ಜಾರಿಗೆ ತರುವುದಾಗಿ' ಅವರು ಹೇಳಿದರು.

'ರಾಜೀವ್ ಆರೋಗ್ಯ ಭಾಗ್ಯ' ಯೋಜನೆ ಬಗ್ಗೆ ತಿಳಿಯಿರಿ

 Arogya Bhagya Scheme from November 1, 2017

'ಈ ಯೋಜನೆ ಅನ್ವಯ ಬಿಪಿಎಲ್ ಕಾರ್ಡ್ ಹೊಂದಿರುವವರು ಉಚಿತ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಕಡಿಮೆ ವೆಚ್ಚದಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ' ಎಂದು ಸಿದ್ದರಾಮಯ್ಯ ತಿಳಿಸಿದರು.

ಆರೋಗ್ಯ ಭಾಗ್ಯ ಕಾಪಾಡಿಕೊಳ್ಳಲು 6 ಸರಳ ಸೂತ್ರಗಳು

'ನಮ್ಮ ಸರ್ಕಾರ ಬಂದ ಮೇಲೆ 12 ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲಾಗಿದೆ. ಎಲ್ಲಾ 30 ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜು ಇರಬೇಕು. ಸಾಮಾನ್ಯ ಜನರ ಮಕ್ಕಳು ಉನ್ನತ ಶಿಕ್ಷಣ ಪಡೆಯಬೇಕು ಎಂಬುದು ನಮ್ಮ ಆಶಯ' ಎಂದರು.

ಕರ್ನಾಟಕ ಸರ್ಕಾರ ಎಪಿಎಲ್ ಪಡಿತರ ಕಾರ್ಡ್‌ ಹೊಂದಿರುವವರಿಗೆ ಆರೋಗ್ಯ ಸೇವೆ ಒದಗಿಸಲು ರಾಜೀವ್ ಆರೋಗ್ಯ ಭಾಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ವಾರ್ಷಿಕ ಒಂದೂವರೆ ಲಕ್ಷ ರೂ.ಗಳ ತನಕ ಯೋಜನೆಯಡಿ ಚಿಕಿತ್ಸೆ ಲಭ್ಯವಿದೆ.

ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ

2015ರ ಜನವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀವ್ ಆರೋಗ್ಯ ಭಾಗ್ಯ ಯೋಜನೆಗೆ ಚಾಲನೆ ನೀಡಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಎಪಿಎಲ್ ಕಾರ್ಡ್ ಪಡೆದವರು ಈ ಯೋಜನೆಯಡಿ ಸಿಗುವ ಸೌಲಭ್ಯವನ್ನು ಪಡೆಯಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka Chief Minister Siddaramaiah announced that Arogya Bhagya scheme will be implemented in state from November 1, 2017. Under the scheme BPL card holders to get free treatment.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ